Gajendra Singh Shekhawat: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಬಂಧನಕ್ಕೆ ರಾಜಸ್ಥಾನ ಹೈಕೋರ್ಟ್ ತಡೆಯಾಜ್ಞೆ

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಂಜೀವನಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೋರ್ಟ್ ಇಂದು ಮಧ್ಯಂತರ ರಿಲೀಫ್ ನೀಡಿದೆ ಮತ್ತು ಅವರ ಬಂಧನಕ್ಕೆ ತಡೆಯಾಜ್ಞೆ ನೀಡಿದೆ.

Gajendra Singh Shekhawat: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಬಂಧನಕ್ಕೆ ರಾಜಸ್ಥಾನ ಹೈಕೋರ್ಟ್ ತಡೆಯಾಜ್ಞೆ
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್
Follow us
|

Updated on:Apr 13, 2023 | 6:32 PM

ಜೋಧಪುರ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಬಂಧನಕ್ಕೆ ರಾಜಸ್ಥಾನ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಂಜೀವನಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೋರ್ಟ್ ಇಂದು ಮಧ್ಯಂತರ ರಿಲೀಫ್ ನೀಡಿದೆ ಮತ್ತು ಅವರ ಬಂಧನಕ್ಕೆ ತಡೆಯಾಜ್ಞೆ ನೀಡಿದೆ. ಸಚಿವ ಗಜೇಂದ್ರ ಸಿಂಗ್ ಶೇಖಾವತ್ 900 ಕೋಟಿಗೂ ಹೆಚ್ಚು ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಆರೋಪಿ ಎಂದು ನಮೂದಿಸದಿದ್ದರೂ ಸಚಿವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು. ಈಗಾಗಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ವಿಶೇಷ ಕಾರ್ಯಾಚರಣೆ ಗುಂಪು ಪ್ರಕರಣದ ಬಗ್ಗೆ ತನಿಖೆಯನ್ನು ನಡೆಸುತ್ತಿದೆ.

ನ್ಯಾಯಮೂರ್ತಿ ಕುಲದೀಪ್ ಮಾಥುರ್ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಿ ಬಂಧನಕ್ಕೆ ತಡೆಯಾಜ್ಞೆ ನೀಡಿದೆ. ಗಜೇಂದ್ರ ಸಿಂಗ್ ಶೇಖಾವತ್ ಅವರು ಮಾರ್ಚ್ 24ರಂದು ಪ್ರಕರಣದ ಎಫ್‌ಐಆರ್ ರದ್ದುಗೊಳಿಸುವಂತೆ ಮತ್ತು ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂಬ ಕಾರಣಕ್ಕಾಗಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ನಾವು ಕೋರಿದ್ದೇವೆ ಎಂದು ಅವರ ವಕೀಲ ಧೀರೇಂದ್ರ ಸಿಂಗ್ ದಾಸ್ಪನ್ ಹೇಳಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಕೇಂದ್ರ ಸರ್ಕಾರ ವಿರುದ್ಧ ಮತ್ತು ಈ ಪ್ರಕರಣದ ಬಗ್ಗೆ ಸಂಬಂಧಿಸಿದಂತೆ ನಿರಂತರ ವಾಗ್ದಾಳಿಯನ್ನು ನಡೆಸುತ್ತಿದ್ದರು, ಇದೀಗ ಈ ಪ್ರಕರಣದಲ್ಲಿ ಕೇಂದ್ರ ಸಚಿವರನ್ನು ಬಂಧನ ಮಾಡದಂತೆ ಹೈಕೋರ್ಟ್​​ ತಡೆಯಾಜ್ಞೆಯನ್ನು ನೀಡಿದೆ. ಈ ಬಗ್ಗೆ ಮಾತನಾಡಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೇಂದ್ರ ಸಚಿವರು ಮತ್ತು ಅವರ ಕುಟುಂಬ ಅಪಾರ ಹಣ ಸಂಗ್ರಹ ಮಾಡಿಕೊಂಡಿದೆ. ಆದಾಯದ ಹೆಸರಿನಲ್ಲಿ ಬ್ಯಾಂಕ್ ಠೇವಣಿದಾರರ ಹಣವನ್ನು ದುರುಪಯೋಗಪಡಿಸಿಕೊಳ್ಳುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮೇಕೆದಾಟು ವಿಚಾರವೂ ಮಾತುಕತೆ ಮೂಲಕ ಬಗೆಹರಿಯಲಿ: ಕೇಂದ್ರ ಜಲ‌ ಶಕ್ತಿ ಸಚಿವ ಶೇಖಾವತ್ ಆಶಯ, ಅಭಿಪ್ರಾಯ!

ಗಜೇಂದ್ರ ಸಿಂಗ್ ಶೇಖಾವತ್ ಅವರು ಗೆಹ್ಲೋಟ್ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ, ರಾಜಸ್ಥಾನದ ಮುಖ್ಯಮಂತ್ರಿಗಳು ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಅದು ಅವರ ಸ್ಥಾನಕ್ಕೆ ಸರಿಯಲ್ಲ ಎಂದು ಹೇಳಿದ್ದಾರೆ.

ಸಂಜೀವನಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ. ಅವರಿಗೆ ಕೇಂದ್ರ ಸಚಿವರಾಗಿ ಉಳಿಯುವ ನೈತಿಕ ಹಕ್ಕಿಲ್ಲ, ಅಂತಹ ಸಚಿವರನ್ನು ಪ್ರಧಾನಿ ವಜಾಗೊಳಿಸಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಜೈಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Published On - 6:32 pm, Thu, 13 April 23