ಅತ್ಯಾಚಾರದಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿದೆ; ವಿಧಾನಸಭೆಯಲ್ಲೇ ಹೇಳಿಕೆ ನೀಡಿದ ಸಚಿವ​ ರಾಜೇಂದ್ರ ಸಿಂಗ್ ವಜಾ

ನನ್ನ ಹೇಳಿಕೆಗೆ ಈಗಲೂ ಬದ್ಧ. ಮಹಿಳಾ ಅತ್ಯಾಚಾರ ಪ್ರಕರಣಗಳಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿದೆ. ಲೋಪಗಳನ್ನು ಸರಿಪಡಿಸುವ ಬದಲು ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಹಿಳಾ ದೌರ್ಜನ್ಯಗಳಲ್ಲಿ ರಾಜಸ್ಥಾನ ನಂಬರ್ ಒನ್ ಆಗಿದೆ ಎಂಬುದನ್ನು ಎಲ್ಲಾ ದಾಖಲೆಗಳು ಹೇಳುತ್ತವೆ ಎಂದು ರಾಜೇಂದ್ರ ಸಿಂಗ್ ಗುಢಾ ಪುನರುಚ್ಚರಿಸಿದ್ದಾರೆ.

ಅತ್ಯಾಚಾರದಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿದೆ; ವಿಧಾನಸಭೆಯಲ್ಲೇ ಹೇಳಿಕೆ ನೀಡಿದ ಸಚಿವ​ ರಾಜೇಂದ್ರ ಸಿಂಗ್ ವಜಾ
ರಾಜೇಂದ್ರ ಸಿಂಗ್ ಗುಢಾ
Follow us
Ganapathi Sharma
|

Updated on:Jul 22, 2023 | 11:03 AM

ಜೈಪುರ, ಜುಲೈ 22: ಮಹಿಳಾ ಸುರಕ್ಷತೆಯಲ್ಲಿ ನಮ್ಮ ಸರ್ಕಾರ ವಿಫಲವಾಗಿದೆ ಎಂದು ರಾಜಸ್ಥಾನ (Rajasthan) ವಿಧಾನಸಭೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಧ್ವನಿಯೆತ್ತಿದ್ದ ಸಚಿವ ರಾಜೇಂದ್ರ ಸಿಂಗ್ ಗುಢಾ (Rajendra Singh Gudha) ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಸರ್ಕಾರದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ನನಗೆ ಸರಿ ಎನಿಸಿದ್ದನ್ನು ಹೇಳಿದ್ದೇನೆ. ಇರುವ ವಿಷಯವನ್ನು ಮಾತನಾಡುವುದು ಅಪರಾಧವಲ್ಲ. ನನಗೆ ಸರಿ ಎನಿಸಿದ್ದನ್ನು ನಾನು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಯಾವುದೇ ಬಿಕ್ಕಟ್ಟು ಬಂದಾಗಲೆಲ್ಲಾ, ಯಾವುದೇ ಸಮಸ್ಯೆ ಬಂದಾಗ ನಾವು ಪೂರ್ಣ ಬೆಂಬಲ ನೀಡಿದ ಗಟ್ಟಿಯಾಗಿ ಸರ್ಕಾರದ ಪರ ನಿಂತಿದ್ದೇವೆ. ಸತ್ಯ ಹೇಳಿದ್ದಕ್ಕೆ ನನಗೆ ಶಿಕ್ಷೆಯಾಗಿದೆ ಎಂದು ಗುಢಾ ಕಿಡಿಕಾರಿದ್ದಾರೆ.

ಹೇಳಿಕೆಗೆ ಬದ್ಧ ಎಂದ ರಾಜೇಂದ್ರ ಸಿಂಗ್ ಗುಢಾ

ನನ್ನ ಹೇಳಿಕೆಗೆ ಈಗಲೂ ಬದ್ಧ. ಮಹಿಳಾ ಅತ್ಯಾಚಾರ ಪ್ರಕರಣಗಳಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿದೆ. ಲೋಪಗಳನ್ನು ಸರಿಪಡಿಸುವ ಬದಲು ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಹಿಳಾ ದೌರ್ಜನ್ಯಗಳಲ್ಲಿ ರಾಜಸ್ಥಾನ ನಂಬರ್ ಒನ್ ಆಗಿದೆ ಎಂಬುದನ್ನು ಎಲ್ಲಾ ದಾಖಲೆಗಳು ಹೇಳುತ್ತವೆ ಎಂದು ರಾಜೇಂದ್ರ ಸಿಂಗ್ ಗುಢಾ ಪುನರುಚ್ಚರಿಸಿದ್ದಾರೆ.

ಮಣಿಪುರದಲ್ಲಿ ನಡೆದಿದ್ದು ನಾಚಿಕೆಗೇಡಿನ ಘಟನೆಯಾಗಿದ್ದು, ಇದನ್ನು ಖಂಡಿಸಬೇಕು. ಹಾಗೆಂದು ನಮ್ಮಲ್ಲಿ ಏನಾಗುತ್ತಿದೆ ಎಂಬುದನ್ನೂ ನಾವು ಗಮನಿಸಬೇಕು. ನಾಲ್ಕು ತಿಂಗಳ ನಂತರ ನಾವು ಸಾರ್ವಜನಿಕರ ಬಳಿ ಹೋಗುತ್ತೇವೆ. ನಾವು ಅವರನ್ನು ಹೇಗೆ ಎದುರಿಸಬೇಕಾಗುತ್ತದೆ? ವಾಸ್ತವವನ್ನು ಹೇಳಿದ್ದೇನಷ್ಟೆ. ಸತ್ಯ ಹೇಳಿದ್ದಕ್ಕೆ ನನಗೆ ಶಿಕ್ಷೆಯಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಮಣಿಪುರ ಸ್ಥಿತಿ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧ, ವಿಪಕ್ಷ ಪ್ರತಿಭಟನೆ ಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ವಿಧಾನಸಭೆಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುವಾಗ, ಸ್ತ್ರೀಯರ ಸುರಕ್ಷತೆಯಲ್ಲಿ ನಾವು ವಿಫಲರಾಗಿದ್ದೇವೆ ಎಂದು ಗುಢಾ ಅವರು ಹೇಳಿದ್ದರು. ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವ ರೀತಿಯನ್ನು ನೋಡಿದ ನಂತರ, ಮಣಿಪುರದ ಬದಲಿಗೆ ನಾವು ನಮ್ಮಲ್ಲಿ ಏನಾಗುತ್ತಿದೆ ನೋಡಬೇಕು ಎಂದು ಹೇಳಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರನ್ನು ವಜಾಗೊಳಿಸಲಾಯಿತು. ಗುಢಾ ವಜಾ ಬಳಿಕ ರಾಜಸ್ಥಾನದ ರಾಜಕೀಯ ಚಟುವಟಿಕೆ ಕಾವೇರಿದೆ. ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆಯೂ ಇದ್ದು ಕುತೂಹಲ ಮೂಡಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:59 am, Sat, 22 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್