AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Earthquake: ರಾಜಸ್ಥಾನದ ಬಿಕಾನೇರ್​ನಲ್ಲಿ ಕಂಪಿಸಿದ ಭೂಮಿ, 4.2 ತೀವ್ರತೆ ದಾಖಲು

ರಾಜಸ್ಥಾನದ ಬಿಕಾನೇರ್​ನಲ್ಲಿ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲಾಗಿದೆ.

Rajasthan Earthquake: ರಾಜಸ್ಥಾನದ ಬಿಕಾನೇರ್​ನಲ್ಲಿ ಕಂಪಿಸಿದ ಭೂಮಿ, 4.2 ತೀವ್ರತೆ ದಾಖಲು
ಭೂಕಂಪ
ನಯನಾ ರಾಜೀವ್
|

Updated on:Mar 26, 2023 | 7:52 AM

Share

ರಾಜಸ್ಥಾನದ ಬಿಕಾನೇರ್​ನಲ್ಲಿ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲಾಗಿದೆ. ಭಾನುವಾರ ಮುಂಜಾನೆ 2:16 ಕ್ಕೆ ರಾಜಸ್ಥಾನದ ಬಿಕಾನೇರ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಅಕ್ಕಪಕ್ಕದ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ (NCS) ಪ್ರಕಾರ, ಭೂಕಂಪದ ಕೇಂದ್ರಬಿಂದು ಬಿಕಾನೆರ್‌ನ ಪಶ್ಚಿಮಕ್ಕೆ 516 ಕಿಮೀ ದೂರದಲ್ಲಿದೆ ಮತ್ತು ಇದು 8 ಕಿಮೀ ಆಳದಲ್ಲಿ ಅಪ್ಪಳಿಸಿದೆ.

ಆದರೆ, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಸಂಭವಿಸಿದ 6.6 ತೀವ್ರತೆಯ ಭೂಕಂಪದ ನಂತರ ಪಾಕಿಸ್ತಾನದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ ಕೇವಲ ನಾಲ್ಕು ದಿನಗಳ ನಂತರ ಪಶ್ಚಿಮ ಭಾರತದಲ್ಲಿ ಕಂಪನಗಳು ಸಂಭವಿಸಿವೆ.

ಉತ್ತರ ಭಾರತದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಜುರ್ಮ್ನಲ್ಲಿ 180 ಕಿಲೋಮೀಟರ್ ಆಳದಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:47 am, Sun, 26 March 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ