ರಾಜಸ್ಥಾನ: 700 ಅಡಿ ಆಳದ ಕೊಳವೆಬಾವಿಗೆ ಬಿದ್ದ ಮೂರು ವರ್ಷದ ಮಗು

ಮನೆಯ ಹೊರಗೆ ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣುಮಗು ಅಲ್ಲೇ ಇದ್ದ 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಚೇತನಾ ಎಂಬ ಮಗು ಆರಂಭದಲ್ಲಿ 15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು ಆದರೆ ನಂತರ ಮತ್ತಷ್ಟು ಕೆಳಗೆ ಜಾರಿದ್ದಳು. ರಕ್ಷಣಾ ತಂಡವು ಪೈಪ್ ಮೂಲಕ ಆಕೆಗೆ ಆಮ್ಲಜನಕವನ್ನು ಒದಗಿಸಿತು ಮತ್ತು ಆಕೆಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕ್ಯಾಮರಾವನ್ನು ಅಳವಡಿಸಿದ್ದಾರೆ. ಚೇತನಾಳ ಅಕ್ಕ ಕಾವ್ಯಾ ತಂಗಿ ಬಿದ್ದಿದ್ದನ್ನು ನೋಡಿ ತಕ್ಷಣವೇ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಕೂಡಲೇ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ರಾಜಸ್ಥಾನ: 700 ಅಡಿ ಆಳದ ಕೊಳವೆಬಾವಿಗೆ ಬಿದ್ದ ಮೂರು ವರ್ಷದ ಮಗು
ಮಗು

Updated on: Dec 24, 2024 | 8:48 AM

ಮನೆಯ ಹೊರಗೆ ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣುಮಗು ಅಲ್ಲೇ ಇದ್ದ 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಚೇತನಾ ಎಂಬ ಮಗು ಆರಂಭದಲ್ಲಿ 15 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು ಆದರೆ ನಂತರ ಮತ್ತಷ್ಟು ಕೆಳಗೆ ಜಾರಿದ್ದಳು.

ರಕ್ಷಣಾ ತಂಡವು ಪೈಪ್ ಮೂಲಕ ಆಕೆಗೆ ಆಮ್ಲಜನಕವನ್ನು ಒದಗಿಸಿತು ಮತ್ತು ಆಕೆಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕ್ಯಾಮರಾವನ್ನು ಅಳವಡಿಸಿದ್ದಾರೆ. ಚೇತನಾಳ ಅಕ್ಕ ಕಾವ್ಯಾ ತಂಗಿ ಬಿದ್ದಿದ್ದನ್ನು ನೋಡಿ ತಕ್ಷಣವೇ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಕೂಡಲೇ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳೀಯ ಆಡಳಿತದೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಜೆಸಿಬಿ ಯಂತ್ರದ ಸಹಾಯದಿಂದ ಬೋರ್‌ವೆಲ್‌ ಬಳಿ ಅಗೆಯುವ ಕಾರ್ಯ ಆರಂಭವಾಗಿದೆ. ಸಿಕ್ಕಿಬಿದ್ದ ಮಗುವಿಗೆ ಆಹಾರ ಪೂರೈಸುವ ಪ್ರಯತ್ನವೂ ನಡೆಯುತ್ತಿದೆ. ಘಟನೆ ವೇಳೆ ಕುಟುಂಬದ ಸದಸ್ಯರು ಮನೆಯೊಳಗಿದ್ದರು.

ಮತ್ತಷ್ಟು ಓದಿ: Video: 150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 5 ವರ್ಷದ ಬಾಲಕ

ಇಂಥದ್ದೇ ಮತ್ತೊಂದು ಘಟನೆ ನಡೆದಿತ್ತು
ಬೋರ್​ವೆಲ್​ಗೆ ಬಿದ್ದ ಬಾಲಕ
ಐದು ವರ್ಷದ ಬಾಲಕ ರಾಜಸ್ಥಾನದ ದೌಸಾದಲ್ಲಿ 150 ಅಡಿ ಆಳದ ಬೋರ್​ವೆಲ್​ನಲ್ಲಿ ಸಿಲುಕಿರುವ ಘಟನೆ ನಡೆದಿತ್ತು. ಕಲಿಖಾಡ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಆರ್ಯನ್ ಮೀನಾ ಎಂಬ ಮಗು ತನ್ನ ತಾಯಿಯೊಂದಿಗೆ ಹತ್ತಿರದ ಹೊಲಕ್ಕೆ ಹೋಗುತ್ತಿದ್ದಾಗ ಬೋರ್​ವೆಲ್​ಗೆ ಬಿದ್ದಿದೆ.

ಪೈಪ್ ಮೂಲಕ ಆಮ್ಲಜನಕವನ್ನು ಸರಬರಾಜು ಮಾಡಲಾಗುತ್ತಿತ್ತು ಆದರೆ ಕೊನೆಗೆ ಮಗುವನ್ನು ಸುರಕ್ಷಿತವಾಗಿ ಹೊರತೆಗೆಯಲಾಯಿತಾದರೂ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿತ್ತು. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಹ ಸಹಾಯಕ್ಕೆ ಬಂದಿದ್ದರು.

ದೌಸಾ ಜಿಲ್ಲಾಧಿಕಾರಿ ದೇವೇಂದ್ರ ಕುಮಾರ್ ಮತ್ತು ಶಾಸಕ ದೀನದಯಾಳ್ ಬರ್ವಾ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಸಹ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆಗಾಗಿ ಪೊಲೀಸರೊಂದಿಗೆ ಘಟನಾ ಸ್ಥಳಕ್ಕೆ ಬಂದಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us