Rajiv Gandhi Assassination Case: 3 ದಶಕಗಳ ನಂತರ ಅಪರಾಧಿ ನಳಿನಿ ಶ್ರೀಹರನ್ ಜೈಲಿನಿಂದ ಬಿಡುಗಡೆ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರದಂದು ಸುಪ್ರೀಮ ಕೋರ್ಟ್ ರಾಜೀವ್ ಗಾಂಧಿ ಅವರ ಹತ್ಯೆ ಮಾಡಿದ ಹಂತಕರ ಬಿಡುಗಡೆ ಮಾಡುವಂತೆ ಆದೇಶವನ್ನು ನೀಡಿತ್ತು. ಇದೀಗ ಸಂಬಂಧಿಸಿದಂತೆ ಅಪರಾಧಿ ನಳಿನಿ ಶ್ರೀಹರನ್ನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಅವರ ಹತ್ಯೆ ಮಾಡಿದ ಹಂತಕರನ್ನು ಬಿಡಡುಗಡೆಗೊಳಿಸಿ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರದಂದು (ನ,11) ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ತೀರ್ಪಿನ ಮರುದಿನ ಇಂದು ರಾಜೀವ್ ಗಾಂಧಿ ಹತ್ಯೆ ಅಪರಾಧಿ ನಳಿನಿ ಶ್ರೀಹರನ್ನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ಮಾಡಿ ಆದೇಶವನ್ನು ಸುಪ್ರೀಂ ಕೋರ್ಟ್ ಹೊರಡಿಸಿತ್ತು. ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಇತರ ಐವರನ್ನು ಬಿಡುಗಡೆ ಮಾಡಲು ಸುಪ್ರೀಂ ಆದೇಶ ನೀಡಿತ್ತು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಾದ ನಳಿನಿ ಶ್ರೀಹರನ್ (Nalini Sriharan) ಮತ್ತು ಆರ್‌ಪಿ ರವಿಚಂದ್ರನ್ (RP Ravichandran) ಅವರನ್ನು ಅವಧಿಗೂ ಮೊದಲೇ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು. ನಾವು ಈಗಾಗಲೇ 30 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದೇವೆ. ರಾಜೀವ್ ಗಾಂಧಿಯ ಕೊಲೆಯ 7 ಅಪರಾಧಿಗಳ ಶಿಕ್ಷೆಯ ಅವಧಿಯನ್ನು ಕಡಿಮೆ ಮಾಡಲು ತಮಿಳುನಾಡು ಸರ್ಕಾರ 4 ವರ್ಷಗಳ ಹಿಂದೆಯೇ ಒಪ್ಪಿಕೊಂಡಿತ್ತು ಎಂದು ಅಪರಾಧಿಗಳಾದ ಎಸ್ ನಳಿನಿ ಮತ್ತು ಆರ್‌ಪಿ ರವಿಚಂದ್ರನ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.
Vellore, Tamil Nadu | Nalini Sriharan, one of the six convicts in the assassination of former PM Rajiv Gandhi released from Vellore Jail. pic.twitter.com/SV6JzO62ft
— ANI (@ANI) November 12, 2022
ಅವಧಿಗೆ ಮೊದಲೇ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಕೋರಿ ರಾಜೀವ್ ಗಾಂಧಿ ಹಂತಕರು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಗೆ ತಮಿಳುನಾಡು ಸರ್ಕಾರ ಬೆಂಬಲ ನೀಡಿತ್ತು. ತಮ್ಮ ಸಹ ಅಪರಾಧಿ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿದಂತೆ ತಮ್ಮನ್ನೂ ಬಿಡುಗಡೆ ಮಾಡುವಂತೆ ಕೋರಿ ನಳಿನಿ ಮತ್ತು ರವಿಚಂದ್ರನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರದಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿತ್ತು.
1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದರು. ಇದೀಗ ಮಾಜಿ ಪ್ರಧಾನಿಯನ್ನು ಹತ್ಯೆ ಮಾಡಿದ ಅಪರಾಧಿಗಳನ್ನು ಇಂದು ಬಿಡುಗಡೆಗೊಳಿಸುವಂತೆ ಆದೇಶವನ್ನು ಸುಪ್ರೀಂ ಆದೇಶವನ್ನು ನೀಡಿದೆ.
Published On - 5:22 pm, Sat, 12 November 22