Rajiv Gandhi Assassination Case: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು

ರಾಜೀವ್​ ಗಾಂಧಿ(Rajiv Gandhi) ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಸಂತನ್​ ಬುಧವಾರ ಬೆಳಗ್ಗೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Rajiv Gandhi Assassination Case: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು
Follow us
|

Updated on:Feb 28, 2024 | 9:13 AM

ರಾಜೀವ್​ ಗಾಂಧಿ(Rajiv Gandhi) ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಸಂತನ್​(Santhan) ಬುಧವಾರ ಬೆಳಗ್ಗೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂತನ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದರು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಬಿಡುಗಡೆಯಾದ ಬಳಿಕ ಅವರನ್ನು ತಿರುಚ್ಚಿಯ ಕೇಂದ್ರ ಕಾರಾಗೃಹದ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು.

ನವೆಂಬರ್ 11, 2022 ರಂದು, ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದೇಶದ ಮರುದಿನವೇ ನಳಿನಿ, ಶ್ರೀಹರನ್, ಸಂತನ್, ರಾಬರ್ಟ್ ಪಾಯಸ್, ಜಯಕುಮಾರ್ ಮತ್ತು ರವಿಚಂದ್ರನ್ 32 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದರು.

ಇಲ್ಲಿ ಒಂದು ಸಮಸ್ಯೆ ಇತ್ತು. ನಳಿನಿ ಮತ್ತು ರವಿಚಂದ್ರನ್ ಅವರನ್ನು ಬಿಡುಗಡೆ ಮಾಡಲಾಯಿತು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡಲು ಅವಕಾಶ ನೀಡಲಾಯಿತು ಆದರೆ ಉಳಿದ ನಾಲ್ವರನ್ನು ತಿರುಚ್ಚಿ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು. ನಾಲ್ವರೂ ಶ್ರೀಲಂಕಾದ ಪ್ರಜೆಗಳಾಗಿದ್ದರಿಂದ ಹೀಗೆ ಮಾಡಲಾಗಿತ್ತು.

ಸಂತನ್ ಅವರು ತಿರುಚ್ಚಿ ಜೈಲಿನ ವಿಶೇಷ ಶಿಬಿರದಲ್ಲಿರುವ ತಮ್ಮ ಸೆಲ್ ನಿಂದ ಬಹಿರಂಗ ಪತ್ರ ಬರೆದಿದ್ದರು. ತ್ರದ ಮೂಲಕ, ಅವರು ತಮ್ಮ ದೇಶಕ್ಕೆ ಮರಳಲು ಧ್ವನಿ ಎತ್ತುವಂತೆ ವಿಶ್ವದಾದ್ಯಂತದ ತಮಿಳರಿಗೆ ಮನವಿ ಮಾಡಿದ್ದರು.

ಮತ್ತಷ್ಟು ಓದಿ: ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಎಜಿ ಪೇರರಿವಾಲನ್‌ಗೆ ಸುಪ್ರೀಂಕೋರ್ಟ್ ಜಾಮೀನು

32 ವರ್ಷಗಳಿಂದ ತಾಯಿಯನ್ನು ನೋಡಿಲ್ಲ ಎಂದಿದ್ದರು ನನ್ನನ್ನು ಶ್ರೀಲಂಕಾಕ್ಕೆ ಕಳುಹಿಸಲು ವ್ಯವಸ್ಥೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವರು ಮತ್ತು ವಿದೇಶಾಂಗ ಸಚಿವರಿಗೆ ಪತ್ರ ಬರೆದಿದ್ದರು. ನನ್ನ ಪಾಸ್‌ಪೋರ್ಟ್ ಅನ್ನು ನವೀಕರಿಸಲು ಚೆನ್ನೈನಲ್ಲಿರುವ ಶ್ರೀಲಂಕಾದ ಡೆಪ್ಯುಟಿ ಹೈಕಮಿಷನ್ ಕಚೇರಿಗೆ ಹೋಗಲು ನನಗೆ ಅನುಮತಿ ನೀಡುವಂತೆ ನಾನು ಅಧಿಕಾರಿಗಳನ್ನು ವಿನಂತಿಸಿದೆ. ನನಗೆ ಇನ್ನೂ ಯಾವುದೇ ಉತ್ತರವೇ ಬಂದಿಲ್ಲ ಎಂದಿದ್ದರು.

ಕೊಠಡಿಯ ಕಿಟಕಿಗಳನ್ನೂ ಮುಚ್ಚಲಾಗಿತ್ತು ಸಂತಾನ್ ಅವರು, ಕಳೆದ ಆರು ತಿಂಗಳಿನಿಂದ ನಾನು ತಿರುಚ್ಚಿ ಕೇಂದ್ರ ಕಾರಾಗೃಹದ ವಿಶೇಷ ಶಿಬಿರದಲ್ಲಿ ಇದ್ದೇನೆ. ಇಲ್ಲಿನ ಶಿಬಿರದಲ್ಲಿ ಒಟ್ಟು 120 ವಿದೇಶಿಗರಿದ್ದು, ಈ ಪೈಕಿ ಸುಮಾರು 90 ಮಂದಿ ಶ್ರೀಲಂಕಾದವರು. ಕಿಟಕಿಗಳನ್ನು ಟಿನ್ ಶೀಟ್‌ಗಳಿಂದ ಮುಚ್ಚಲಾಗಿದೆ ಸೂರ್ಯನ ಬೆಳಕೂ ಬರುವುದಿಲ್ಲ, ಫೋನ್‌ನಲ್ಲಿ ಮಾತನಾಡಲೂ ಬಿಡುತ್ತಿಲ್ಲ ಎಂದು ಪತ್ರದಲ್ಲಿ ಬರೆದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:03 am, Wed, 28 February 24

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?