Rajasthan Train: ರಾಜಸ್ಥಾನದ ಪಾಲಿ ಬಳಿ ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ ರೈಲು

Suryanagari Express Derailed: ಬಾಂದ್ರಾ ಟರ್ಮಿನಸ್‌ನಿಂದ ಜೋಧ್‌ಪುರಕ್ಕೆ ತೆರಳುತ್ತಿದ್ದಾಗ ಸೂರ್ಯನಗರಿ ಎಕ್ಸ್‌ಪ್ರೆಸ್‌ ರೈಲಿನ 8 ಬೋಗಿಗಳು ಹಳಿ ತಪ್ಪಿದ ಘಟನೆ ನಡೆದಿದೆ. ಜೈಪುರದ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

Rajasthan Train: ರಾಜಸ್ಥಾನದ ಪಾಲಿ ಬಳಿ ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ ರೈಲು
ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ ರೈಲುImage Credit source: India Today
Follow us
TV9 Web
| Updated By: Rakesh Nayak Manchi

Updated on:Jan 02, 2023 | 7:34 AM

ಪಾಲಿ (ರಾಜಸ್ಥಾನ): ಸೂರ್ಯನಗರಿ ಎಕ್ಸ್‌ಪ್ರೆಸ್‌ (Suryanagari Express Train) ರೈಲಿನ ಎಂಟು ಬೋಗಿಗಳು ಹಳಿತಪ್ಪಿದ ಘಟನೆ ಇಂದು ಮುಂಜಾನೆ (ಜನವರಿ 2) ರಾಜಸ್ಥಾನದ ಪಾಲಿ ಬಳಿ ನಡೆದಿದೆ. ಬಾಂದ್ರಾ ಟರ್ಮಿನಸ್‌ನಿಂದ ಜೋಧ್‌ಪುರಕ್ಕೆ ತೆರಳುತ್ತಿದ್ದ ಈ ರೈಲು ಮುಂಜಾನೆ 3:27ಕ್ಕೆ ಜೋಧ್‌ಪುರ ವಿಭಾಗದ ರಾಜ್‌ಕಿವಾಸ್-ಬೊಮದ್ರಾ ವಿಭಾಗದ ನಡುವೆ ಹಳಿ ತಪ್ಪಿದೆ. ವಾಯುವ್ಯ ರೈಲ್ವೆ ಪ್ರಕಾರ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಜೋಧ್‌ಪುರದಿಂದ ಅಪಘಾತ ಪರಿಹಾರ ರೈಲನ್ನು ಕಳುಹಿಸಲಾಗಿದೆ.

”ಉನ್ನತ ಅಧಿಕಾರಿಗಳು ಶೀಘ್ರವೇ ಸ್ಥಳಕ್ಕೆ ಆಗಮಿಸುವ ನಿರೀಕ್ಷೆಯಿದೆ. ವಾಯುವ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರು ಮತ್ತು ಇತರ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಳಿದರು.

ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾರು-ಟ್ರಕ್ ಡಿಕ್ಕಿಹೊಡೆದು ಅಪಘಾತ: 5 ಮಂದಿ ಸಾವು

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಬಾಂದ್ರಾ ಟರ್ಮಿನಸ್-ಜೋಧ್‌ಪುರ ಸೂರ್ಯನಗರಿ ಎಕ್ಸ್‌ಪ್ರೆಸ್‌ನ 11 ಬೋಗಿಗಳು ಹಳಿತಪ್ಪಿದವು ಎಂದು CPRO ಹೇಳಿದೆ. ಸ್ಥಳಕ್ಕೆ ಉನ್ನತ ಅಧಿಕಾರಿಗಳು ಆಗಮಿಸಿದ್ದಾರೆ. ಪ್ರಯಾಣಿಕರಿಗೆ ತಮ್ಮ ಗಮ್ಯಸ್ಥಾನಗಳನ್ನು ತಲುಪಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಏತನ್ಮಧ್ಯೆ, ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಘಟನೆಯಿಂದಾಗಿ ಹಲವಾರು ರೈಲುಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಅಪಘಾತದ ಹಿನ್ನಲೆಯಲ್ಲಿ ರೈಲ್ವೆ ಕೆಲವು ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ಪ್ರಯಾಣಿಕರ ಬಗ್ಗೆ ವಿಚಾರಿಸಲು ಇಚ್ಛಿಸುವವರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು. ಜೋಧಪುರಕ್ಕೆ – 0291-2654979(1072), 0291- 2654993(1072), 0291- 2624125, 0291- 2431646, ಪಾಲಿ ಮಾರ್ವಾರ್ಗಾಗಿ – 0293- 2250324 ಸಂಪರ್ಕಿಸಬಹುದು. ಪ್ರಯಾಣಿಕರು ಮತ್ತು ಅವರ ಕುಟುಂಬದವರು ಯಾವುದೇ ಮಾಹಿತಿಗಾಗಿ 138 ಮತ್ತು 1072 ಅನ್ನು ಸಂಪರ್ಕಿಸಬಹುದು ಎಂದು ಸಿಪಿಆರ್​​ಒ ಹೇಳಿದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 am, Mon, 2 January 23

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ