ರಾಜೀವ್ ಗಾಂಧಿ ಹಂತಕರ ಬಿಡುಗಡೆ; ಸೋನಿಯಾ ಗಾಂಧಿ ಅಭಿಪ್ರಾಯಕ್ಕೆ ಸಹಮತವಿಲ್ಲ ಎಂದ ಕಾಂಗ್ರೆಸ್

2008 ರಲ್ಲಿ ರಾಜೀವ್ ಗಾಂಧಿಯವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ನಳಿನಿಯನ್ನು ವೆಲ್ಲೂರು ಜೈಲಿನಲ್ಲಿ ಭೇಟಿಯಾದರು. 2014ರಲ್ಲಿ ಇನ್ನೂ ಆರು ಅಪರಾಧಿಗಳ ಶಿಕ್ಷೆಯನ್ನು ಕೂಡ ತಗ್ಗಿಸಲಾಯಿತು...

ರಾಜೀವ್ ಗಾಂಧಿ ಹಂತಕರ ಬಿಡುಗಡೆ; ಸೋನಿಯಾ ಗಾಂಧಿ ಅಭಿಪ್ರಾಯಕ್ಕೆ ಸಹಮತವಿಲ್ಲ ಎಂದ ಕಾಂಗ್ರೆಸ್
ನಳಿನಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 11, 2022 | 6:09 PM

ದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ(Rajiv Gandhi assassination case) ನಳಿನಿ ಶ್ರೀಹರನ್ ಮತ್ತು ಇತರ ಐವರು ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಸುಪ್ರೀಂಕೋರ್ಟ್ (Supreme Court) ತೀರ್ಪನ್ನು ಕಾಂಗ್ರೆಸ್ ಟೀಕಿಸಿದ್ದು, ಈ ಬಗ್ಗೆ ಸೋನಿಯಾ ಗಾಂಧಿಯವರೊಂದಿಗೆ ಭಿನ್ನಾಭಿಪ್ರಾಯವಿದೆ ಎಂದು ಹೇಳಿದೆ. ಇದಕ್ಕೆ ಕಾನೂನು ರೀತಿಯಲ್ಲಿ ಪರಿಹಾರಗಳನ್ನು ಹುಡುಕುವುದಾಗಿ ಕಾಂಗ್ರೆಸ್ ಹೇಳಿದೆ. ಈ ಸಂದರ್ಭದಲ್ಲಿ, ಕಾಂಗ್ರೆಸ್ ದೃಷ್ಟಿಕೋನವು ಕೇಂದ್ರ ಸರ್ಕಾರದಂತೆಯೇ ಇದೆ. ಪಕ್ಷವು ಸೋನಿಯಾ ಗಾಂಧಿಯವರ ಅಭಿಪ್ರಾಯವನ್ನು ಒಪ್ಪುವುದಿಲ್ಲ, ಆ ನಿಲುವನ್ನು ಎಂದಿಗೂ ಒಪ್ಪಿಲ್ಲ. ವರ್ಷಗಳಿಂದ ಈ ಅಭಿಪ್ರಾಯವನ್ನು ಸ್ಪಷ್ಟಪಡಿಸಿದೆ” ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ. ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ಗುಂಪಿನ ಮಹಿಳಾ ಆತ್ಮಹತ್ಯಾ ಬಾಂಬರ್‌ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದ್ದಳು. ಹತ್ಯೆ ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ ಮರಣದಂಡನೆ ವಿಧಿಸಲಾಯಿತು. 2000 ರಲ್ಲಿ, ರಾಜೀವ್ ಗಾಂಧಿ ಅವರ ಪತ್ನಿ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮಧ್ಯಸ್ಥಿಕೆಯ ಮೇಲೆ ನಳಿನಿ ಶ್ರೀಹರನ್ ಅವರ ಶಿಕ್ಷೆಯನ್ನು ಜೀವಾವಧಿಗೆ ಇಳಿಸಲಾಯಿತು.

2008 ರಲ್ಲಿ ರಾಜೀವ್ ಗಾಂಧಿಯವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ನಳಿನಿಯನ್ನು ವೆಲ್ಲೂರು ಜೈಲಿನಲ್ಲಿ ಭೇಟಿಯಾದರು. 2014ರಲ್ಲಿ ಇನ್ನೂ ಆರು ಅಪರಾಧಿಗಳ ಶಿಕ್ಷೆಯನ್ನು ಕೂಡ ತಗ್ಗಿಸಲಾಯಿತು. ಅದೇ ವರ್ಷ, ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರನ್ನು ಬಿಡುಗಡೆ ಮಾಡಲು ಕ್ರಮಗಳನ್ನು ಪ್ರಾರಂಭಿಸಿದರು.

ಗರ್ಭಿಣಿಯಾಗಿದ್ದ ನಳಿನಿಯನ್ನು ಬಂಧಿಸಿದಾಗ ಆಕೆಗೆ ಕ್ಷಮೆ ನೀಡಬೇಕೆಂದು ಸೋನಿಯಾ ಗಾಂಧಿ ನ್ಯಾಯಾಲಯವನ್ನು ಒತ್ತಾಯಿಸಿದ್ದರು. ಸೋನಿಯಾ ಗಾಂಧಿ ಅವರು ವರ್ಷಗಳ ಹಿಂದೆಯೇ ಹೇಳಿಕೆ ನೀಡಿದ್ದಾರೆ ಎಂದು ಎನ್‌ಡಿಟಿವಿಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಂಘ್ವಿ ಹೇಳಿದರು.

“ನಮ್ಮ ನಿಲುವಿನ ಬಗ್ಗೆ ನಾವು ಸ್ಥಿರವಾಗಿದ್ದೇವೆ. ಇದು ಸಾಂಸ್ಥಿಕ ವಿಷಯವಾಗಿದೆ. ಮಾಜಿ ಪ್ರಧಾನಿಯ ಹತ್ಯೆಯಲ್ಲಿ ರಾಷ್ಟ್ರದ ಸಾರ್ವಭೌಮತೆ, ಸಮಗ್ರತೆ ಮತ್ತು ಗುರುತನ್ನು ಒಳಗೊಂಡಿರುತ್ತದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು.

Published On - 6:07 pm, Fri, 11 November 22

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್