AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆ: ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆ ಆರೋಪದ ಮೇಲೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೈಪುರದಲ್ಲಿ ರಾಜಸ್ಥಾನ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಆರಂಭಿಸಿದೆ.

Rajasthan: ರಾಜಸ್ಥಾನದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆ: ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಅಕ್ಷಯ್​ ಪಲ್ಲಮಜಲು​​
|

Updated on: Jun 13, 2023 | 2:45 PM

Share

ಜೈಪುರ: ರಾಜಸ್ಥಾನದಲ್ಲಿ (Rajasthan) ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆ ಆರೋಪದ ಮೇಲೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಜೈಪುರದಲ್ಲಿ ರಾಜಸ್ಥಾನ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಆರಂಭಿಸಿದೆ. ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಜಸ್ಥಾನದ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿತು. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೇಂದ್ರವು ತನ್ನ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು ಮತ್ತು ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ರಾಜ್ಯದಲ್ಲಿ ಇಡಿ ದಾಳಿಯನ್ನು ಅವರು ಮಾಡಿಸುತ್ತಿದ್ದಾರೆ ಎಂದು ಹೇಳಿದರು. ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸರ್ಕಾರದ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆಗಳ ಸೋರಿಕೆ ಕುರಿತು ತನಿಖೆ ನಡೆಸುತ್ತಿರುವಾಗ ಇಡಿ ಮಧ್ಯಪ್ರವೇಶಿಸುತ್ತಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.

2021ರಲ್ಲಿ ರಾಜ್ಯ ಶಿಕ್ಷಣ ಮಂಡಳಿಯಿಂದ ಶಿಕ್ಷಕರ ನೇಮಕಾತಿ ಸಮಯದಲ್ಲಿ ಮತ್ತು ಕಳೆದ ವರ್ಷ ರಾಜಸ್ಥಾನ ಸಾರ್ವಜನಿಕ ಸೇವೆ ನಡೆಸಿದ ಪರೀಕ್ಷೆಯಲ್ಲಿ ಸೇರಿದಂತೆ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಅಭ್ಯರ್ಥಿಗಳಿಗೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಕೆಲವು ನಿದರ್ಶನಗಳಿಗೆ ರಾಜ್ಯ ಸಾಕ್ಷಿಯಾಗಿದೆ ಎಂದು RPSC ಆಯೋಗ ಹೇಳಿತ್ತು.

ಇದನ್ನೂ ಓದಿ:Rajasthan Politics: ಪ್ರತಿ ತಪ್ಪಿಗೂ ಶಿಕ್ಷೆಯ ಅಗತ್ಯವಿದೆ: ಸಚಿನ್ ಪೈಲಟ್

ಪೇಪರ್ ಸೋರಿಕೆ ಕುರಿತು ತನಿಖೆ ನಡೆಸುತ್ತಿರುವ ರಾಜಸ್ಥಾನ ಪೊಲೀಸ್‌ನ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) 2022 ರ ಹಿರಿಯ ಶಿಕ್ಷಕರ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆರ್‌ಪಿಎಸ್‌ಸಿ ಸದಸ್ಯ ಬಾಬುಲಾಲ್ ಕತಾರ, ಅವರ ಸೋದರಳಿಯ ಮತ್ತು ಚಾಲಕನನ್ನು ಏಪ್ರಿಲ್‌ನಲ್ಲಿ ಬಂಧಿಸಿತ್ತು. ಪರೀಕ್ಷೆ ಆರಂಭಕ್ಕೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಪತ್ರಿಕೆಗಳು ಸೋರಿಕೆಯಾಗಿತ್ತು. ಈ ಕಾರಣಕ್ಕೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ