Rajasthan Politics: ರಾಜಸ್ಥಾನ ಕಾಂಗ್ರೆಸ್‌ ಆಂತರಿಕ ಕಲಹ: ಪಕ್ಷದಿಂದ ಹಾರಲು ಸಜ್ಜಾಗುತ್ತಿರುವ ಪೈಲಟ್‌

ರಾಜಸ್ಥಾನ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಮುಂದಿನ ರಾಜಕೀಯ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್​ನಲ್ಲಿಯೇ ಉಳಿಯುತ್ತಾರೋ ಅಥವಾ ಬಿಜೆಪಿ ಜತೆಗೆ ಕೈಜೋಡಿಸುತ್ತಾರೋ ಅಥವಾ ಏಕಾಂಗಿಯಾಗಿ ಹೊಸ ಪಕ್ಷವನ್ನು ಆರಂಭಿಸುತ್ತಾರೋ ಎನ್ನುವ ಚರ್ಚೆ ರಾಜಸ್ಥಾನ ರಾಜಕೀಯದಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿದೆ.

Rajasthan Politics: ರಾಜಸ್ಥಾನ ಕಾಂಗ್ರೆಸ್‌ ಆಂತರಿಕ ಕಲಹ: ಪಕ್ಷದಿಂದ ಹಾರಲು ಸಜ್ಜಾಗುತ್ತಿರುವ ಪೈಲಟ್‌
ಸಚಿನ್ ಪೈಲಟ್
Follow us
ನಯನಾ ರಾಜೀವ್
|

Updated on: Jun 07, 2023 | 10:24 AM

ರಾಜಸ್ಥಾನ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್(Sachin Pilot)  ಅವರ ಮುಂದಿನ ರಾಜಕೀಯ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್​ನಲ್ಲಿಯೇ ಉಳಿಯುತ್ತಾರೋ ಅಥವಾ ಬಿಜೆಪಿ ಜತೆಗೆ ಕೈಜೋಡಿಸುತ್ತಾರೋ ಅಥವಾ ಏಕಾಂಗಿಯಾಗಿ ಹೊಸ ಪಕ್ಷವನ್ನು ಆರಂಭಿಸುತ್ತಾರೋ ಎನ್ನುವ ಚರ್ಚೆ ರಾಜಸ್ಥಾನ ರಾಜಕೀಯದಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿದೆ. ರಾಜಸ್ಥಾನ ಮುಖ್ಯಮಮತ್ರಿ ಅಶೋಕ್ ಗೆಹ್ಲೋಟ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಆಂತರಿಕ ಕಲಹ ಮೂರ್ನಾಲ್ಕು ವರ್ಷಗಳಿಂದ ನಡೆಯುತ್ತಲೇ ಇದೆ. ಇದು ಈಗ ತಾರಕಕ್ಕೇರಿದ್ದು, ಮಲ್ಲಿಕಾರ್ಜುನ ಖರ್ಗೆಯ ಸಂಧಾನದ ಬಳಿಕವೂ ಸಚಿನ್ ಪೈಲಟ್ ಸಮಾಧಾನಗೊಂಡಿಲ್ಲ ಎನ್ನಲಾಗುತ್ತಿದೆ.

ಸಚಿನ್ ಪೈಲಟ್ ಅವರು ತಮ್ಮದೇ ಪಕ್ಷದ ಸರ್ಕಾರದ ಮುಂದೆ ಮೂರು ಬೇಡಿಕೆಗಳನ್ನು ಇಟ್ಟುಕೊಂಡು 15 ದಿನಗಳ ಗಡುವು ನೀಡಿದ್ದರು. ಈ ಮೂರು ಬೇಡಿಕೆಗಳು ಪ್ರಸ್ತುತ ಸನ್ನಿವೇಶದಲ್ಲಿ ಈಡೇರಿಸಲು ಗೆಹ್ಲೋಟ್ ಅವರಿಗೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಮೇ 29 ರಂದು ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಕೆಸಿ ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿದ್ದರು. ಹೀಗಾಗಿ ಸಚಿನ್ ಪೈಲಟ್ ತಂದೆ ರಾಜೇಶ್ ಪೈಲಟ್ ಅವರ ಪುಣ್ಯ ತಿಥಿಯಾದ ಜೂನ್ 11 ರಂದು ಹೊಸ ಪಕ್ಷದ ಘೋಷಣೆ ಮಾಡುತ್ತಾರೆ ಅಥವಾ ತಮ್ಮ ರಾಜಕೀಯ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಸಚಿನ್ ಪೈಲಟ್ ಬೆಂಬಲಿಗರು ಹೇಳುತ್ತಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದಲ್ಲಿ ಜನಸಂಘರ್ಷ್ ಯಾತ್ರೆ: ನಾವು ಕರ್ನಾಟಕದ ಕಾಂಗ್ರೆಸ್ ಪಕ್ಷದಿಂದ ಕಲಿಯಬೇಕು ಎಂದ ಸಚಿನ್ ಪೈಲಟ್

ಆದರೆ ರಾಜಸ್ಥಾನ ಚುನಾವಣೆಗೆ ಇನ್ನೂ ಸಮಯವಿರುವ ಹಿನ್ನೆಲೆಯಲ್ಲಿ ಇಷ್ಟು ಬೇಗ ಸಚಿನ್ ಪೈಲಟ್ ನಿರ್ಧಾರ ಪ್ರಕಟಿಸುತ್ತಾರೆಯೋ ಅಥವಾ ಏನು ಮಾಡುತ್ತಾರೆ ಎನ್ನುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಎಷ್ಟೇ ಪ್ರಯತ್ನ ಮಾಡಿದರೂ ಸಚಿನ್ ಪೈಲಟ್ ಬೇರೆಯದ್ದೇ ಹಾದಿಯನ್ನು ಆರಿಸಿಕೊಂಡಿದ್ದಾರೆ. ಇನ್ನು ಕಾಂಗ್ರೆಸ್‌ನಲ್ಲಿ ಇರುವುದಿಲ್ಲ ಎಂದು ಬಹಳ ದಿನಗಳ ಹಿಂದೆಯೇ ನಿರ್ಧರಿಸಿದ್ದರು. ಮೇ 15 ರಂದು ಜೈಪುರದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪೈಲಟ್ ಘೋಷಿಸಿದ್ದನ್ನು ನೆನಪಿಸಿಕೊಳ್ಳಬಹುದು. ಆದರೆ ಕಾಂಗ್ರೆಸ್ ಮಾತ್ರ ಪೈಲಟ್ ಕಾಂಗ್ರೆಸ್​ನಲ್ಲಿಯೇ ಇರಲಿದ್ದಾರೆ ಎಂದು ಹೇಳುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್