ನನ್ನ 18 ವರ್ಷದ ಸಾರ್ವಜನಿಕ ಸೇವೆ ಈ ರೀತಿ ಅಂತ್ಯವಾಗುತ್ತೆಂದು ನಿರೀಕ್ಷಿಸಿರಲಿಲ್ಲ: ರಾಜೀವ್ ಚಂದ್ರಶೇಖರ್

Rajeev Chandrashekhar X Post: ಚುನಾವಣಾ ಸೋಲಿನೊಂದಿಗೆ ನನ್ನ 18 ವರ್ಷದ ಸಾರ್ವಜನಿಕ ಅಂತ್ಯವಾಗುವ ನಿರೀಕ್ಷೆ ಇರಲಿಲ್ಲ ಎಂದು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಮೋದಿ ನೇತೃತ್ವದ ಎರಡನೇ ಸರ್ಕಾರದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ತನ್ನ ಪಾಲಿನ ಭಾಗ್ಯ ಎಂದು ಅವರು ಹೇಳಿಕೊಂಡಿದ್ದಾರೆ. ರಾಜೀವ್ ಚಂದ್ರಶೇಖರ್ ಅವರು ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಿಂದ ಸ್ಪರ್ಧಿಸಿ ಶಶಿ ತರೂರ್ ಎದುರು ಸೋಲಪ್ಪಿದ್ದರು.

ನನ್ನ 18 ವರ್ಷದ ಸಾರ್ವಜನಿಕ ಸೇವೆ ಈ ರೀತಿ ಅಂತ್ಯವಾಗುತ್ತೆಂದು ನಿರೀಕ್ಷಿಸಿರಲಿಲ್ಲ: ರಾಜೀವ್ ಚಂದ್ರಶೇಖರ್
ರಾಜೀವ್ ಚಂದ್ರಶೇಖರ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 09, 2024 | 7:57 PM

ನವದೆಹಲಿ, ಜೂನ್ 9: ನನ್ನ ಸಾರ್ವಜನಿಕ ಜೀವನವು ಚುನಾವಣೆಯಲ್ಲಿ ಸೋಲಿನೊಂದಿಗೆ ಅಂತ್ಯವಾಗುತ್ತದೆ ಎಂದು ಭಾವಿಸಿರಲಿಲ್ಲ ಎಂದು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇಂದು ಭಾನುವಾರ ಹೇಳಿದ್ದಾರೆ. ಮೋದಿ 2.0 ಸರ್ಕಾರದಲ್ಲಿ ಸಚಿವರಾಗಿದ್ದ ರಾಜೀವ್ ಚಂದ್ರಶೇಖರ್ ಅವರಿಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ಕೈತಪ್ಪಿದೆ. ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್​ನ ಶಶಿ ತರೂರ್ ಎದುರು ಸೋಲಪ್ಪಿದ್ದರು. ಈ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಈ ವೇಳೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ ಅವರು, ತಾನು ಬಿಜೆಪಿ ಕಾರ್ಯಕರ್ತನಾಗಿ ಪಕ್ಷದ ಪರವಾಗಿ ಕೆಲಸ ಮುಂದುವರಿಸುವುದಾಗಿ ಹೇಳಿದ್ದಾರೆ.

‘ಇವತ್ತು ನನ್ನ 18 ವರ್ಷದ ಸಾರ್ವಜನಿಕ ಸೇವೆ ಅಂತ್ಯವಾಗುತ್ತಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೋದಿ 2.0 ತಂಡದಲ್ಲಿ 3 ವರ್ಷ ಸೇವೆ ಸಲ್ಲಿಸುವ ಸೌಭಾಗ್ಯ ನನ್ನದಾಗಿತ್ತು. ಚುನಾವಣೆಯಲ್ಲಿ ಸೋಲು ಮೂಲಕ ನನ್ನ 18 ವರ್ಷದ ಸಾರ್ವಜನಿಕ ಸೇವೆ ನಿಲ್ಲಿಸುತ್ತೇನೆಂದು ಭಾವಿಸಿರಲಿಲ್ಲ. ನನಗೆ ಬೆಂಬಲ ನೀಡಿದ ಕಾರ್ಯಕರ್ತರು, ನಾಯಕರಿಗೆ ನನ್ನ ಧನ್ಯವಾದಗಳು. ಕಳೆದ 3 ವರ್ಷದಲ್ಲಿ ನನ್ನೊಂದಿಗೆ ಇದ್ದ ಸಹೋದ್ಯೋಗಿಗಳಿಗೂ ಧನ್ಯವಾದಗಳು. ಬಿಜೆಪಿ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ಕೆಲಸ ಮುಂದುವರಿಸುತ್ತೇನೆ,’ ಎಂದು ರಾಜೀವ್ ಚಂದ್ರಶೇಖರ್ ತಮ್ಮ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: 72 ಸಚಿವರು, 11 ಮಿತ್ರರಾಷ್ಟ್ರಗಳು, 24 ರಾಜ್ಯಗಳು; ಪ್ರಮಾಣ ವಚನ ಸ್ವೀಕರಿಸಿದ ಮೋದಿಯ ಹೊಸ ಟೀಂ

ರಾಜೀವ್ ಚಂದ್ರಶೇಖರ್ ಕೇರಳ ಮೂಲದವರಾದರೂ ಬೆಂಗಳೂರಿನ ಉದ್ಯಮಿಯಾಗಿದ್ದವರು. ಬಿಜೆಪಿಯ ವಿವಿಧ ಸ್ತರದ ಸಂಘಟನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯಸಭೆ ಮೂಲಕ ಸಂಸತ್ ಪ್ರವೇಶಿಸಿದ ಅವರು 2020ರಲ್ಲಿ ಕೇಂದ್ರ ಸಚಿವರಾಗಿ ಕೆಲಸ ಆರಂಭಿಸಸಿದರು. ಎಲೆಕ್ಟ್ರಾನಿಕ್ಸ್, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಮೂರು ವರ್ಷ ಕೆಲಸ ಮಾಡಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರು ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಎದುರು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತರು. ಶಶಿತರೂರ್ ಶೇ. 37.2ರಷ್ಟು ಮತ ಪಡೆದರೆ, ರಾಜೀವ್ ಚಂದ್ರಶೇಖರ್ ಪಡೆದ ಮತಗಳ ಪ್ರಮಾಣ ಶೇ. 35.5ರಷ್ಟಿದೆ. ಸೋಲುವ ಮುನ್ನ ಕಠಿಣ ಪೈಪೋಟಿ ನೀಡುವಲ್ಲಿ ಸಫಲರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಎನ್ಕೌಂಟರ್ ಮಾಡಿಸುವ ಪ್ರಯತ್ನ ಅಂತ ರವಿ ಭಾವಿಸಿದ್ದರೆ ತನಿಖೆಯಾಗಲಿ: ಸಚಿವ
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಅಪಘಾತದಲ್ಲಿ ಮೃತಪಟ್ಟ ಬಾಸ್​ ಬಗ್ಗೆ ಸಿಬ್ಬಂದಿಗಳ ನೋವಿನ ಮಾತು
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್!
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
‘ನೀವು ಈ ಆಟಕ್ಕೆ ಫಿಟ್ ಅಲ್ಲ’; ಚೈತ್ರಾಗೆ ನೇರವಾಗಿ ಹೇಳಿದ ಸುದೀಪ್
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಪ್ರಕರಣ ಈಗ ಹಕ್ಕು ಭಾಧ್ಯತಾ ಸಮಿತಿ ಮುಂದಿದೆ: ಸತೀಶ್ ಜಾರಕಿಹೊಳಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಅಶ್ಲೀಲ ಪದಬಳಕೆ ಕಂಡುಬಂದರೆ ಅದನ್ನು ಎಥಿಕ್ಸ್ ಕಮಿಟಿಗೆ ರವಾನೆ: ಹೊರಟ್ಟಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ಪ್ರಧಾನಿ ಮೋದಿಯನ್ನ ಭೇಟಿಯಾದ 101 ವರ್ಷದ ಐಎಫ್‌ಎಸ್ ಅಧಿಕಾರಿ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ವಕ್ಫ್ ಬೋರ್ಡ್ ಭೂಕಬಳಿಕೆ ಸಮರ್ಥವಾಗಿ ಸದನದಲ್ಲಿ ಮಂಡಿಸಿದ್ದೇವೆ: ಅಶೋಕ
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಡಿವೈಡರ್​ಗೆ ಗುದ್ದಿ ಕಾರಿನ ಮೇಲೆ ಕಂಟೇನರ್​ ಬೀಳುತ್ತಿರುವ ಭಯಾನಕ ದೃಶ್ಯ!
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್
ಕಾನೂನು ಕೈಗೆತ್ತಿಕೊಳ್ಳಬಾರದು ಅಂತ ಸಹಿಸಿಕೊಂಡೆ: ಮೃಣಾಲ್ ಹೆಬ್ಬಾಳ್ಕರ್