ರಾಜಸ್ಥಾನ ಚುನಾವಣೆ: ತಾಲಿಬಾನ್‌ ಅಂತ್ಯಕ್ಕೆ ಬಜರಂಗ ಬಲಿಯ ಗದೆಯೇ ಪರಿಹಾರ, ಕಾಂಗ್ರೆಸ್​​​​ನ್ನು ಕುಟುಕಿದ ಯೋಗಿ

ರಾಜಸ್ಥಾನದ ಅಲ್ವಾರ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಸ್ರೇಲ್-ಹಮಾಸ್ ಯುದ್ಧ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಹೋರಾಟದ ನಡುವೆ ಸಮಾನಾಂತರವಾಗಿದೆ ಎಂದು ಹೇಳಿದ್ದಾರೆ. ಗಾಜಾದಲ್ಲಿ ಇಸ್ರೇಲ್​​​​​ ಹಮಾಸ್​​​ ಮನಸ್ಥಿತಿಯ್ನು ಹೇಗೆ ಹತ್ತಿಕ್ಕಲಾಗುತ್ತಿದೆ ಎಂಬುದನ್ನು ನೀವು ನೋಡುತ್ತೀರಾ. ಇದರ ಹಿಂದೆ ಗಾಜಾ ಜನರು ಮಾಡಿದ ತಪ್ಪು ಇದೆ. ಅವರು ಹಮಾಸ್​​ ಎಂಬ ಉಗ್ರ ಸಂಘಟನೆಯನ್ನು ಗೆಲ್ಲಿಸಿದಕ್ಕೆ ಈ ಪರಿಸ್ಥಿತಿ ಬಂದಿದೆ. ಇನ್ನು ಇದಕ್ಕೆ ಬಜರಂಗ ಬಲಿಯ ಗದೆಯೇ ಪರಿಹಾರ ಎಂದು ಹೇಳಿದ್ದಾರೆ. ಇನ್ನು ಈ ತಪ್ಪುವನ್ನು ನೀವು ಮಾಡಬೇಡಿ ಎಂದು ಕಾಂಗ್ರೆಸ್​​ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ರಾಜಸ್ಥಾನ ಚುನಾವಣೆ: ತಾಲಿಬಾನ್‌ ಅಂತ್ಯಕ್ಕೆ ಬಜರಂಗ ಬಲಿಯ ಗದೆಯೇ ಪರಿಹಾರ, ಕಾಂಗ್ರೆಸ್​​​​ನ್ನು ಕುಟುಕಿದ ಯೋಗಿ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 02, 2023 | 12:57 PM

ಪಂಚ ರಾಜ್ಯಗಳ ಚುನಾವಣೆ ಘೋಷಣೆಯಾಗಿದ್ದು, ರಾಷ್ಟ್ರೀಯ ಪಕ್ಷಗಳ ಪ್ರಚಾರ ಶುರುವಾಗಿದೆ. ಇದರಲ್ಲಿ ರಾಜಸ್ಥಾನದ ಚುನಾವಣೆ (rajasthan election) ಭಾರೀ ಗಮನಿಯವಾಗಿದೆ. ರಾಜಸ್ಥಾನದ ಬಿಜೆಪಿ ಪರ ಪ್ರಚಾರ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (yogi adityanath) ಹೋಗಿದ್ದರು. ರಾಜಸ್ಥಾನದ ಅಲ್ವಾರ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಇಸ್ರೇಲ್-ಹಮಾಸ್ ಯುದ್ಧ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಹೋರಾಟದ ನಡುವೆ ಸಮಾನಾಂತರವಾಗಿದೆ ಎಂದು ಹೇಳಿದ್ದಾರೆ. ಗಾಜಾದಲ್ಲಿ ಇಸ್ರೇಲ್​​​​​ ಹಮಾಸ್​​​ ಮನಸ್ಥಿತಿಯ್ನು ಹೇಗೆ ಹತ್ತಿಕ್ಕಲಾಗುತ್ತಿದೆ ಎಂಬುದನ್ನು ನೀವು ನೋಡುತ್ತೀರಾ. ಇದರ ಹಿಂದೆ ಗಾಜಾ ಜನರು ಮಾಡಿದ ತಪ್ಪು ಇದೆ. ಅವರು ಹಮಾಸ್​​ ಎಂಬ ಉಗ್ರ ಸಂಘಟನೆಯನ್ನು ಗೆಲ್ಲಿಸಿದಕ್ಕೆ ಈ ಪರಿಸ್ಥಿತಿ ಬಂದಿದೆ. ಇನ್ನು ಇದಕ್ಕೆ ಬಜರಂಗ ಬಲಿಯ ಗದೆಯೇ ಪರಿಹಾರ ಎಂದು ಹೇಳಿದ್ದಾರೆ. ಇನ್ನು ಈ ತಪ್ಪುವನ್ನು ನೀವು ಮಾಡಬೇಡಿ ಎಂದು ಕಾಂಗ್ರೆಸ್​​ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇನ್ನು ಕಾಂಗ್ರೆಸ್​​ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ “ಅರಾಜಕತೆ, ಗೂಂಡಾಗಿರಿ ಮತ್ತು ಭಯೋತ್ಪಾದನೆ ಸಮಾಜಕ್ಕೆ ಶಾಪವಾಗಿದೆ, ಸುಸಂಸ್ಕೃತ ಸಮಾಜದ ಮೇಲೆ ರಾಜಕೀಯ ದಾಳಿಗಳು ನಡೆದಾಗ ಸುಸಂಸ್ಕೃತ ಸಮಾಜದ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡುತ್ತದೆ ಎಂದು ಹೇಳಿದರು. ಇನ್ನು ಕಾಂಗ್ರೆಸ್​​ ಮಾಡಿದ ತಪ್ಪುಗ ಬಗ್ಗೆ ಮಾತನಾಡಿದ ಯೋಗಿ “ಸರ್ದಾರ್ ಪಟೇಲ್ ಅವರು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿಸಿದರು. ಆದರೆ ಕಾಂಗ್ರೆಸ್​​​ ನಾಯಕ ನೆಹರು ಅವರು ಅದೊಂದು ದೊಡ್ಡ ಸಮಸ್ಯೆ ಎಂದು ಬಿಂಬಿಸಿದರು. ಇದೀಗ ಅಲ್ಲಿ ಭಯೋತ್ಪಾದನೆ ಎಂದು ದೊಡ್ಡ ಭೂತ ಸೃಷ್ಟಿಯಾಗಿದೆ. ಇದೀಗ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್​ ಶಾ ಅವರು ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: 5 ವರ್ಷದಲ್ಲಿ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಲು ಯೋಗಿ ಪಣ, ಸಲಹೆಗಾರರ ನೇಮಕಕ್ಕೆ ಬಿಡ್ ಕರೆದ ಉತ್ತರ ಪ್ರದೇಶ ಸರ್ಕಾರ!

ಇನ್ನು ರಾಜಸ್ಥಾನದಲ್ಲಿ ಮಹಿಳೆಯ ಮೇಲಿ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ರಾಜಸ್ಥಾನ ಸರ್ಕಾರವನ್ನು ತರಟೆಗೆ ತೆಗೆದುಕೊಂಡಿದ್ದಾರೆ. ಒಂದು ವೇಳೆ ಮತ್ತೆ ಕಾಂಗ್ರೆಸ್​​ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಬಂದರೆ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗುತ್ತಾರೆ ಎಂಬುದನ್ನು ನೆನಪಿಡಿ. ತಾಲಿಬಾನ್​​​​ ಮನಸ್ಥಿತಿಯ ಕಾಂಗ್ರೆಸ್​​​ ಅಧಿಕಾರಿಕ್ಕೆ ಬರಬಾರದು. ರಾಜಸ್ಥಾನ ಸರ್ಕಾರದ ಆಡಳಿತದಿಂದ ಮಹಿಳೆಯರು ಮತ್ತು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಜನರು ಬದಲಾವಣೆ ಬಬಯಸಿದ್ದರೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಎಂದು ಪ್ರಧಾನಿ ಮೋದಿ ಅವರು ಈ ಹಿಂದೆ ಹೇಳಿದರು ಎಂದು ಯೋಗಿ ಆದಿತ್ಯನಾಥ್​​​ ಪ್ರಚಾರದ ವೇಳೆ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:57 pm, Thu, 2 November 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್