AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ

ದೆಹಲಿಯಲ್ಲಿ 2 ದಿನಗಳ ಜಿ20 ಶೃಂಗಸಭೆ ನಿನ್ನೆಯಿಂದ ಶುರುವಾಗಿದೆ, ಎರಡನೇ ದಿನವಾದ ಇಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ತೆರಳಿದ್ದರೆ, ಇತ್ತ ಜಿ20 ನಾಯಕರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್​ಗೆ ಹೋಗಿದ್ದಾರೆ. ಸ್ಪೇನ್‌ನ ವೈಸ್​ಪ್ರೆಸಿಡೆಂಟ್ ನಾಡಿಯಾ ಕ್ಯಾಲ್ವಿನೋ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ಓಮನ್​ನ ಅಸ್ಸಾದ್ ಬಿನ್ ತಾರಿಕ್ ಬಿನ್ ತೈಮೂರ್ ಅಲ್ ಸೈದ್ ತೆರಳಿದ್ದಾರೆ.

ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ
ಮಹಾತ್ಮ ಗಾಂಧಿ
ನಯನಾ ರಾಜೀವ್
|

Updated on: Sep 10, 2023 | 8:50 AM

Share

ದೆಹಲಿಯಲ್ಲಿ 2 ದಿನಗಳ ಜಿ20 ಶೃಂಗಸಭೆ ನಿನ್ನೆಯಿಂದ ಶುರುವಾಗಿದೆ, ಎರಡನೇ ದಿನವಾದ ಇಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ತೆರಳಿದ್ದರೆ, ಇತ್ತ ಜಿ20 ನಾಯಕರು ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್​ಗೆ ಹೋಗಿದ್ದಾರೆ. ಸ್ಪೇನ್‌ನ ವೈಸ್​ಪ್ರೆಸಿಡೆಂಟ್ ನಾಡಿಯಾ ಕ್ಯಾಲ್ವಿನೋ, ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೂಂಗ್, ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ಓಮನ್​ನ ಅಸ್ಸಾದ್ ಬಿನ್ ತಾರಿಕ್ ಬಿನ್ ತೈಮೂರ್ ಅಲ್ ಸೈದ್ ತೆರಳಿದ್ದಾರೆ.

ಜಿ20 ಶೃಂಗಸಭೆಯ ಎರಡನೇ ದಿನದ ವೇಳಾಪಟ್ಟಿ

8.15 ರಿಂದ 9 ರವರೆಗೆ – ಜಾಗತಿಕ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ರಾಜ್‌ಘಾಟ್ ತಲುಪುತ್ತಾರೆ. ರಾಜ್‌ಘಾಟ್‌ನಲ್ಲಿರುವ ಲೀಡರ್ಸ್ ಲಾಂಜ್‌ನಲ್ಲಿ ಶಾಂತಿ ಗೋಡೆಗೆ ಸಹಿ ಹಾಕಲಿದ್ದಾರೆ. ಬೆಳಿಗ್ಗೆ 9 ರಿಂದ 9.20 ರವರೆಗೆ – ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವರು. ಮಹಾತ್ಮ ಗಾಂಧೀಜಿಯವರ ನೆಚ್ಚಿನ ಭಕ್ತಿಗೀತೆಗಳ ನೇರಪ್ರಸಾರ ನಡೆಯಲಿದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ: ಅಕ್ಷರಧಾಮಕ್ಕೆ ಭೇಟಿಕೊಟ್ಟ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ

9.20 – ಜಾಗತಿಕ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ಲೀಡರ್ಸ್ ಲಾಂಜ್‌ಗೆ ತೆರಳುತ್ತಾರೆ ಮತ್ತು ನಂತರ ಭಾರತ್ ಮಂಟಪಕ್ಕೆ ತೆರಳುತ್ತಾರೆ. 9.40 ರಿಂದ 10.15 ರವರೆಗೆ – ಜಾಗತಿಕ ನಾಯಕರು ಮತ್ತು ನಿಯೋಗಗಳ ಮುಖ್ಯಸ್ಥರು ಭಾರತ ಮಂಟಪವನ್ನು ತಲುಪುತ್ತಾರೆ. 10.15 ರಿಂದ 10.28 ರವರೆಗೆ ಭಾರತ ಮಂಟಪದ ದಕ್ಷಿಣ ಪ್ಲಾಜಾದಲ್ಲಿ ಸಸಿ ನೆಡುವ ಸಮಾರಂಭ ನಡೆಯಲಿದೆ. ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 12.30 ರವರೆಗೆ – ಜಿ 20 ಸಭೆಯ ಮೂರನೇ ಅಧಿವೇಶನ ಒನ್ ಫ್ಯೂಚರ್ ಪ್ರಾರಂಭವಾಗುತ್ತದೆ. ಸೆಪ್ಟೆಂಬರ್ 10 ರಂದು (ಭಾನುವಾರ) ಜಿ-20 ಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ 9 ದೇಶಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ. ಜಿ20 ಶೃಂಗಸಭೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ನಡುವೆ ಭಾನುವಾರ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದೆ. ಪ್ರಧಾನಿ ಮೋದಿ ಅವರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ ಮತ್ತು ಕೊಮೊರೊಸ್, ಟರ್ಕಿ, ಯುಎಇ, ದಕ್ಷಿಣ ಕೊರಿಯಾ, ಇಯು/ಇಸಿ, ಬ್ರೆಜಿಲ್ ಮತ್ತು ನೈಜೀರಿಯಾ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಫ್ರಾನ್ಸ್ ಅಧ್ಯಕ್ಷರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್