AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಸಿಕಾರ್​ನಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ, 3 ದಿನಗಳಲ್ಲಿ ಎರಡನೇ ಸಾವು

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET)ಗೆ ತಯಾರಿ ನಡೆಸುತ್ತಿದ್ದ 18 ವರ್ಷದ ವಿದ್ಯಾರ್ಥಿ ರಾಜಸ್ಥಾನದ ಸಿಕಾರ್ ಜಿಲ್ಲೆಯ ಖಾಸಗಿ ಹಾಸ್ಟೆಲ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರಾಜಸ್ಥಾನ: ಸಿಕಾರ್​ನಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ, 3 ದಿನಗಳಲ್ಲಿ ಎರಡನೇ ಸಾವು
ವಿದ್ಯಾರ್ಥಿ ಸಾವು
ನಯನಾ ರಾಜೀವ್
|

Updated on: Oct 08, 2023 | 2:03 PM

Share

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET)ಗೆ ತಯಾರಿ ನಡೆಸುತ್ತಿದ್ದ 18 ವರ್ಷದ ವಿದ್ಯಾರ್ಥಿ ರಾಜಸ್ಥಾನದ ಸಿಕಾರ್ ಜಿಲ್ಲೆಯ ಖಾಸಗಿ ಹಾಸ್ಟೆಲ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಭರತ್‌ಪುರ ಜಿಲ್ಲೆಯ ನಾಡಬಾಯಿ ಪಟ್ಟಣದ ನಿವಾಸಿ ನಿತಿನ್ ಫೌಜ್ದಾರ್ ನೀಟ್‌ಗೆ ತಯಾರಿ ನಡೆಸಲು ಜೂನ್‌ನಲ್ಲಿ ಸಿಕಾರ್‌ಗೆ ಬಂದಿದ್ದರು. ಆತ ಕೋಚಿಂಗ್ ಸೆಂಟರ್‌ನಲ್ಲಿ ತಯಾರಿ ನಡೆಸುತ್ತಿದ್ದರು ಮತ್ತು ಶನಿವಾರ ತಮ್ಮ ತರಗತಿಯನ್ನು ಮುಗಿಸಿ ಹೋಗಿದ್ದ ಎಂದು ಉದ್ಯೋಗ್ ನಗರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಸುರೇಂದ್ರ ಡೆಗ್ರಾ ತಿಳಿಸಿದ್ದಾರೆ.

ಫೌಜ್‌ದಾರ್‌ನ ರೂಮ್‌ಮೇಟ್ ಕೋಣೆಯ ಒಳಗಿನಿಂದ ಚಿಲಕ ಹಾಕಿರುವುದನ್ನು ಕಂಡು, ಕಿಟಕಿ ತೆರೆದು ನೋಡಿದಾಗ ವಿದ್ಯಾರ್ಥಿಯ ದೇಹವು ಸೀಲಿಂಗ್ ಫ್ಯಾನ್‌ಗೆ ನೇತಾಡುತ್ತಿರುವುದು ಕಾಣಿಸಿತ್ತು ಎಂದು ಎಸ್‌ಎಚ್‌ಒ ಹೇಳಿದರು.

ಮತ್ತಷ್ಟು ಓದಿ: ರಾಜಸ್ಥಾನದ ಕೋಟದಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ, ವರ್ಷದಲ್ಲಿ 25ನೇ ಪ್ರಕರಣ

ಮೂರು ದಿನಗಳಲ್ಲಿ ಸಿಕಾರ್‌ನಲ್ಲಿ ನಡೆದ ಎರಡನೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಇದಾಗಿದೆ. ಸೆಪ್ಟೆಂಬರ್ 5 ರಂದು, 16 ವರ್ಷದ NEET ಆಕಾಂಕ್ಷಿ ಕೌಶಲ್ ಮೀನಾ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್