ರಾಜಸ್ಥಾನ: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು
ರಾಜಸ್ಥಾನದ ಬಿಕಾನೇರ್ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ದಂಪತಿ ಹಾಗೂ ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್ಥಿಕ ಕಾರಣದಿಂದಲೇ ಇವರೆಲ್ಲರೂ ಸಾವಿನೆಡೆಗೆ ಹೆಜ್ಜೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಮುಕ್ತ ಪ್ರಸಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಾಜಸ್ಥಾನ(Rajasthan)ದ ಬಿಕಾನೇರ್ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ದಂಪತಿ ಹಾಗೂ ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್ಥಿಕ ಕಾರಣದಿಂದಲೇ ಇವರೆಲ್ಲರೂ ಸಾವಿನೆಡೆಗೆ ಹೆಜ್ಜೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಮುಕ್ತ ಪ್ರಸಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಎಸ್ಪಿ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಆತ್ಮಹತ್ಯೆಗೆ ಕಾರಣಗಳು ಇನ್ನೂ ಬಹಿರಂಗವಾಗಿಲ್ಲ ಎಂದು ಸಿಒ ಸಿಟಿ ಹಿಮಾಂಶು ಹೇಳಿದ್ದಾರೆ. ಪೊಲೀಸರು ಮರಣೋತ್ತರ ಪರೀಕ್ಷೆಯ ನಂತರವೇ ಕೆಲವು ವಿಷಯಗಳು ಹೊರಬರಬಹುದು ಎಂದಿದ್ದಾರೆ.
ಐದು ಮಂದಿ ಸೀಲಿಂಗ್ ಫ್ಯಾನ್ಗೆ ನೇಣು ಹಾಕಿಕೊಂಡಿದ್ದಾರೆ. ಒಬ್ಬರ ಶವ ನೆಲದ ಮೇಲೆ ಬಿದ್ದಿತ್ತು. ಮೃತರನ್ನು ಮುಕ್ತಪ್ರಸಾದ್ ನಗರದ ಪೊಲೀಸ್ ಠಾಣೆಯ ಅಂತ್ಯೋದಯ ನಗರದ ನಿವಾಸಿಗಳಾದ ಹನುಮಾನ್ ಸೋನಿ(45), ಪತ್ನಿ ವಿಮಲಾ(40), ಮೂವರು ಮಕ್ಕಳಾದ ಮೋಹಿತ್(18), ರಿಷಿ(16), ಗುಡಿಯಾ(14) ಎಂದು ಗುರುತಿಸಲಾಗಿದೆ.
ಮತ್ತಷ್ಟು ಓದಿ: ಗೋರಕ್ಷಕ ಬಿಟ್ಟೂ ಬಜರಂಗಿಯ ಸಹೋದರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಎಫ್ಎಸ್ಎಲ್ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿವೆ. ಇಂದು ತನಿಖೆಯ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ