ರಾಜಸ್ಥಾನ: ಇಟ್ಟಿಗೆ ಗೂಡಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ, ಅತ್ಯಾಚಾರ ಶಂಕೆ

14 ವರ್ಷದ ಬಾಲಕಿಯ ಸುಟ್ಟ ದೇಹವೊಂದು ರಾಜಸ್ಥಾನದ ಭಿಲ್ವಾರದ ಇಟ್ಟಿಗೆ ಗೂಡೊಂದರಲ್ಲಿ ಪತ್ತೆಯಾಗಿದೆ. ಇದೀಗ ಈ ಘಟನೆ ರಾಜಸ್ಥಾನ ರಾಜಕೀಯದಲ್ಲಿ ದೊಡ್ಡ ತಲ್ಲಣ ಸೃಷ್ಟಿಸಿದೆ.

ರಾಜಸ್ಥಾನ: ಇಟ್ಟಿಗೆ ಗೂಡಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ, ಅತ್ಯಾಚಾರ ಶಂಕೆ
ಸಾಂದರ್ಭಿಕ ಚಿತ್ರ Image Credit source: Unsplash
Follow us
ಅಕ್ಷಯ್​ ಪಲ್ಲಮಜಲು​​
|

Updated on: Aug 03, 2023 | 1:19 PM

ಜೈಪುರ್, ಆ.3: 14 ವರ್ಷದ ಬಾಲಕಿಯ ಸುಟ್ಟ ದೇಹವೊಂದು ರಾಜಸ್ಥಾನ (Rajasthan) ಭಿಲ್ವಾರದ ಇಟ್ಟಿಗೆ ಗೂಡೊಂದರಲ್ಲಿ ಪತ್ತೆಯಾಗಿದೆ. ಇದೀಗ ಈ ಘಟನೆ ರಾಜಸ್ಥಾನ ರಾಜಕೀಯದಲ್ಲಿ ದೊಡ್ಡ ತಲ್ಲಣ ಸೃಷ್ಟಿಸಿದೆ. ರಾಜಸ್ಥಾನ ವಿಧಾನ ಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಇಂತಹ ಘಟನೆಗಳು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರವಿದ್ದು, ಇಂತಹ ಘಟನೆಗಳಿಗೆ ಸರ್ಕಾರ ಯಾವುದೇ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಮತ್ತು ಆಕೆಯ ತಾಯಿ ಗುಡ್ದದ ಕಡೆ ಮೇಕೆಗಳನ್ನು ಮೇಯಿಸಲು ಬಂದಿದ್ದು, ಈ ಸಮಯದಲ್ಲಿ ಮಗಳು ತಾಯಿಯಿಂದ ಬೇರ್ಪಟ್ಟು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಾಯಿ ತಿಳಿಸಿದ್ದಾರೆ. ಆದರೆ ಇಂದು ಬೆಳಿಗ್ಗೆ ಬಾಲಕಿ ಭಿಲ್ವಾರದ ಇಟ್ಟಿ ಗೂಡಿನಲ್ಲಿ ಹೆಣವಾಗಿ ಪತ್ತೆಯಾಗಿದ್ದಾಳೆ. ನಾಪತ್ತೆಯಾದ ದಿನದಂದು ತಾಯಿ ಮನೆಗೆ ಬಂದು ಎಲ್ಲರಿಗೂ ಈ ವಿಚಾರವನ್ನು ತಿಳಿಸಿದ್ದಾರೆ. ಆಕೆಯ ಕುಟುಂಬ ಮತ್ತು ಗ್ರಾಮಸ್ಥರು ಎಲ್ಲರೂ ಸೇರಿ ಈ ಗುಡ್ಡದಲ್ಲಿ ಬುಧವಾರ ರಾತ್ರಿಯಿಂದ ಗುರುವಾರದವರೆಗೆ (ಇಂದು) ಹುಡುಕಾಟ ನಡೆಸಿದ್ದು, ಪೊಲೀಸರಿಗೂ ದೂರು ನೀಡಿದ್ದಾರೆ. ಆದರೆ ಪೊಲೀಸರ ಈ ಬಗ್ಗೆ ತಕ್ಷಣಕ್ಕೆ ಸ್ಪಂಧಿಸಿಲ್ಲ ಎಂದು ಹೇಳಿದ್ದಾರೆ. ಆದರೆ ಇಂದು (ಆ.3) ಮುಂಜಾನೆ ಮನೆಯ ಪಕ್ಕದಲ್ಲಿರುವ ಹೊಲದಲ್ಲಿರುವ ಇಟ್ಟಿಗೆ ಗೂಡಿನಲ್ಲಿ ಸುಟ್ಟ ದೇಹವೊಂದು ಪತ್ತೆಯಾಗಿದೆ.

ಇನ್ನು ಪೊಲೀಸರು ತಿಳಿಸಿರುವಂತೆ ಬಾಲಕಿಯನ್ನು ಸುಡುವ ಮುನ್ನ ಆಕೆಯ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಶಂಕಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ ಗ್ರಾಮಸ್ಥರು ಪೊಲೀಸರ ಕ್ರಮಕ್ಕೆ ಅಕ್ರೋಶ ವ್ಯಕ್ತಪಡಿಸಿದ್ದು, ನಮಗೆ ನ್ಯಾಯ ನೀಡಬೇಕು ಎಂದು ಪ್ರತಿಭಟನೆ ಮಾಡಿದ್ದಾರೆ. ನಾವು ದೂರು ನೀಡಿದ ಒಂದು ದಿನದ ನಂತರ ನಮ್ಮ ದೂರಿಗೆ ಸ್ಪಂದಿಸಿದ್ದಾರೆ. ಮಗಳು ನಾಪತ್ತೆಯಾಗಿದ್ದಾಳೆ, ಹುಡುಕಿಕೊಡಿ ಎಂದರೆ ಅವಳ ಗುರುತಿನ ಚೀಟಿ ನೀಡಿ, ಜನನ ಪ್ರಮಾಣ ಪತ್ರ ನೀಡಿ ಎಂದು ಬೇಜಾವಾಬ್ದಾರಿಯಿಂದ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಆರೋಪಗಳಿಗೆ ಕಾರಣವಾಗಿದೆ, ಬಿಜೆಪಿಯ ಮಾಜಿ ಸಚಿವರೊಬ್ಬರು ಘಟನಾ ಸ್ಥಳಕ್ಕೆ ಭೇಟಿ ನೀಡಿ. ಅಲ್ಲಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇಂತಹ ಅನೇಕ ಘಟನೆಗಳು ರಾಜಸ್ಥಾನದಲ್ಲಿ ನಡೆಯುತ್ತಿದೆ. ಜುಲೈ 14ರಂದು ನಡೆದ ಕೌರಳಿಯಲ್ಲಿ ಬಾಲಕಿಯ ಮೇಲೆ ಗುಂಡು ಹಾರಿಸಿ ಆಸಿಡ್ ಎರಚಿ ಬಾವಿಗೆ ಎಸೆದಿದ್ದರು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸರಿಯಾಗಿ ಕಾನೂನು ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಜೋಧ್‌ಪುರದಲ್ಲಿ ಜುಲೈ 19 ರಂದು ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಕೊಂದು ಅವರ ದೇಹಕ್ಕೆ ಬೆಂಕಿ ಹಚ್ಚಲಾಗಿತ್ತು ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 6 ತಿಂಗಳ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಈ ಟೀಕೆಗೆ ತಿರುಗೆಟು ನೀಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಅತಿ ಹೆಚ್ಚು ಕೊಲೆಗಳು ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕಣಗಳು ನಡೆಯುತ್ತಿವೆ ಎಂದು ಅಂಕಿಅಂಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ