AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಉತ್ತರ ಹೇಳಿಕೊಟ್ಟ ಸೂಪರ್​ವೈಸರ್: ರಾಜಸ್ಥಾನ ಕಾಲೇಜಿನಲ್ಲಿ ಮಾಸ್ ಕಾಪಿ

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಡೆದ ಬಿಎ ಪರೀಕ್ಷೆಯಲ್ಲಿ ಸೂಪರ್‌ವೈಸರ್ ವಿದ್ಯಾರ್ಥಿಗಳಿಗೆ ಉತ್ತರಗಳನ್ನು ಹೇಳಿಕೊಡುತ್ತಿದ್ದಾಗ ವಿಶ್ವವಿದ್ಯಾಲಯದ ಫ್ಲೈಯಿಂಗ್ ಸ್ಕ್ವಾಡ್ ರೆಡ್‌ಹ್ಯಾಂಡ್ ಆಗಿ ಹಿಡಿದಿದೆ. ಸಾಮೂಹಿಕ ನಕಲು ದೃಢಪಟ್ಟ ನಂತರ 93 ಉತ್ತರ ಪತ್ರಿಕೆಗಳನ್ನು ಸೀಲ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ 3 ವರ್ಷ ನಿಷೇಧದ ಭೀತಿಯಿದೆ. ಪರೀಕ್ಷಾ ಅಕ್ರಮಗಳ ತಡೆಗೆ ಸರ್ಕಾರ ಹೊಸ ಕಾನೂನು ಜಾರಿಗೊಳಿಸಿದೆ.

ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಉತ್ತರ ಹೇಳಿಕೊಟ್ಟ ಸೂಪರ್​ವೈಸರ್: ರಾಜಸ್ಥಾನ ಕಾಲೇಜಿನಲ್ಲಿ ಮಾಸ್ ಕಾಪಿ
ಪರೀಕ್ಷೆ
ನಯನಾ ರಾಜೀವ್
|

Updated on: Jul 23, 2026 | 12:13 PM

Share

ಜೈಸಲ್ಮೇರ್,ಜುಲೈ 23: ದೇಶಾದ್ಯಂತ ಪರೀಕ್ಷಾ ಅಕ್ರಮಗಳ ಸರಣಿ ವಿವಾದ ನಡೆಯುತ್ತಿರುವ ಬೆನ್ನಲ್ಲೇ, ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಪರೀಕ್ಷಾ(Exam) ಅಕ್ರಮದ ಘಟನೆಯೊಂದು ಬೆಳಕಿಗೆ ಬಂದಿದೆ. ಬಿಎ (BA) ದ್ವಿತೀಯ ವರ್ಷದ ಪರೀಕ್ಷೆ ನಡೆಯುತ್ತಿದ್ದಾಗ, ಪರೀಕ್ಷಾ ಮೇಲ್ವಿಚಾರಕರೇ ವಿದ್ಯಾರ್ಥಿಗಳಿಗೆ ಉತ್ತರಗಳನ್ನು ಜೋರಾಗಿ ಹೇಳಿಕೊಡುತ್ತಿದ್ದುದನ್ನು ವಿಶ್ವವಿದ್ಯಾಲಯದ ಫ್ಲೈಯಿಂಗ್ ಸ್ಕ್ವಾಡ್ ರೆಡ್‌ಹ್ಯಾಂಡ್‌ ಆಗಿ ಹಿಡಿದಿದೆ. ಘಟನೆಗೆ ಸಂಬಂಧಿಸಿದಂತೆ ಜೋಧ್‌ಪುರದ ಜೈ ನಾರಾಯಣ್ ವ್ಯಾಸ್ ವಿಶ್ವವಿದ್ಯಾಲಯ ಅಧಿಕಾರಿಗಳು ಪರೀಕ್ಷಾ ಹಾಲ್‌ನಲ್ಲಿದ್ದ ಎಲ್ಲಾ 93 ಉತ್ತರ ಪತ್ರಿಕೆಗಳನ್ನು ಸೀಲ್ ಮಾಡಿದ್ದು, ‘ಸಾಮೂಹಿಕ ನಕಲು’ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪರೀಕ್ಷಾ ಹಾಲ್‌ನಲ್ಲಿ ನಡೆದಿದ್ದೇನು? ಜೈಸಲ್ಮೇರ್‌ನ ಕಜೋಯ್ ಗ್ರಾಮದಲ್ಲಿರುವ ‘ಶ್ರೀ ಕರ್ಣಿ ಕಾಲೇಜಿ’ನಲ್ಲಿ ಬೆಳಗ್ಗೆ 7 ರಿಂದ 10 ಗಂಟೆಯವರೆಗೆ ಬಿಎ ದ್ವಿತೀಯ ವರ್ಷದ ‘ಹಿಂದಿ ಸಾಹಿತ್ಯ’ ಪರೀಕ್ಷೆ ನಡೆಯುತ್ತಿತ್ತು. ಪ್ರೊ. ಅಮನ್ ಸಿಂಗ್ ನೇತೃತ್ವದ ಜೆಎನ್‌ವಿಯು ಫ್ಲೈಯಿಂಗ್ ಸ್ಕ್ವಾಡ್ ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿತು. ಜೈ ಕರಣ್ ಮತ್ತು ಓಂ ಪ್ರಕಾಶ್ ಎಂಬ ಇಬ್ಬರು ಮೇಲ್ವಿಚಾರಕರು ಪರೀಕ್ಷಾ ಹಾಲ್‌ನಲ್ಲಿ ನಿಂತು ವಿದ್ಯಾರ್ಥಿಗಳಿಗೆ ಉತ್ತರಗಳನ್ನು ಜೋರಾಗಿ ಓದಿ ಹೇಳಿಕೊಡುತ್ತಿದ್ದುದ್ದು ಕಂಡುಬಂತು.

ಫ್ಲೈಯಿಂಗ್ ಸ್ಕ್ವಾಡ್ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಿದಾಗ ಬಹುತೇಕ ಎಲ್ಲಾ ವಿದ್ಯಾರ್ಥಿಗಳ ಉತ್ತರಗಳು ಅಕ್ಷರಶಃ ಒಂದೇ ರೀತಿ ಇರುವುದು ದೃಢಪಟ್ಟಿತು. ಘಟನೆ ನಡೆದ ಕೂಡಲೇ ಕಾಲೇಜಿನ ಸಿಸಿಟಿವಿ (CCTV)ಯನ್ನು ಪರೀಕ್ಷಿಸಲಾಗಿತ್ತು ಮೇಲ್ವಿಚಾರಕರು ಅಭ್ಯರ್ಥಿಗಳಿಗೆ ಉತ್ತರ ಡಿಕ್ಟೇಟ್ ಮಾಡುತ್ತಿರುವುದು ಸಿಸಿಟಿವಿ ಕೆಮೆರಾದಲ್ಲೂ ಸ್ಪಷ್ಟವಾಗಿ ಸೆರೆಯಾಗಿದೆ.

ಹೊಸ ಉತ್ತರ ಪತ್ರಿಕೆ ವಿತರಣೆ: ತಕ್ಷಣವೇ 93 ಉತ್ತರ ಪತ್ರಿಕೆಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಹೊಸ ಉತ್ತರ ಪತ್ರಿಕೆಗಳನ್ನು ನೀಡಿ ಪರೀಕ್ಷೆ ಮುಂದುವರಿಸಲು ಅವಕಾಶ ಮಾಡಿಕೊಟ್ಟರು.

ಮತ್ತಷ್ಟು ಓದಿ: ‘ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್​ನಲ್ಲಿ ವಿವರವಾದ ಚರ್ಚೆಗೆ ಸರ್ಕಾರ ಸಿದ್ಧ’; ಜೆ.ಪಿ ನಡ್ಡಾ ಭರವಸೆ

ವಿದ್ಯಾರ್ಥಿಗಳಿಗೆ 3 ವರ್ಷ ನಿಷೇಧ ಭೀತಿ: ಅಕ್ರಮ ಎಸಗಿದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ನಿಯಮಾವಳಿಗಳ ಪ್ರಕಾರ 1 ರಿಂದ 3 ವರ್ಷಗಳ ಕಾಲ ಯಾವುದೇ ಪರೀಕ್ಷೆ ಬರೆಯದಂತೆ ನಿಷೇಧ ಹೇರುವ ಸಾಧ್ಯತೆಯಿದೆ ಎಂದು ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಶ್ಯಾಮ್ ಸುಂದರ್ ಮೀನಾ ತಿಳಿಸಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ ಶಿಕ್ಷಕರು ಹಾಗೂ ಕಾಲೇಜು ಮಂಡಳಿ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪವನ್ ಕುಮಾರ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ವಿಡಿಯೋ

ಜೈಸಲ್ಮೇರ್ ಮತ್ತು ನೆರೆಯ ಬಾರ್ಮರ್ ಜಿಲ್ಲೆಯಾದ್ಯಂತ ಫ್ಲೈಯಿಂಗ್ ಸ್ಕ್ವಾಡ್ ಸರಣಿ ತಪಾಸಣೆ ನಡೆಸಿದ್ದು, ಶಿವ್ ಎಂಬಲ್ಲಿನ ಮತ್ತೊಂದು ಪರೀಕ್ಷಾ ಕೇಂದ್ರದಲ್ಲೂ ವಂಚನೆ ಪ್ರಕರಣ ವರದಿಯಾಗಿದೆ. ರಾಜಸ್ಥಾನದಲ್ಲಿ ಸರಣಿ ಪೇಪರ್ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ‘ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ಕಾಯಿದೆ’ಯಡಿ ಕಠಿಣ ಶಿಕ್ಷೆ ಮತ್ತು ಜೈಲು ಶಿಕ್ಷೆಯ ನಿಯಮಗಳನ್ನು ಜಾರಿಗೆ ತಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು