Rajeev Chandrasekhar: ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ರಾಜೀವ್ ಚಂದ್ರಶೇಖರ್ ಅವರು 26ನೇ ಬಾರಿ ಇಲ್ಲಿಗೆ ಭೇಟಿ ನೀಡುತ್ತಿದ್ದು, 'ನನ್ನ 26ನೇ ವರ್ಷದ ಅಯ್ಯಪ್ಪನ ದರ್ಶನ ಇದಾಗಿದೆ. ಸಾವಿರಾರು ಭಕ್ತರೊಂದಿಗೆ ಶಬರಿಮಲೆಯಲ್ಲಿ ತೆರಳಿದಾಗ ತೆಗೆದ ಫೋಟೋ' ಎಂದು ಅವರು ಹೇಳಿಕೊಂಡಿದ್ದಾರೆ.

Rajeev Chandrasekhar: ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 19, 2022 | 4:43 PM

ಶಬರಿಮಲೆ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಅವರು ಕೇರಳದಲ್ಲಿರುವ ಶಬರಿಮಲೆಗೆ (Sabarimala) ಭೇಟಿ ನೀಡಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ್ದಾರೆ. ವಿಶೇಷವೆಂದರೆ ಇರುಮುಡಿ ಹೊತ್ತು, ಪಾದಯಾತ್ರೆ ಮೂಲಕವೇ ರಾಜೀವ್ ಚಂದ್ರಶೇಖರ್ ಶಬರಿಮಲೆ ಅಯ್ಯಪ್ಪ ಸ್ವಾಮಿ ಬೆಟ್ಟವನ್ನೇರಿದ್ದಾರೆ. ಬೇರೆ ಭಕ್ತರ ಜೊತೆ ಕಪ್ಪು ಬಟ್ಟೆ ಧರಿಸಿ, ಇರುಮುಡಿ ಹೊತ್ತು ಸಚಿವ ರಾಜೀವ್ ಚಂದ್ರಶೇಖರ್ ಬೆಟ್ಟ ಹತ್ತುತ್ತಿರುವ ಫೋಟೋಗಳು ವೈರಲ್ ಆಗಿವೆ. ಅಂದಹಾಗೆ, 26ನೇ ಬಾರಿ ರಾಜೀವ್ ಚಂದ್ರಶೇಖರ್ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.

ಕೊವಿಡ್-19 ಅಲೆಯ ನಂತರ ಶಬರಿಮಲೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಇಲ್ಲಿಗೆ ಆಗಮಿಸಿದ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರದ ಅಯ್ಯಪ್ಪ ಭಕ್ತರನ್ನು ಭೇಟಿಯಾದ ಪೋಟೊಗಳನ್ನು ರಾಜೀವ್ ಚಂದ್ರಶೇಖರ್ ಅವರು ಕೂ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Sabarimala Temple: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಇಂದಿನಿಂದ ಭಕ್ತರ ದರ್ಶನಕ್ಕೆ ಅವಕಾಶ

ಶಬರಿಮಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರದ ಅಯ್ಯಪ್ಪ ಭಕ್ತರನ್ನು ಭೇಟಿಯಾದ ಹೆಚ್ಚಿನ ಚಿತ್ರಗಳು ಇದಾಗಿದ್ದು, ಅವರಲ್ಲಿ ಹಲವರು ಕೋವಿಡ್ ನಂತರ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ರಾಜೀವ್ ಚಂದ್ರಶೇಖರ್ ಅವರು 26ನೇ ಬಾರಿ ಇಲ್ಲಿಗೆ ಭೇಟಿ ನೀಡುತ್ತಿದ್ದು, ‘ನನ್ನ 26ನೇ ವರ್ಷದ ಅಯ್ಯಪ್ಪನ ದರ್ಶನ ಇದಾಗಿದೆ. ಸಾವಿರಾರು ಭಕ್ತರೊಂದಿಗೆ ಶಬರಿಮಲೆಯಲ್ಲಿ ತೆರಳಿದಾಗ ತೆಗೆದ ಫೋಟೋ’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Kerala: ಶಬರಿಮಲೆ ಅಯ್ಯಪ್ಪ ದೇಗುಲದ ಗರ್ಭಗುಡಿ ಪ್ರವೇಶದ್ವಾರ ಬಳಿ, ವಿಜಯ ಮಲ್ಯ ನೀಡಿದ್ದ ಚಿನ್ನದ ಲೇಪಿತ ಛಾವಣಿ ಸೋರುತಿದೆ!

ಬೆಂಗಳೂರಿನ ಅಯ್ಯಪ್ಪ ದೇವಸ್ಥಾನದಿಂದ ಇರುಮುಡಿಕಟ್ಟು ತುಂಬಿಕೊಂಡು ಕೇರಳದ ಪಟ್ಟಣಂತಿಟ್ಟಗೆ ತೆರಳಿದ ಸಚಿವರು, ಯಾತ್ರಾರ್ಥಿಗಳೊಂದಿಗೆ ಪಾದಯಾತ್ರೆ ಆರಂಭಿಸಿದ್ದರು. ಇಂದು ಬೆಳಗ್ಗೆ ಪಂಜಾಬದಿಂದ ಇರುಮುಡಿ ಹೊತ್ತುಕೊಂಡು ಪಾದಯಾತ್ರೆ ಆರಂಭಿಸಿದ ರಾಜೀವ್ ಚಂದ್ರಶೇಖರ್ ಒಂದೂವರೆ ಗಂಟೆಯಲ್ಲಿ ಅಯ್ಯಪ್ಪ ಸ್ವಾಮಿಯ ಸನ್ನಿಧಾನ ತಲುಪಿದ್ದಾರೆ. ಅಯ್ಯಪ್ಪನ ದರ್ಶನ ಪಡೆದ ರಾಜೀವ್ ಚಂದ್ರಶೇಖರ್ ಬಳಿಕ ಪೂಜೆ ಸಲ್ಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ