ರಾಜಸ್ಥಾನ: 700 ಅಡಿ ಆಳದ ಕೊಳವೆಬಾವಿಗೆ ಬಿದ್ದ ಮೂರು ವರ್ಷದ ಮಗು

ಮನೆಯ ಹೊರಗೆ ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣುಮಗು ಅಲ್ಲೇ ಇದ್ದ 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಚೇತನಾ ಎಂಬ ಮಗು ಆರಂಭದಲ್ಲಿ 15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು ಆದರೆ ನಂತರ ಮತ್ತಷ್ಟು ಕೆಳಗೆ ಜಾರಿದ್ದಳು. ರಕ್ಷಣಾ ತಂಡವು ಪೈಪ್ ಮೂಲಕ ಆಕೆಗೆ ಆಮ್ಲಜನಕವನ್ನು ಒದಗಿಸಿತು ಮತ್ತು ಆಕೆಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕ್ಯಾಮರಾವನ್ನು ಅಳವಡಿಸಿದ್ದಾರೆ. ಚೇತನಾಳ ಅಕ್ಕ ಕಾವ್ಯಾ ತಂಗಿ ಬಿದ್ದಿದ್ದನ್ನು ನೋಡಿ ತಕ್ಷಣವೇ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಕೂಡಲೇ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ರಾಜಸ್ಥಾನ: 700 ಅಡಿ ಆಳದ ಕೊಳವೆಬಾವಿಗೆ ಬಿದ್ದ ಮೂರು ವರ್ಷದ ಮಗು
ಮಗು
Follow us
ನಯನಾ ರಾಜೀವ್
|

Updated on: Dec 24, 2024 | 8:48 AM

ಮನೆಯ ಹೊರಗೆ ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣುಮಗು ಅಲ್ಲೇ ಇದ್ದ 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಚೇತನಾ ಎಂಬ ಮಗು ಆರಂಭದಲ್ಲಿ 15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು ಆದರೆ ನಂತರ ಮತ್ತಷ್ಟು ಕೆಳಗೆ ಜಾರಿದ್ದಳು.

ರಕ್ಷಣಾ ತಂಡವು ಪೈಪ್ ಮೂಲಕ ಆಕೆಗೆ ಆಮ್ಲಜನಕವನ್ನು ಒದಗಿಸಿತು ಮತ್ತು ಆಕೆಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕ್ಯಾಮರಾವನ್ನು ಅಳವಡಿಸಿದ್ದಾರೆ. ಚೇತನಾಳ ಅಕ್ಕ ಕಾವ್ಯಾ ತಂಗಿ ಬಿದ್ದಿದ್ದನ್ನು ನೋಡಿ ತಕ್ಷಣವೇ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಕೂಡಲೇ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳೀಯ ಆಡಳಿತದೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಜೆಸಿಬಿ ಯಂತ್ರದ ಸಹಾಯದಿಂದ ಬೋರ್‌ವೆಲ್‌ ಬಳಿ ಅಗೆಯುವ ಕಾರ್ಯ ಆರಂಭವಾಗಿದೆ. ಸಿಕ್ಕಿಬಿದ್ದ ಮಗುವಿಗೆ ಆಹಾರ ಪೂರೈಸುವ ಪ್ರಯತ್ನವೂ ನಡೆಯುತ್ತಿದೆ. ಘಟನೆ ವೇಳೆ ಕುಟುಂಬದ ಸದಸ್ಯರು ಮನೆಯೊಳಗಿದ್ದರು.

ಮತ್ತಷ್ಟು ಓದಿ: Video: 150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 5 ವರ್ಷದ ಬಾಲಕ

ಇಂಥದ್ದೇ ಮತ್ತೊಂದು ಘಟನೆ ನಡೆದಿತ್ತು ಬೋರ್​ವೆಲ್​ಗೆ ಬಿದ್ದ ಬಾಲಕ ಐದು ವರ್ಷದ ಬಾಲಕ ರಾಜಸ್ಥಾನದ ದೌಸಾದಲ್ಲಿ 150 ಅಡಿ ಆಳದ ಬೋರ್​ವೆಲ್​ನಲ್ಲಿ ಸಿಲುಕಿರುವ ಘಟನೆ ನಡೆದಿತ್ತು. ಕಲಿಖಾಡ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಆರ್ಯನ್ ಮೀನಾ ಎಂಬ ಮಗು ತನ್ನ ತಾಯಿಯೊಂದಿಗೆ ಹತ್ತಿರದ ಹೊಲಕ್ಕೆ ಹೋಗುತ್ತಿದ್ದಾಗ ಬೋರ್​ವೆಲ್​ಗೆ ಬಿದ್ದಿದೆ.

ಪೈಪ್ ಮೂಲಕ ಆಮ್ಲಜನಕವನ್ನು ಸರಬರಾಜು ಮಾಡಲಾಗುತ್ತಿತ್ತು ಆದರೆ ಕೊನೆಗೆ ಮಗುವನ್ನು ಸುರಕ್ಷಿತವಾಗಿ ಹೊರತೆಗೆಯಲಾಯಿತಾದರೂ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿತ್ತು. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಹ ಸಹಾಯಕ್ಕೆ ಬಂದಿದ್ದರು.

ದೌಸಾ ಜಿಲ್ಲಾಧಿಕಾರಿ ದೇವೇಂದ್ರ ಕುಮಾರ್ ಮತ್ತು ಶಾಸಕ ದೀನದಯಾಳ್ ಬರ್ವಾ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಸಹ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆಗಾಗಿ ಪೊಲೀಸರೊಂದಿಗೆ ಘಟನಾ ಸ್ಥಳಕ್ಕೆ ಬಂದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ