AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೊಬ್ಬರ ಜತೆ  ಲಿವ್ ಇನ್ ಸಂಬಂಧದಲ್ಲಿರುವ ವಿವಾಹಿತ ಮಹಿಳೆಗೆ ರಕ್ಷಣೆ ನೀಡಿದರೆ ಅದು ಅಕ್ರಮ ಸಂಬಂಧವನ್ನು ಒಪ್ಪಿಕೊಂಡಂತೆ: ರಾಜಸ್ಥಾನ ಹೈಕೋರ್ಟ್

Rajasthan High Court: ಲಿವ್ ಇನ್ ರಿಲೇಷನ್ ಶಿಪ್ ನಲ್ಲಿರುವವರಿಗೆ ಭದ್ರತೆ ನೀಡುವಂತೆ ಪೊಲೀಸರಿಗೆ ನಿರ್ದೇಶಿಸುವುದು ಪರೋಕ್ಷವಾಗಿ ಇಂತಹ ಅಕ್ರಮ ಸಂಬಂಧಗಳಿಗೆ ನಮ್ಮ ಒಪ್ಪಿಗೆ ನೀಡಿದಂತೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಇನ್ನೊಬ್ಬರ ಜತೆ  ಲಿವ್ ಇನ್ ಸಂಬಂಧದಲ್ಲಿರುವ ವಿವಾಹಿತ ಮಹಿಳೆಗೆ ರಕ್ಷಣೆ ನೀಡಿದರೆ ಅದು ಅಕ್ರಮ ಸಂಬಂಧವನ್ನು ಒಪ್ಪಿಕೊಂಡಂತೆ: ರಾಜಸ್ಥಾನ ಹೈಕೋರ್ಟ್
ರಾಜಸ್ಥಾನ ಹೈಕೋರ್ಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 19, 2021 | 4:32 PM

Share

ಜೈಪುರ: ರಾಜಸ್ಥಾನ ಹೈಕೋರ್ಟ್ ಲಿವ್-ಇನ್ ಸಂಬಂಧದಲ್ಲಿರುವ ದಂಪತಿಗೆ ಪೊಲೀಸ್ ರಕ್ಷಣೆಯನ್ನು ನೀಡಲು ನಿರಾಕರಿಸಿದೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದರಿಂದ, ದಂಪತಿಗೆ ರಕ್ಷಣೆ ನೀಡುವುದು ಅಂತಹ ಅಕ್ರಮ ಸಂಬಂಧಗಳಿಗೆ ನ್ಯಾಯಾಲಯದ ಪರೋಕ್ಷವಾಗಿ ಒಪ್ಪಿಗೆಯನ್ನು ನೀಡಿದಂತೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇತ್ತೀಚಿಗೆ ಶ್ರೀಮತಿ ಅನಿತಾvs ಉತ್ತರ ಪ್ರದೇಶ ರಾಜ್ಯ ಸರ್ಕಾರ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ನ್ಯಾಯಮೂರ್ತಿ ಸತೀಶ್ ಕುಮಾರ್ ಶರ್ಮಾ ಅವರು ಎತ್ತಿ ಹಿಡಿದಿದ್ದಾರೆ. ಅನಿತಾ ವರ್ಸಸ್ ಯುಪಿ ಸರ್ಕಾರ ಪ್ರಕರಣದಲ್ಲಿನ ತೀರ್ಪು ಸರಿಯಾಗಿದ್ದು ಲಿವ್-ಇನ್ ಸಂಬಂಧವು ದೇಶದ ಸಾಮಾಜಿಕ ರಚನೆಗೆ ಅನ್ವಯವಾಗುವುದಿಲ್ಲ ಎಂದಿದ್ದಾರೆ. ಅಲಹಾಬಾದ್ ಹೈಕೋರ್ಟಿನ ವಿಭಾಗೀಯ ಪೀಠವು ಶ್ರೀಮತಿ ಅನಿತಾvs ಯುಪಿ  ವಿವರಿಸಿದಂತೆ ಇದು ಚೆನ್ನಾಗಿ  ಕಾನೂನು ನೆಲೆಸಿರುವ ಸ್ಥಾನವಾಗಿದೆ. ಉತ್ತರ ಪ್ರದೇಶ ಸರ್ಕಾರವು  ಲಿವ್-ಇನ್ ಸಂಬಂಧವು ಈ ದೇಶದ ಸಾಮಾಜಿಕ ರಚನೆಗೆ ಅನ್ವಯವಾಗುವುದಿಲ್ಲ ಎಂದಿತ್ತು . ಲಿವ್ ಇನ್ ರಿಲೇಷನ್ ಶಿಪ್ ನಲ್ಲಿರುವವರಿಗೆ ಭದ್ರತೆ ನೀಡುವಂತೆ ಪೊಲೀಸರಿಗೆ ನಿರ್ದೇಶಿಸುವುದು ಪರೋಕ್ಷವಾಗಿ ಇಂತಹ ಅಕ್ರಮ ಸಂಬಂಧಗಳಿಗೆ ನಮ್ಮ ಒಪ್ಪಿಗೆ ನೀಡಿದಂತೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಈ ವಿಷಯದಲ್ಲಿ ಅರ್ಜಿದಾರರಾದ ವಿವಾಹಿತ ಮಹಿಳೆ ತಾನು ವಿವಾಹವಾದ ಮನೆಯನ್ನು ಒತ್ತಾಯಪೂರ್ವಕ ತೊರೆದಿದ್ದು,ನಂತರ ಎರಡನೇ ಅರ್ಜಿದಾರರೊಂದಿಗೆ ವಾಸಿಸುತ್ತಿದ್ದರು.  ನಾನು ಇನ್ನೊಬ್ಬ ಪುರುಷನೊಂದಿಗೆ ವಾಸಿಸುತ್ತಿರುವುದು ಅವರಿಗೆ ಹಿಡಿಸುತ್ತಿಲ್ಲ , ಆದ್ದರಿಂದ ಪ್ರತಿವಾದಿಗಳು ನನಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಅರ್ಜಿದಾರರಾದ ಮಹಿಳೆ ಆರೋಪಿಸಿದ್ದಾರೆ.

ಆದ್ದರಿಂದ ತಮ್ಮ ಜೀವಕ್ಕೆ ಅಪಾಯವಿದೆ. ಹಾಗಾಗಿ ಪೊಲೀಸ್ ರಕ್ಷಣೆ ನೀಡಬೇಕೆಂದು ಅವರು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ರಕ್ಷಣೆ ನೀಡುವುದು ಕಾನೂನುಬಾಹಿರ ಸಂಬಂಧಗಳಿಗೆ ಒಪ್ಪಿಗೆ ನೀಡುವುದಕ್ಕೆ ಸಮಾನ ಎಂದು ಹೇಳಿದೆ. ಹಾಗಾಗಿ, ರಕ್ಷಣೆ ನೀಡುವ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಆದಾಗ್ಯೂ, ಅರ್ಜಿದಾರರೊಂದಿಗೆ ಯಾವುದೇ ಅಪರಾಧವು ಸಂಭವಿಸಿದಲ್ಲಿ ಅವರು ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲು ಅಥವಾ ಲಭ್ಯವಿರುವ ಕಾನೂನು ಪರಿಹಾರಗಳನ್ನು ಪಡೆಯಲು ಸ್ವತಂತ್ರರಾಗಿರುತ್ತಾರೆ ಎಂದು ಅದು ಹೇಳಿದೆ.

ಇತ್ತೀಚೆಗೆ, ಅಲಹಾಬಾದ್ ಹೈಕೋರ್ಟ್ ಲಿವ್-ಇನ್ ದಂಪತಿಗಳಿಗೆ ರಕ್ಷಣೆ ನಿರಾಕರಿಸಿದ್ದು, ಮಹಿಳೆ ಇನ್ನೊಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಹಾಗಾಗಿ ನ್ಯಾಯಾಲಯವು “ಕಾನೂನುಬಾಹಿರ” ಸಂಬಂಧಕ್ಕೆ ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: 10ನೇ ತರಗತಿ ಇಂಗ್ಲಿಷ್ ಪರೀಕ್ಷೆ ಬರೆದ ಹರ್ಯಾಣದ ಮಾಜಿ ಸಿಎಂ 86ರ ಹರೆಯದ ಓಂ ಪ್ರಕಾಶ್ ಚೌಟಾಲಾ

ಇದನ್ನೂ ಓದಿ:  Janardhan Reddy: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದ ಸುಪ್ರೀಂಕೋರ್ಟ್

(Rajasthan High Court has refused to extend police protection to a couple in a live-in relationship)

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ