ರಾಜಸ್ಥಾನದ ಬಿಕಾನೇರ್‌ನಲ್ಲಿ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.2 ರಷ್ಟು ತೀವ್ರತೆ ದಾಖಲಾಗಿದೆ. ಭಾನುವಾರ ಮುಂಜಾನೆ 2:16 ಕ್ಕೆ ರಾಜಸ್ಥಾನದ ಬಿಕಾನೇರ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಅಕ್ಕಪಕ್ಕದ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ (NCS) ಪ್ರಕಾರ, ಭೂಕಂಪದ ಕೇಂದ್ರಬಿಂದು ಬಿಕಾನೆರ್‌ನ ಪಶ್ಚಿಮಕ್ಕೆ 516 ಕಿಮೀ ದೂರದಲ್ಲಿದೆ ಮತ್ತು ಇದು 8 ಕಿಮೀ ಆಳದಲ್ಲಿ ಅಪ್ಪಳಿಸಿದೆ.
ಆದರೆ, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಸಂಭವಿಸಿದ 6.6 ತೀವ್ರತೆಯ ಭೂಕಂಪದ ನಂತರ ಪಾಕಿಸ್ತಾನದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ ಕೇವಲ ನಾಲ್ಕು ದಿನಗಳ ನಂತರ ಪಶ್ಚಿಮ ಭಾರತದಲ್ಲಿ ಕಂಪನಗಳು ಸಂಭವಿಸಿವೆ.
ಉತ್ತರ ಭಾರತದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಜುರ್ಮ್ನಲ್ಲಿ 180 ಕಿಲೋಮೀಟರ್ ಆಳದಲ್ಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:47 am, Sun, 26 March 23