ರಜನಿಕಾಂತ್ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್ಸ್ಟಾರ್
‘ಅಣ್ಣಾತೆ’ ಚಿತ್ರದ ಶೂಟಿಂಗ್ಗೆ ರಜನಿಕಾಂತ್ ಹೈದರಾಬಾದ್ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.
ಹೈದರಾಬಾದ್: ತೀವ್ರ ರಕ್ತದೊತ್ತಡದಿಂದ ಬಳಲುತ್ತಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಮಧ್ಯಾಹ್ನ 3:30ರ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ.
‘ಅಣ್ಣಾತೆ’ ಚಿತ್ರದ ಶೂಟಿಂಗ್ಗೆ ರಜನಿಕಾಂತ್ ಹೈದರಾಬಾದ್ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಆದರೆ ಈಗ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ಅಭಿಮಾನಿಗಳಿಗೆ ಸಮಾಧಾನ ತಂದಿದೆ.
ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ರಜನಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ನಿನ್ನೆ ರಜನಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು, ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆದರೆ, ರಕ್ತದೊತ್ತಡ ಕಡಿಮೆ ಆಗಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಎಂದು ಹೇಳಿದ್ದರು.
ರಜನಿ ಆರೋಗ್ಯದಲ್ಲಿ ಸುಧಾರಣೆ ಕಂಡರೂ ತಗ್ಗದ ರಕ್ತದೊತ್ತಡ.. ವೈದ್ಯರ ಮಾಹಿತಿ
Published On - 3:46 pm, Sun, 27 December 20