Rajasthan Politics: ಈ ಬಾರಿ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಮುರಿಯಲಿದೆ 30 ವರ್ಷಗಳ ದಾಖಲೆ: ಸಚಿನ್ ಪೈಲಟ್

ಕಾಂಗ್ರೆಸ್ ನಾಯಕ ಸಚಿನ್ ಪೈಲಟ್(Sachin Pilot) ಅವರು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಿಂದ ಹೋರಾಡಲಿದ್ದು, ಮತ್ತೆ ರಾಜಸ್ಥಾನದಲ್ಲಿ ಸರ್ಕಾರ ರಚಿಸಲಿದೆ ಎಂದು ಸಚಿನ್ ಪೈಲಟ್ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಮತ್ತೆ ಸರ್ಕಾರ ರಚಿಸಿದರೆ ಮಾತ್ರ ಬಿಜೆಪಿಗೆ ಸವಾಲು ಹಾಕಲು ಕಾಂಗ್ರೆಸ್‌ಗೆ ಸಾಧ್ಯವಾಗುತ್ತದೆ ಎಂದು ಪೈಲಟ್ ಹೇಳಿದ್ದಾರೆ.

Rajasthan Politics: ಈ ಬಾರಿ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಮುರಿಯಲಿದೆ 30 ವರ್ಷಗಳ ದಾಖಲೆ: ಸಚಿನ್ ಪೈಲಟ್
ಸಚಿನ್ ಪೈಲಟ್

Updated on: Oct 02, 2023 | 11:31 AM

ಕಾಂಗ್ರೆಸ್ ನಾಯಕ ಸಚಿನ್ ಪೈಲಟ್(Sachin Pilot) ಅವರು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಿಂದ ಹೋರಾಡಲಿದ್ದು, ಮತ್ತೆ ರಾಜಸ್ಥಾನದಲ್ಲಿ ಸರ್ಕಾರ ರಚಿಸಲಿದೆ ಎಂದು ಸಚಿನ್ ಪೈಲಟ್ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಮತ್ತೆ ಸರ್ಕಾರ ರಚಿಸಿದರೆ ಮಾತ್ರ ಬಿಜೆಪಿಗೆ ಸವಾಲು ಹಾಕಲು ಕಾಂಗ್ರೆಸ್‌ಗೆ ಸಾಧ್ಯವಾಗುತ್ತದೆ ಎಂದು ಪೈಲಟ್ ಹೇಳಿದ್ದಾರೆ.

ನೀಮ್ ಕಾ ಥಾನಾ ಜಿಲ್ಲೆಯ ಅಜಿತ್‌ಗಢದಲ್ಲಿ ‘ಕಿಸಾನ್ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಮತ್ತೆ ಕಾಂಗ್ರೆಸ್ ಸರ್ಕಾರವನ್ನು ರಚಿಸಬೇಕಾದರೆ, ನಾವು ಒಬ್ಬ ಸಣ್ಣ ಕೆಲಸಗಾರನಾಗಿರಲಿ ಅಥವಾ ದೇಶದ ಅಥವಾ ರಾಜ್ಯದ ದೊಡ್ಡ ನಾಯಕನಾಗಿರಲಿ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕಾಗುತ್ತದೆ. ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋದರೆ ಮಾತ್ರ ಕಾಂಗ್ರೆಸ್ ಕುಟುಂಬ ಅಭಿವೃದ್ಧಿ ಹೊಂದುತ್ತದೆ ಮತ್ತು ಮತ್ತೆ ಸರ್ಕಾರ ರಚನೆಯಾಗುತ್ತದೆ.

ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದ್ದು, 30 ವರ್ಷಗಳ ಸಂಪ್ರದಾಯ ಕೊನೆಗೊಳ್ಳಲಿದೆ ಎಂದು ಸಚಿನ್ ಹೇಳಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತೆ ಸರ್ಕಾರ ರಚಿಸುವವರೆಗೂ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಹಾಕಲು ಸಾಧ್ಯವಿಲ್ಲ ಎಂದು ಹೇಳಿದರು.

ಮತ್ತಷ್ಟು ಓದಿ: ರಾಜಸ್ಥಾನದಲ್ಲಿ ಜನಸಂಘರ್ಷ್ ಯಾತ್ರೆ: ನಾವು ಕರ್ನಾಟಕದ ಕಾಂಗ್ರೆಸ್ ಪಕ್ಷದಿಂದ ಕಲಿಯಬೇಕು ಎಂದ ಸಚಿನ್ ಪೈಲಟ್

2013ರಲ್ಲಿ ರಾಜಸ್ಥಾನದ 200 ವಿಧಾನಸಭಾ ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದ್ದಾಗ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿತ್ತು ಎಂದು ಸಚಿನ್ ಪೈಲಟ್ ಹೇಳಿದ್ದಾರೆ. ನಮ್ಮ ಐದು ವರ್ಷಗಳ ಹೋರಾಟ ಯಶಸ್ವಿಯಾಗಿದ್ದು, 2018ರಲ್ಲಿ ಈ ಪ್ರದೇಶ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರಿಂದ ಪಕ್ಷವು ಸರ್ಕಾರ ರಚಿಸಿದೆ ಎಂದರು. ಆಡಳಿತಲ್ಲಿರುವ ಪಕ್ಷ ಮರು ಆಯ್ಕೆಯಾಗುವುದಿಲ್ಲ ಎನ್ನುವ ಟ್ರೆಂಡ್​ ಅನ್ನು ಮುರಿಯುವುದಾಗಿ ತಿಳಿಸಿದ್ದಾರೆ.

2013ರಲ್ಲಿ ರಾಜಸ್ಥಾನದ 200 ವಿಧಾನಸಭಾ ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದ್ದಾಗ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿತ್ತು ಎಂದು ಸಚಿನ್ ಪೈಲಟ್ ಹೇಳಿದ್ದಾರೆ. ನಮ್ಮ ಐದು ವರ್ಷಗಳ ಹೋರಾಟ ಯಶಸ್ವಿಯಾಗಿದ್ದು, 2018ರಲ್ಲಿ ಈ ಪ್ರದೇಶ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರಿಂದ ಪಕ್ಷವು ಸರ್ಕಾರ ರಚಿಸಿದೆ ಎಂದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಮಧ್ಯಪ್ರದೇಶ, ತೆಲಂಗಾಣ ಮತ್ತು ರಾಜಸ್ಥಾನ ಸೇರಿದಂತೆ ದೇಶಾದ್ಯಂತ ರ್ಯಾಲಿಗಳನ್ನು ನಡೆಸುತ್ತಿದ್ದಾರೆ ಎಂದು ಪೈಲಟ್ ಹೇಳಿದರು. ಪಕ್ಷವು ಇತರ ರಾಜ್ಯಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅಲ್ಲಿಯೂ ಸರ್ಕಾರವನ್ನು ರಚಿಸುತ್ತದೆ ಎನ್ನುವ ಭರವಸೆ ಇದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:27 am, Mon, 2 October 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us