ರಾಜಸ್ಥಾನ: ಅತ್ಯಾಚಾರ ಸಂತ್ರಸ್ತೆಯ ಮೇಲೆ ಗುಂಡಿನ ದಾಳಿ, ಇಬ್ಬರ ಬಂಧನ
ಅತ್ಯಾಚಾರ ಸಂತ್ರಸ್ತೆ ತನ್ನ ಸಹೋದರನೊಂದಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ರಾಜಸ್ಥಾನದಲ್ಲಿ ಮೂವರು ಆಕೆಯ ಮೇಲೆ ಗುಂಡು ಹಾರಿಸಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ.
ಅತ್ಯಾಚಾರ ಸಂತ್ರಸ್ತೆ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯಲ್ಲಿ 24 ವರ್ಷದ ಅತ್ಯಾಚಾರ ಸಂತ್ರಸ್ತೆ ಮೇಲೆ ಮೂರು ಮಂದಿ ದಾಳಿ ನಡೆಸಿದ್ದಾರೆ. ಮಹಿಳೆ ತನ್ನ ಸಹೋದರನೊಂದಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಪ್ರಾಗ್ಪುರ ಬಳಿ ಮೂವರು ವ್ಯಕ್ತಿಗಳು ಆಕೆಯ ಮೇಲೆ ಗುಂಡು ಹಾರಿಸಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ.
ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ನಂತರ ಜೈಪುರದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಮೂವರು ಆರೋಪಿಗಳಲ್ಲಿ ಇಬ್ಬರನ್ನು ಮಹಿಪಾಲ್ ಮತ್ತು ರಾಹುಲ್ ಗುರ್ಜರ್ ಎಂದು ಗುರುತಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಜೂನ್ 2023 ರಲ್ಲಿ ಮಹಿಳೆ ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದ ಮೂರನೇ ಆರೋಪಿ ರಾಜೇಂದ್ರ ಯಾದವ್ ತಲೆಮರೆಸಿಕೊಂಡಿದ್ದಾನೆ. ಶನಿವಾರ ಸಂಜೆ ಮಹಿಳೆ ಮತ್ತು ಆಕೆಯ ಸಹೋದರ ಮನೆಗೆ ತೆರಳುತ್ತಿದ್ದಾಗ ಅವರನ್ನು ಯಾದವ್ ಮತ್ತು ಇತರರು ತಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್ಐಆರ್
ಘಟನೆಯ ನಂತರ ಹಲವಾರು ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಪ್ರಕರಣದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಡಿಎಸ್ಪಿ ಅವರನ್ನು ಸಮಾಧಾನಪಡಿಸಿದ ನಂತರ ಪ್ರತಿಭಟನೆ ಹಿಂಪಡೆದರು.
ಸಂತ್ರಸ್ತೆಯ ಕುಟುಂಬವು ನವೆಂಬರ್ 2023 ರಲ್ಲಿ ಪೊಲೀಸ್ ರಕ್ಷಣೆಗಾಗಿ ವಿನಂತಿಸಿತ್ತು, ಆದರೆ ಪ್ರಾಗ್ಪುರ ಪೊಲೀಸ್ ಠಾಣೆಯ ಸಿಬ್ಬಂದಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಭದ್ರತೆಗಾಗಿ ಬಾಲಕಿಯ ಕುಟುಂಬದವರು ಅರ್ಜಿ ಸಲ್ಲಿಸಿರುವ ಪ್ರಕರಣದಲ್ಲಿ ಎಎಸ್‌ಐ ದಿಲೀಪ್ ಅವರನ್ನು ಅಮಾನತುಗೊಳಿಸಲಾಗಿದ್ದು, ಉನ್ನತ ಮಟ್ಟದ ವಿಚಾರಣೆಗೆ ಹಸ್ತಾಂತರಿಸಲಾಗಿದೆ ಎಂದು ಐಜಿ ತಿಳಿಸಿದ್ದಾರೆ.
ಜಾರ್ಖಂಡ್ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಜಾರ್ಖಂಡ್ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ. ಮೂವರು ಅಪ್ರಾಪ್ತರು ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಲೋಹರ್ಡಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಬ್ರವರಿ 24 ರಂದು ಇಬ್ಬರು ಅಪ್ರಾಪ್ತರು ಬರ್ತ್ ಡೇ ಪಾರ್ಟಿಯಿಂದ ಹಿಂದಿರುಗುತ್ತಿದ್ದಾಗ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:04 pm, Mon, 26 February 24