ರಾಜಸ್ಥಾನ: ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪಿಎಫ್​ಐನ ಇಬ್ಬರು ಸದಸ್ಯರನ್ನು ಬಂಧಿಸಿದ ಎನ್​ಐಎ

ಜೈಪುರ ಮತ್ತು ಕೋಟಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬಂಧಿಸಿದೆ, ಜೊತೆಗೆ ಪಿಎಫ್‌ಐನ ಇತರ ಮೂವರು ಕೂಡ ವಶಕ್ಕೆ ಪಡೆದಿದೆ.

ಎನ್​ಐಎImage Credit source: The Economic Times
Follow us
ನಯನಾ ರಾಜೀವ್
|

Updated on: Nov 03, 2023 | 7:21 PM

ಜೈಪುರ ಮತ್ತು ಕೋಟಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬಂಧಿಸಿದೆ, ಜೊತೆಗೆ ಪಿಎಫ್‌ಐನ ಇತರ ಮೂವರು ಕೂಡ ವಶಕ್ಕೆ ಪಡೆದಿದೆ.

ಎನ್‌ಐಎ ಪ್ರಕಾರ, ಬಂಧಿತರನ್ನು ವಾಜಿದ್ ಅಲಿ ಮತ್ತು ಮುಬಾರಿಕ್ ಅಲಿ ಎಂದು ಗುರುತಿಸಲಾಗಿದೆ, ಜೊತೆಗೆ ಪಿಎಫ್‌ಐನ ಇತರ ಮೂವರು ಸದಸ್ಯರಾದ ಮೊಹಮ್ಮದ್ ಆಸಿಫ್, ಸಾದಿಕ್ ಸರ್ರಾಫ್ ಮತ್ತು ಮೊಹಮ್ಮದ್ ಸೊಹೈಲ್​ನನ್ನು ಕೂಡ ವಶಕ್ಕೆ ಪಡೆದಿದೆ.

2047 ರ ವೇಳೆಗೆ ಭಾರತದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಗುರಿ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಕೇಂದ್ರ ಸರ್ಕಾರವನ್ನು ಹಿಂಸಾತ್ಮಕ ಕೃತ್ಯಗಳ ಮೂಲಕ ಉರುಳಿಸುವುದು ಅವರ ಗುರಿಯಾಗಿದೆ.

ಮತ್ತಷ್ಟು ಓದಿ: ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ

ರಾಜಸ್ಥಾನ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಮತ್ತು ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಮುಸ್ಲಿಂ ಯುವಕರನ್ನು ತೊಡಗಿಸಿಕೊಳ್ಳುವಲ್ಲಿ ಸಾದಿಕ್ ಸರ್ರಾಫ್ ಮತ್ತು ಮೊಹಮ್ಮದ್ ಆಸಿಫ್ ಭಾಗಿಯಾಗಿದ್ದಾರೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.

NIA ಪ್ರಕಾರ, PFI ಝಕಾತ್ (ಸಾಮಾಜಿಕ ಅಭಿವೃದ್ಧಿಗಾಗಿ ಒಂದು ರೀತಿಯ ದತ್ತಿ ನಿಧಿ) ಸೋಗಿನಲ್ಲಿ ಮುಸ್ಲಿಂ ಸಮುದಾಯದ ಸದಸ್ಯರಿಂದ ಹಣವನ್ನು ಸಂಗ್ರಹಿಸಿದೆ ಆದರೆ ಶಸ್ತ್ರಾಸ್ತ್ರ ತರಬೇತುದಾರರನ್ನು ಬೆಂಬಲಿಸಲು ಮತ್ತು ತರಬೇತಿ ಶಿಬಿರಗಳನ್ನು ಆಯೋಜಿಸುತ್ತದೆ. PFI ಅನ್ನು ಕೇಂದ್ರ ಸರ್ಕಾರವು ಸೆಪ್ಟೆಂಬರ್ 2022 ರಲ್ಲಿ ನಿಷೇಧಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ