ದೇವಸ್ಥಾನದ ಹುಂಡಿಯಲ್ಲಿದ್ದ ಹಣ, ಒಡವೆ ಕದಿಯುವ ಮುನ್ನ ದೇವರಲ್ಲಿ ಪ್ರಾರ್ಥನೆ ಮಾಡಿದ ಕಳ್ಳ
ವ್ಯಕ್ತಿಯೊಬ್ಬ ದೇವಸ್ಥಾನದ ಹುಂಡಿಯಲ್ಲಿರುವ ಹಣ, ಆಭರಣಗಳನ್ನು ಕಳ್ಳತನ ಮಾಡುವುದಕ್ಕೂ ಮುನ್ನ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದೇವಸ್ಥಾನದ ಹುಂಡಿಯಲ್ಲಿದ್ದ ಹಣ, ಒಡವೆಗಳನ್ನು ಕದಿಯುವ ಮುನ್ನ ಕಳ್ಳನೊಬ್ಬ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ಪೂಜೆ ಸಲ್ಲಿಸಿ ಹಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿಯನ್ನು ಗೋಪೇಶ್ ಶರ್ಮಾ (37) ಎಂದು ಗುರುತಿಸಲಾಗಿದೆ.
ಶನಿವಾರ ಬೆಳಗ್ಗೆ ತೆಗೆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಲ್ವಾರ್‌ನ ಆದರ್ಶ ನಗರ ಪ್ರದೇಶದ ದೇವಸ್ಥಾನದಲ್ಲಿ ಶರ್ಮಾ ಪ್ರಾರ್ಥನೆ ಸಲ್ಲಿಸಿ ಕೊನೆಗೆ ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾನೆ. ದೇವಸ್ಥಾನದ ಬೀಗ ಒಡೆದು ಬೆಳ್ಳಿ ಆಭರಣ, ಛತ್ರಿ, ಕಾಣಿಕೆ ಹುಂಡಿಯಲ್ಲಿದ್ದ ಹಣ ಮತ್ತಿತರ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.
ಅಲ್ವಾರ್‌ನ ಫ್ರೆಂಡ್ಸ್ ಕಾಲೋನಿಯಲ್ಲಿರುವ ಮತ್ತೊಂದು ದೇವಾಲಯದಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ, ಅಲ್ಲಿ ವ್ಯಕ್ತಿಯೊಬ್ಬರು ಪ್ರಾರ್ಥನೆ ಸಲ್ಲಿಸಿದ ನಂತರ ವಸ್ತುಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮತ್ತಷ್ಟು ಓದಿ: ದೇವರಿಗೆ ನಮಸ್ಕಾರ ಹಾಕಿ, ಪ್ಲಾಸ್ಟಿಕ್ ಕವರ್ನಲ್ಲಿ ಪ್ರಸಾದ ಹಾಕಿಕೊಳ್ಳುವಂತೆ ವಿಗ್ರಹ ಕದ್ದುಕೊಂಡು ಹೋದ!
ಕಳ್ಳತನದ ವೀಡಿಯೊ ವೈರಲ್ ಆದ ನಂತರ, ಸಿಸಿಟಿವಿ ದೃಶ್ಯಗಳಿಂದ ಗುರುತಿಸಿದ ನಂತರ ಪೊಲೀಸರು ಗೋಪೇಶ್ ಶರ್ಮಾನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಹಲವು ದೇವಸ್ಥಾನಗಳಲ್ಲಿ ಇದೇ ರೀತಿ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯ ಪೊಲೀಸರು ಆತನ ಹಳೆಯ ದಾಖಲೆಗಳಿಗಾಗಿ ಹುಡುಕಾಟ ನಡೆಸುತ್ತಿದ್ದು, ತನಿಖೆಯ ವೇಳೆ ಇತರ ಘಟನೆಗಳು ಸಹ ಬಹಿರಂಗಗೊಳ್ಳುವ ನಿರೀಕ್ಷೆಯಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:59 am, Mon, 18 March 24