ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು. ಈ ವಿಚಾರವನ್ನ ಆ ಕೈದಿ ಜೈಲರ್​ […]

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Jul 21, 2020 | 12:14 PM

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು.

ಈ ವಿಚಾರವನ್ನ ಆ ಕೈದಿ ಜೈಲರ್​ ಗಮನಕ್ಕೆ ತಂದಿದ್ದ ಕಾರಣದಿಂದ ಮನನೊಂದ ನಳಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪುಗಳೇಂದಿ ಮಾಹಿತಿ ನೀಡಿದ್ದಾರೆ.

ನನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಿ ಜೊತೆಗೆ, ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ. ಹೀಗಾಗಿ, ಈ ನಿರ್ಧಾರದ ಹಿಂದಿನ ಸ್ಪಷ್ಟ ಕಾರಣವೇನು ಎಂದು ತಿಳಿಯಬೇಕಿದೆ ಎಂದು ಪುಗಳೇಂದಿ ಹೇಳಿದ್ದಾರೆ. ಇದಲ್ಲದೆ, ನಳಿನಿಯ ಪತಿ ಮುರುಗನ್​ ಸಹ ಇದೇ ಕಾರಾಗೃಹದಲ್ಲಿದ್ದು ತನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಬೇಕೆಂಬ ಮನವಿ ಮಾಡಿಕೊಂಡಿದ್ದಾರಂತೆ.

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಮುರುಗನ್​​ ಸೇರಿ ಏಳು ಜನರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

Published On - 10:44 am, Tue, 21 July 20

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್