AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಹೋಟೆಲ್‌ನ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ರಾಜಸ್ಥಾನದ ಉದಯಪುರದ ಹೋಟೆಲ್‌ಯೊಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇವರನ್ನು ಕಾಪಾಡಲು ಹೋದ ಮತ್ತಿಬ್ಬರು ಕಾರ್ಮಿಕರು ಮೂರ್ಛೆ ಹೋಗಿದ್ದಾರೆ, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Rajasthan: ಹೋಟೆಲ್‌ನ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 15, 2023 | 6:11 PM

Share

ಉದಯಪುರ, ಜುಲೈ 15: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಜುಲೈ 14ರಂದು ರಾಜಸ್ಥಾನ (Rajasthan) ಉದಯಪುರದ ಹೋಟೆಲ್‌ನಲ್ಲಿ ನಡೆದಿದೆ. ಇವರನ್ನು ಕಾಡಲು ಹೋದ ಮತ್ತಿಬ್ಬರು ಕಾರ್ಮಿಕರು ಮೂರ್ಛೆ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಜ್ಜನ್‌ಗಢ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ಇಬ್ಬರು ಕಾರ್ಮಿಕರು ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹೇಂದ್ರ ಛಪರ್ವಾಲ್ (27) ಮತ್ತು ವಿಜಯ್ ಕಲ್ಯಾಣ (33) ಅವರು ಟ್ಯಾಂಕ್‌ನಲ್ಲಿದ್ದ ವಿಷಾನಿಲದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ, ಅವರನ್ನು ರಕ್ಷಿಸಲು ಟ್ಯಾಂಕ್‌ ಒಳಗೆ ರಾಮಕರನ್ ಮತ್ತು ವಿನೋದ್ ನಕ್ವಾಲ್ ಹಾರಿದ್ದಾರೆ, ಆದರೆ ಅವರು ಕೂಡ ಅಲ್ಲಿಯೇ ಮೂರ್ಛೆ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮಕರನ್ ಮತ್ತು ನಕ್ವಾಲ್ ಅವರನ್ನು ಎಂಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ದೇಹಗಳನ್ನು ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Rajasthan Crime: ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ, ಬಾವಿಯಲ್ಲಿ ಶವ ಪತ್ತೆ

ಇನ್ನೂ ಅವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ವಾಲ್ಮೀಕಿ ಸಮುದಾಯದ ಜನರು ಮತ್ತು ನೈರ್ಮಲ್ಯ ಕಾರ್ಮಿಕರಿಗೆ ಸಂಬಂಧಿಸಿದ ಸಂಘಟನೆಗಳು ಒತ್ತಾಯಿಸಿದೆ. ಅಖಿಲ ಭಾರತ ಸಫಾಯಿ ಕರ್ಮಚಾರಿ ಕಾಂಗ್ರೆಸ್ ಮುಖಂಡ ಬಾಬುಲಾಲ್ ಮಾತನಾಡಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಹೋಟೆಲ್ ನಿರ್ವಾಹಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:27 pm, Sat, 15 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ