ರಜನಿ ಆರೋಗ್ಯದಲ್ಲಿ ಸುಧಾರಣೆ ಕಂಡರೂ ತಗ್ಗದ ರಕ್ತದೊತ್ತಡ.. ವೈದ್ಯರ ಮಾಹಿತಿ

ಅನ್ನಾತೆ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.

ರಜನಿ ಆರೋಗ್ಯದಲ್ಲಿ ಸುಧಾರಣೆ ಕಂಡರೂ ತಗ್ಗದ ರಕ್ತದೊತ್ತಡ.. ವೈದ್ಯರ ಮಾಹಿತಿ
ರಜನಿಕಾಂತ್
Follow us
ರಾಜೇಶ್ ದುಗ್ಗುಮನೆ
| Updated By: Lakshmi Hegde

Updated on:Dec 26, 2020 | 3:27 PM

ಹೈದರಾಬಾದ್​: ರಕ್ತದೊತ್ತಡದಲ್ಲಿ ತೀವ್ರ ಏರಿಳಿತ ಕಂಡ ಹಿನ್ನೆಲೆಯಲ್ಲಿ ತಮಿಳಿನ ಸೂಪರ್​ಸ್ಟಾರ್​ ರಜನಿಕಾಂತ್​ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಆದರೆ, ರಕ್ತದೊತ್ತಡ ತಗ್ಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.

‘ಅನ್ನಾತೆ’ ಚಿತ್ರದ ಶೂಟಿಂಗ್​ಗೆ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಆದರೆ, ಸಿನಿಮಾ ತಂಡದ ತಾಂತ್ರಿಕ ವರ್ಗದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್​ ನಿಲ್ಲಿಸಲಾಗಿತ್ತು. ಈ ಬೆನ್ನಲ್ಲೇ ರಜನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.

ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ರಜನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯರು, ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆದರೆ, ರಕ್ತದೊತ್ತಡ ಕಡಿಮೆ ಆಗಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮತ್ತೊಮ್ಮೆ ಅವರನ್ನು ಪರೀಕ್ಷೆ ಮಾಡಿ ರಾತ್ರಿ ಮತ್ತೆ ವರದಿ ನೀಡುತ್ತೇವೆ ಎಂದು ಹೇಳಿದ್ದಾರೆ.

ಇಂದು ಸಂಜೆ ಮತ್ತೊಂದು ಪರೀಕ್ಷೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಈ ಪರೀಕ್ಷೆಯಲ್ಲಿ ಅವರು ಚೇತರಿಕೆ ಕಂಡಿದ್ದು ತಿಳಿದು ಬಂದರೆ ಅವರನ್ನು ಇಂದೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ವೈದ್ಯರು ಚಿಂತನೆ ನಡೆಸಿದ್ದಾರೆ. ಇನ್ನು, ರಜನಿಕಾಂತ್​ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಜೊತೆಯಲ್ಲಿದ್ದವರಿಗೆ ಕೊರೊನಾ ಪಾಸಿಟಿವ್: ನಟ ರಜನಿಕಾಂತ್​ ಆಸ್ಪತ್ರೆಗೆ ದಾಖಲು

Published On - 3:27 pm, Sat, 26 December 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ