Rajasthan Politics: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮಲ್ಲಿಕಾರ್ಜನ ಖರ್ಗೆ ವರದಿ; ಹೈಕಮಾಂಡ್​​ಗೆ ಸೆಡ್ಡು ಹೊಡೆದ ಅಶೋಕ್ ಗೆಹ್ಲೋಟ್ ಬೆಂಬಲಿಗರಿಗೆ ನೊಟೀಸ್ ಸಾಧ್ಯತೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 27, 2022 | 7:14 AM

ರಾಜಸ್ಥಾನದ ರಾಜಕೀಯ ಬೆಳವಣಿಗೆಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವದ್ರಾ ಮತ್ತು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮಾಲೋಚನೆ ನಡೆಸಿದರು.

Rajasthan Politics: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮಲ್ಲಿಕಾರ್ಜನ ಖರ್ಗೆ ವರದಿ; ಹೈಕಮಾಂಡ್​​ಗೆ ಸೆಡ್ಡು ಹೊಡೆದ ಅಶೋಕ್ ಗೆಹ್ಲೋಟ್ ಬೆಂಬಲಿಗರಿಗೆ ನೊಟೀಸ್ ಸಾಧ್ಯತೆ
ಅಶೋಕ್ ಗೆಹ್ಲೋಟ್- ಸೋನಿಯಾ ಗಾಂಧಿ
Follow us on

ದೆಹಲಿ: ರಾಜಸ್ಥಾನದ ರಾಜಕೀಯ ಬೆಳವಣಿಗೆ (Rajasthan Political Developments) ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಜೈಪುರದಿಂದ ಹಿಂದಿರುಗಿರುವ ವೀಕ್ಷಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ವರದಿ ಸಲ್ಲಿಸಿದ್ದಾರೆ. ವೀಕ್ಷಕರ ತಂಡವು ರಾಜಸ್ಥಾನದ ಬೆಳವಣಿಗೆಗಳ ಬಗ್ಗೆ ವಿವರಿಸುವಾಗ ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್ ಸಹ ಉಪಸ್ಥಿತರಿದ್ದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗುವವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳಲು ಕಾಂಗ್ರೆಸ್​ ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ. ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡಿರುವ ಅಭ್ಯರ್ಥಿಯ ವಿರುದ್ಧ ಸಾರ್ವಜನಿಕವಾಗಿ ಪ್ರತಿಭಟನೆ ನಡೆಸುತ್ತಿರುವ ಗೆಹ್ಲೋಟ್​ ಬೆಂಬಲಿಗ ಶಾಸಕರಿಗೆ ಶೋಕಾಸ್ ನೊಟೀಸ್ ನೀಡುವ ಸಾಧ್ಯತೆಯಿದೆ.

ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಅವರಿಂದ ಮಾಹಿತಿ ಪಡೆದ ನಂತರ ಹೈಕಮಾಂಡ್ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮದ ಬಗ್ಗೆ ಹಾಗೂ ರಾಜಸ್ಥಾನದ ರಾಜಕೀಯ ಬೆಳವಣಿಗೆಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವದ್ರಾ ಮತ್ತು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮಾಲೋಚನೆ ನಡೆಸಿದರು.

ಈ ನಡುವೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಸಹ ಸೋನಿಯಾ ಅವರನ್ನು ಭೇಟಿಯಾಗಿದ್ದರು. ಕಮಲ್​ ನಾಥ್ ಸಹ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಕಮಲ್​ ನಾಥ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನನಗೆ ಕಾಂಗ್ರೆಸ್ ಅಧ್ಯಕ್ಷನಾಗಲು ಇಷ್ಟವಿಲ್ಲ. ಸೋನಿಯಾ ಗಾಂಧಿ ಅವರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಲು ಮಾತ್ರ ನಾನು ಬಂದಿದ್ದೇನೆ ಎಂದರು. ರಾಜಸ್ಥಾನದ ಬಿಕ್ಕಟ್ಟಿಗೆ ಮೂಲ ಕಾರಣವಾಗಿರುವ ಸಚಿನ್ ಪೈಲಟ್ ಮತ್ತು ಅಶೋಕ್ ಗೆಹ್ಲೋಟ್ ನಡುವೆ ಸಮನ್ವಯತೆ ತರಲು ಸೋನಿಯಾ ಗಾಂಧಿ ಅವರು ಕಮಲ್ ನಾಥ್ ಅವರನ್ನು ಕರೆದಿದ್ದಾರೆ ಎಂಬ ಮಾತು ಸಹ ಕೇಳಿ ಬರುತ್ತಿದೆ.

ಗೆಹ್ಲೋಟ್ ಬೆಂಬಲಿಗರ ರಾಜೀನಾಮೆ

ರಾಜಸ್ಥಾನ ಕಾಂಗ್ರೆಸ್‌ನಲ್ಲಿ ರಾಜಕೀಯ ಬಿಕ್ಕಟ್ಟು (Rajasthan Political Crisis) ಎದುರಾಗಿದ್ದು, ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ಬಣದ 90 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿನ್ ಪೈಲಟ್ (Sachin Pilot) ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆದಿರುವ ಹಿನ್ನೆಲೆಯಲ್ಲಿ ಅಶೋಕ್ ಗೆಹ್ಲೋಟ್ ಬೆಂಬಲಿಗ ಶಾಸಕರು ಸ್ಪೀಕರ್​ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಂಡಾಯ ಶಾಸಕರೊಂದಿಗೆ ಮಲ್ಲಿಕಾರ್ಜುನ್ ಖರ್ಗೆ ಮತ್ತು ಅಜಯ್ ಮಾಕೇನ್ ಮಾತುಕತೆಗೆ ಪ್ರಯತ್ನಿಸಿದರೂ ಅವರು ಭೇಟಿಗೆ ನಿರಾಕರಿಸಿದ್ದಾರೆ.

ಇದನ್ನೂ ಓದಿ: Rajasthan Political Crisis: ಸೋನಿಯಾ ಭೇಟಿ ಮಾಡಲಿರುವ ಕಮಲ್ ನಾಥ್, ರಾಜಸ್ಥಾನ ರಾಜಕೀಯ ಬಿಕ್ಕಟಿನ ಮಧ್ಯಸ್ಥಿಕೆ ವಹಿಸುವ ಸಾಧ್ಯತೆ

ಇದನ್ನೂ ಓದಿ: Rajasthan Crisis: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು; ಅಶೋಕ್ ಗೆಹ್ಲೋಟ್ ಬಣದ 90 ಕಾಂಗ್ರೆಸ್‌ ಶಾಸಕರು ರಾಜೀನಾಮೆ

Published On - 7:14 am, Tue, 27 September 22