ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಪಕ್ಷದ ಚಿಹ್ನೆ ಆಟೋರಿಕ್ಷಾ?

ತಮಿಳುನಾಡು ರಾಜಕೀಯ ರಂಗಕ್ಕೆ ಎಂಟ್ರಿಕೊಟ್ಟಿರುವ ಸೂಪರ್​​ಸ್ಟಾರ್ ರಜನಿಕಾಂತ್ ಅವರ ಪಕ್ಷದ ಹೆಸರು 'ಮಕ್ಕಳ್ ಸೇವೈ ಕಟ್ಚಿ' ಹಾಗೂ ಪಕ್ಷದ ಚಿಹ್ನೆ ಆಟೋ ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು 'ಮಕ್ಕಳ್ ಸೇವೈ ಕಟ್ಚಿ' ಪಕ್ಷದ ಚಿಹ್ನೆ ಆಟೋರಿಕ್ಷಾ?
ರಜನಿಕಾಂತ್​
Follow us
ರಶ್ಮಿ ಕಲ್ಲಕಟ್ಟ
|

Updated on:Dec 15, 2020 | 3:49 PM

ಚೆನ್ನೈ: ತಮಿಳುನಾಡು ರಾಜಕೀಯ ರಂಗಕ್ಕೆ ಎಂಟ್ರಿಕೊಟ್ಟಿರುವ ಸೂಪರ್​​ಸ್ಟಾರ್ ರಜನಿಕಾಂತ್ ಅವರ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಹಾಗೂ ಪಕ್ಷದ ಚಿಹ್ನೆ ಆಟೋ ಎಂದು ಸುದ್ದಿಮೂಲಗಳು ವರದಿ ಮಾಡಿವೆ.

ಮಕ್ಕಳ್ ಸೇವೈ ಕಟ್ಚಿ  ಪಕ್ಷದ ಚಿಹ್ನೆಯಾಗಿ ಆಟೋರಿಕ್ಷಾ ಬಳಕೆಗೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಅಂದ ಹಾಗೆ, ಪಕ್ಷದ ಹೆಸರು ಮತ್ತು ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ರಜನಿಕಾಂತ್ ಹೆಸರು ಉಲ್ಲೇಖಿಸಲಾಗಿದೆ. ಆದರೆ, ಅರ್ಜಿ ಸಲ್ಲಿಸಿದವರ ಹೆಸರು ಸದ್ಯ ಬಹಿರಂಗವಾಗಿಲ್ಲ.

ಪಕ್ಷದ ಚಿಹ್ನೆಯಾಗಿ ‘ಹಸ್ತ ಮುದ್ರೆ’ ಬೇಕು ಎಂದು ಮಕ್ಕಳ್ ಸೇವೈ ಕಟ್ಚಿ ಪಕ್ಷ ಮನವಿ ಸಲ್ಲಿಸಿತ್ತು. ಆದರೆ, ಈಗಾಗಲೇ ಹಸ್ತ ಚಿಹ್ನೆ ಕಾಂಗ್ರೆಸ್ ಪಕ್ಷದ ಚಿಹ್ನೆಯಾಗಿರುವುದರಿಂದ , ಮಕ್ಕಳ್ ಸೇವೈ ಕಟ್ಚಿ ಪಕ್ಷಕ್ಕೆ ಆಟೋರಿಕ್ಷಾ ಚಿಹ್ನೆ ನೀಡಲಾಗಿದೆ. ಅಂದ ಹಾಗೆ, 1995ರಲ್ಲಿ ರಿಲೀಸ್​ ಆದ ಬ್ಲಾಕ್ ಬಸ್ಟರ್ ಸಿನಿಮಾ ಬಾಷಾದಲ್ಲಿ ರಜನಿಕಾಂತ್ ಆಟೋಚಾಲಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ವದಂತಿಗೆ ಸ್ಪಷ್ಟನೆ ನೀಡಿದ ಸೂಪರ್​ಸ್ಟಾರ್ ರಜಿನಿಕಾಂತ್ ಒಳ್ಳೆಯದನ್ನು ಯೋಚಿಸೋಣ, ಒಳ್ಳೇದು ಮಾತಾಡೋಣ.  ಒಳ್ಳೆಯದನ್ನು ಮಾಡೋಣ, ಒಳ್ಳೆಯದು ಸಂಭವಿಸುತ್ತದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗುವವರೆಗೂ ಕಾಯಬೇಕು ಎಂದು ರಜನಿಕಾಂತ್  ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ

ರಜನಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ  ಅಭಿಮಾನಿಗಳು, ಬೆಂಬಲಿಗರು ಅಧಿಕೃತ ಘೋಷಣೆ ಆಗುವವರೆಗೂ ಕಾಯಬೇಕು  ಎಂದು ಅವರು ಹೇಳಿದ್ದಾರೆ.

ರಾಜಕೀಯಕ್ಕೆ ರಜನಿಕಾಂತ್: ಏನಾಗಬಹುದು ತಮಿಳುನಾಡು ರಾಜಕಾರಣ?

Published On - 12:07 pm, Tue, 15 December 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ