ರಜನಿಕಾಂತ್​ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್​ಸ್ಟಾರ್​

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 27, 2020 | 6:03 PM

‘ಅಣ್ಣಾತೆ’ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್​ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.

ರಜನಿಕಾಂತ್​ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್​ಸ್ಟಾರ್​
ರಜನಿಕಾಂತ್​
Follow us on

ಹೈದರಾಬಾದ್: ತೀವ್ರ ರಕ್ತದೊತ್ತಡದಿಂದ ಬಳಲುತ್ತಿದ್ದ ಸೂಪರ್​ ಸ್ಟಾರ್​ ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಮಧ್ಯಾಹ್ನ 3:30ರ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ.

‘ಅಣ್ಣಾತೆ’ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್​ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಆದರೆ ಈಗ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ​ಅಭಿಮಾನಿಗಳಿಗೆ ಸಮಾಧಾನ ತಂದಿದೆ.

ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ರಜನಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿತ್ತು. ನಿನ್ನೆ ರಜನಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು,  ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆದರೆ, ರಕ್ತದೊತ್ತಡ ಕಡಿಮೆ ಆಗಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ,  ಎಂದು ಹೇಳಿದ್ದರು.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ರಜನಿಕಾಂತ್

ರಜನಿ ಆರೋಗ್ಯದಲ್ಲಿ ಸುಧಾರಣೆ ಕಂಡರೂ ತಗ್ಗದ ರಕ್ತದೊತ್ತಡ.. ವೈದ್ಯರ ಮಾಹಿತಿ

 

Published On - 3:46 pm, Sun, 27 December 20