Rajesh Das: ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ, ತಮಿಳುನಾಡಿನ ಮಾಜಿ ಡಿಜಿಪಿ ರಾಜೇಶ್ ದಾಸ್​​ಗೆ 3 ವರ್ಷ ಜೈಲು

ತಮಿಳುನಾಡಿನ ಮಾಜಿ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರು ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಇಂದು ವಿಧಿಸಲಾಗಿದೆ.

Rajesh Das: ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ, ತಮಿಳುನಾಡಿನ ಮಾಜಿ ಡಿಜಿಪಿ ರಾಜೇಶ್ ದಾಸ್​​ಗೆ 3 ವರ್ಷ ಜೈಲು
ಮಾಜಿ ಡಿಜಿಪಿ ರಾಜೇಶ್ ದಾಸ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 16, 2023 | 1:00 PM

ಚೆನ್ನೈ: ತಮಿಳುನಾಡಿನ (Tamil Nadu) ಮಾಜಿ ಪೊಲೀಸ್ ಮಹಾನಿರ್ದೇಶಕ (DGP) ರಾಜೇಶ್ ದಾಸ್ (Rajesh das) ಅವರು ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಇಂದು ವಿಧಿಸಲಾಗಿದೆ. ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿಗೆ ವಿಲ್ಲುಪುರಂ ನ್ಯಾಯಾಲಯವು ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಫೆಬ್ರವರಿ 2021ರಲ್ಲಿ ಹಿರಿಯ ಅಧಿಕಾರಿ ರಾಜೇಶ್ ದಾಸ್ ವಿರುದ್ಧ ದೂರು ದಾಖಲಿಸಿದ್ದರು, ರಾಜೇಶ್ ದಾಸ್ ಅವರು ಅಂದಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸಾಮಿ ಅವರ ಭದ್ರತೆಗಾಗಿ ಕರ್ತವ್ಯದ ಮೇಲೆ ಹೋಗುತ್ತಿದ್ದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಈ ಕಾರಣಕ್ಕೆ ಅವರ ಮೇಲೆ ದೂರ ದಾಖಲಿಸಲಾಗಿತ್ತು ಮತ್ತು ಎಐಎಡಿಎಂಕೆ ಸರ್ಕಾರ ದಾಸ್ ಅವರನ್ನು ಅಮಾನತುಗೊಳಿಸಿತ್ತು, ಅಂದಿನ ಸರ್ಕಾರ ತನಿಖೆಗಾಗಿ ಆರು ಸದಸ್ಯರ ಸಮಿತಿಯನ್ನು ರಚಿಸಿತ್ತು. ಪ್ರಾಸಿಕ್ಯೂಷನ್ ಪೊಲೀಸ್ ಸಿಬ್ಬಂದಿ ಸೇರಿದಂತೆ 68 ಜನರ ಹೇಳಿಕೆಗಳನ್ನು ದಾಖಲಿಸಿದೆ. ರಾಜೇಶ್ ದಾಸ್ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದು, ತಕ್ಷಣದ ಜಾಮೀನು ಪಡೆಯಬಹುದು ಎಂದು ಪ್ರಾಸಿಕ್ಯೂಷನ್ ತಂಡದ ಸದಸ್ಯರೊಬ್ಬರು ಹೇಳಿದರು.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ ಆರೋಪದಿಂದ ತರುಣ್ ತೇಜ್​ಪಾಲ್ ಖುಲಾಸೆ; ಗೋವಾ ಸೆಷನ್ಸ್ ಕೋರ್ಟ್ ಈ ತೀರ್ಪು ನೀಡಲು ಕಾರಣಗಳೇನು?

ಈ ವಿಷಯವು 2021ರಲ್ಲಿ ಚುನಾವಣಾ ವಿಷಯವಾಗಿ ಮಾರ್ಪಟ್ಟಿತ್ತು ಮತ್ತು ಆಗಿನ ವಿರೋಧ ಪಕ್ಷದ ನಾಯಕ ಎಂಕೆ ಸ್ಟಾಲಿನ್ ನಾವು ಅಧಿಕಾರಕ್ಕೆ ಬಂದರೆ ಈ ಬಗ್ಗೆ ಸರಿಯಾದ ಕ್ರಮವನ್ನು ಕೈಗೊಳ್ಳಲಾಗುವುದು ಮತ್ತು ಶಿಕ್ಷೆಯನ್ನು ನೀಡಲಾಗುವುದು ಭರವಸೆ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್