AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ಹೂತುಹಾಕಿದ್ದ 5 ಲಕ್ಷ ರೂ. ನೋಟುಗಳನ್ನು ತಿಂದ ಗೆದ್ದಲು: ಮರೆವಿನಿಂದ ರೈತನಿಗೆ ಎದುರಾಯ್ತು ಬಹುದೊಡ್ಡ ಸಂಕಷ್ಟ

ರಾಜಸ್ಥಾನದ ಬಾಲೋತ್ರಾದಲ್ಲಿ ರೈತರೊಬ್ಬರು ಮನೆಯವರಿಗೆ ತಿಳಿಯದಂತೆ 5 ಲಕ್ಷ ರೂ. ಹಣವನ್ನು ಜಮೀನಿನಲ್ಲಿ ಹೂತುಹಾಕಿದ್ದರು. ಹಣದ ಅವಶ್ಯಕತೆ ಬಿದ್ದಾಗ, ಗೆದ್ದಲುಗಳು ಆ ಹಣವನ್ನು ಸಂಪೂರ್ಣವಾಗಿ ನಾಶಪಡಿಸಿದ್ದವು. ಹಾಳಾದ ನೋಟುಗಳನ್ನು ಬ್ಯಾಂಕುಗಳು ಸ್ವೀಕರಿಸಲು ನಿರಾಕರಿಸಿದವು. ಬಡತನದಲ್ಲಿರುವ ರೈತ ಕುಟುಂಬಕ್ಕೆ ಜೈಪುರಕ್ಕೆ ಹೋಗಿ ಆರ್‌ಬಿಐನಲ್ಲಿ ಪರಿಶೀಲಿಸಲು ಹಣವಿಲ್ಲದೆ ಸಂಕಷ್ಟ ಎದುರಾಗಿದೆ.

ಜಮೀನಿನಲ್ಲಿ ಹೂತುಹಾಕಿದ್ದ 5 ಲಕ್ಷ ರೂ. ನೋಟುಗಳನ್ನು ತಿಂದ ಗೆದ್ದಲು: ಮರೆವಿನಿಂದ ರೈತನಿಗೆ ಎದುರಾಯ್ತು ಬಹುದೊಡ್ಡ ಸಂಕಷ್ಟ
ಗೆದ್ದಲು ತಿಂದ ಹಣ
ಅಕ್ಷಯ್​ ಪಲ್ಲಮಜಲು​​
|

Updated on: Aug 10, 2026 | 11:22 AM

Share

ರಾಜಸ್ಥಾನ, ಆ.10 : ಮನೆಯವರಿಗೆ ತಿಳಿಸದೆ, ಕಷ್ಟಪಟ್ಟು ಸಂಪಾದಿಸಿದ 5 ಲಕ್ಷ ರೂಪಾಯಿ ಹಣವನ್ನು ಜಮೀನಿನಲ್ಲಿ ಹೂತುಹಾಕಿದ್ದ ರೈತನೊಬ್ಬನಿಗೆ ಈಗ ಭಾರೀ ಆಘಾತ ಎದುರಾಗಿದೆ. ಜಮೀನಿನ ಅಡಿಯಲ್ಲಿ ಮುಚ್ಚಿಟ್ಟಿದ್ದ ಸಂಪೂರ್ಣ ಹಣವನ್ನು ಗೆದ್ದಲುಗಳು ತಿಂದಿದ್ದು (Termites), ಹಣವೆಲ್ಲ ಸಂಪೂರ್ಣ ಹಾಳಾಗಿ ಹೋಗಿದೆ. ರಾಜಸ್ಥಾನದ ಬಾಲೋತ್ರಾ ಜಿಲ್ಲೆಯ ಪಚಪದ್ರಾ ನಿವಾಸಿ ರಂಗು ಅಲಿಯಾಸ್ ಮಾಂಗಿಲಾಲ್ ಮೇಘವಾಲ್ ಎಂಬ ರೈತನ ಗದ್ದೆಯಲ್ಲಿ ನಡೆದಿದೆ.

ಜಮೀನಿನಲ್ಲಿ ಶೆಡ್ ನಿರ್ಮಿಸಲು ಮಾಂಗಿಲಾಲ್ 5 ಲಕ್ಷ ರೂಪಾಯಿ ನಗದನ್ನು ಕಾಯ್ದಿರಿಸಿದ್ದರು. ಮನೆಯಲ್ಲಿಟ್ಟರೆ ಕಳುವಾಗಬಹುದು ಅಥವಾ ಮನೆಯವರು ಖರ್ಚು ಮಾಡಬಹುದು ಎಂಬ ಭಯದಿಂದ, ಯಾರಿಗೂ ತಿಳಿಸದೆ ರಾತ್ರೋರಾತ್ರಿ ಪ್ಲಾಸ್ಟಿಕ್ ಚೀಲದಲ್ಲಿ ಹಣ ಸುತ್ತಿ ಜಮೀನಿನಲ್ಲಿ ಹೂತುಹಾಕಿದ್ದರು.

ಮಾಂಗಿಲಾಲ್ ಅವರಿಗೆ ಮರೆವಿನ ಕಾಯಿಲೆ ಇತ್ತು. ಹಣದ ಅಗತ್ಯ ಬಿದ್ದಾಗ, ಜಮೀನಿನಲ್ಲಿ ಎಲ್ಲಿ ಹೂತುಹಾಕಿದ್ದೇನೆ ಎಂಬುದನ್ನೇ ಅವರು ಮರೆತುಹೋದರು. 10 ಬಿಘಾ ಜಮೀನನ್ನು ಎಷ್ಟೇ ಅಗೆದು ಹುಡುಕಿದರೂ ಹಣ ಸಿಗಲಿಲ್ಲ. ನಂತರ ಕುಟುಂಬದವರಿಗೂ ವಿಷಯ ತಿಳಿಸಿ ಎಲ್ಲರೂ ಹುಡುಕಿದರೂ ಪತ್ತೆಯಾಗಲಿಲ್ಲ.

ಇಲ್ಲಿದೆ ನೋಡಿ ವಿಡಿಯೋ:

ಇತ್ತೀಚೆಗೆ ಮಳೆಗಾಲದ ಹಿನ್ನೆಲೆಯಲ್ಲಿ ಜಮೀನನ್ನು ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುವಾಗ ಪ್ಲಾಸ್ಟಿಕ್ ಚೀಲ ಮೇಲಕ್ಕೆ ಬಂದಿದೆ. ಮರುದಿನ ಬೆಳಿಗ್ಗೆ ಜಮೀನಿಗೆ ಹೋದಾಗ ಪ್ಲಾಸ್ಟಿಕ್ ಬ್ಯಾಗ್ ಸಿಕ್ಕಿದ್ದು, ಅದನ್ನು ತೆರೆದು ನೋಡಿದಾಗ ಒಳಗಿದ್ದ 5 ಲಕ್ಷ ರೂ. ಮೌಲ್ಯದ ನೋಟುಗಳನ್ನು ಗೆದ್ದಲುಗಳು ಸಂಪೂರ್ಣವಾಗಿ ತಿಂದಿರುವುದು ಕಂಡುಬಂದಿದೆ.

ಸಂಪೂರ್ಣ ಹಾಳಾಗಿದ್ದ ನೋಟುಗಳನ್ನು ತೆಗೆದುಕೊಂಡು ಕುಟುಂಬಸ್ಥರು ಪಚಪದ್ರಾ ಎಸ್‌ಬಿಐ (SBI) ಶಾಖೆಗೆ ಹಾಗೂ ನಂತರ ಬಾಲೋತ್ರಾದ ಮುಖ್ಯ ಶಾಖೆಗೆ ತೆರಳಿದರು. ಆದರೆ, ನೋಟುಗಳ ಸ್ಥಿತಿ ತೀರಾ ಕೆಟ್ಟದಾಗಿದ್ದರಿಂದ ಸ್ಥಳೀಯ ಬ್ಯಾಂಕ್‌ಗಳು ಅವುಗಳನ್ನು ಸ್ವೀಕರಿಸಲು ನಿರಾಕರಿಸಿವೆ.

ಇದನ್ನೂ ಓದಿ: 90ರ ದಶಕದ ಕರಾಳ ಕಾಶ್ಮೀರಿ ಉಗ್ರ ಇತಿಹಾಸ ಮರುಕಳಿಸುತ್ತಿದೆಯೇ? ಪಂಡಿತರಿಗೆ ಶುರುವಾಗಿವೆ ಉಗ್ರ ಬೆದರಿಕೆಗಳು

ಜೈಪುರದಲ್ಲಿರುವ ರಿಸರ್ವ್ ಬ್ಯಾಂಕ್ (RBI) ಅಥವಾ ಎಸ್‌ಬಿಐ ಮುಖ್ಯ ಕಚೇರಿಗೆ ತೆರಳಿದರೆ ಪರಿ ಪರಿಶೀಲನೆ ನಡೆಸಿ ಬದಲಾಯಿಸಿಕೊಳ್ಳಬಹುದು ಎಂದು ಬ್ಯಾಂಕ್ ಸಿಬ್ಬಂದಿ ಸಲಹೆ ನೀಡಿದ್ದಾರೆ. ಆದರೆ ತೀವ್ರ ಬಡತನದಲ್ಲಿರುವ ಕುಟುಂಬಕ್ಕೆ ಜೈಪುರಕ್ಕೆ ಪ್ರಯಾಣಿಸಲು ಸಾಲದ ಹಣವೂ ಇಲ್ಲದೆ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!