New Chief Election Commissioner ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ, ಭಾನುವಾರ ಅಧಿಕಾರ ಸ್ವೀಕಾರ

Rajiv Kumar ರಾಜೀವ್ ಕುಮಾರ್ 1984ರ ಬ್ಯಾಚ್ ಐಎಎಸ್ ಅಧಿಕಾರಿ ಆಗಿದ್ದಾರೆ. ಅವರು ಕೇಂದ್ರದ ವಿವಿಧ ಸಚಿವಾಲಯಗಳಲ್ಲಿ, ಬಿಹಾರ ಮತ್ತು ಜಾರ್ಖಂಡ್‌ನ ರಾಜ್ಯ ಕೇಡರ್‌ನಲ್ಲಿ ಕೆಲಸ ಮಾಡಿದ್ದಾರೆ.

New Chief Election Commissioner ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ, ಭಾನುವಾರ ಅಧಿಕಾರ ಸ್ವೀಕಾರ
ರಾಜೀವ್ ಕುಮಾರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 12, 2022 | 3:18 PM

ದೆಹಲಿ: ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ಭಾನುವಾರ (ಮೇ 15) ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಹಾಲಿ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮೇ 14 ರಂದು ನಿವೃತ್ತಿ ಹೊಂದಲಿದ್ದಾರೆ. ಸಂವಿಧಾನದ 324 ನೇ ವಿಧಿಯ ಕಲಂ (2) ರ ಅನುಸಾರವಾಗಿ, 2022 ರ ಮೇ 15 ರಿಂದ ಜಾರಿಗೆ ಬರುವಂತೆ ರಾಜೀವ್ ಕುಮಾರ್ (Rajiv Kumar) ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ (chief election commissioner) ನೇಮಿಸಲು ರಾಷ್ಟ್ರಪತಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಶ್ರೀ ರಾಜೀವ್ ಕುಮಾರ್ ಅವರಿಗೆ ಶುಭಾಶಯಗಳು ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಚಂದ್ರ ತಮ್ಮ ಅವಧಿಯನ್ನು ಶನಿವಾರ ಪೂರ್ಣಗೊಳಿಸಲಿದ್ದಾರೆ ಎಂದು ನೇಮಕಾತಿ ಪತ್ರದಲ್ಲಿ ತಿಳಿಸಲಾಗಿದೆ.  ರಾಜೀವ್ ಕುಮಾರ್ 1984ರ ಬ್ಯಾಚ್ ಐಎಎಸ್ ಅಧಿಕಾರಿ ಆಗಿದ್ದಾರೆ. ಅವರು ಕೇಂದ್ರದ ವಿವಿಧ ಸಚಿವಾಲಯಗಳಲ್ಲಿ, ಬಿಹಾರ ಮತ್ತು ಜಾರ್ಖಂಡ್‌ನ ರಾಜ್ಯ ಕೇಡರ್‌ನಲ್ಲಿ ಕೆಲಸ ಮಾಡಿದ್ದಾರೆ ಎಂದು ಸರ್ಕಾರದ ಹೇಳಿಕೆಯು ಈ ಹಿಂದೆ ಹೇಳಿತ್ತು. 62ರ ಹರೆಯದ ಕುಮಾರ್, ಸಾಮಾಜಿಕ ವಲಯ, ಪರಿಸರ ಮತ್ತು ಅರಣ್ಯಗಳು, ಮಾನವ ಸಂಪನ್ಮೂಲಗಳು, ಹಣಕಾಸು ಮತ್ತು ಬ್ಯಾಂಕಿಂಗ್ ವಲಯದಲ್ಲಿ ವ್ಯಾಪಕವಾದ ಕೆಲಸದ ಅನುಭವವನ್ನು ಹೊಂದಿದ್ದಾರೆ. ಅವರು ಫೆಬ್ರವರಿ 2020 ರಲ್ಲಿ ಹಣಕಾಸು ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು. ನಂತರ ಅವರು ಏಪ್ರಿಲ್ 2020 ರಿಂದ ಆಗಸ್ಟ್ 31 2020 ರಂದು ಅಧಿಕಾರ ತ್ಯಜಿಸುವವರೆಗೆ ಸಾರ್ವಜನಿಕ ಉದ್ಯಮಗಳ ಆಯ್ಕೆ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡರು.

ಕುಮಾರ್ ಅವರು 2015-17 ರಿಂದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸ್ಥಾಪನಾ ಅಧಿಕಾರಿ,ಅದಕ್ಕೂ ಮೊದಲು ಜಂಟಿ ಕಾರ್ಯದರ್ಶಿ, ಬುಡಕಟ್ಟು ವ್ಯವಹಾರಗಳ ಸಚಿವಾಲಯ, ಪರಿಸರ ಮತ್ತು ಅರಣ್ಯ ಸಚಿವಾಲಯ ಮತ್ತು ರಾಜ್ಯ ಕೇಡರ್‌ನಲ್ಲಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಭಾರತೀಯ ಶಾಸ್ತ್ರೀಯ , ಭಕ್ತಿ ಸಂಗೀತ  ಮತ್ತು ಚಾರಣದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಕುಮಾರ್ ಅವರು 2020 ರಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಮುಂದಿನ ಒಂದು ವರ್ಷದಲ್ಲಿ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಹಲವಾರು ರಾಜ್ಯಗಳು ಸಜ್ಜಾಗುತ್ತಿರುವಾಗ ಅವರ  ನೇಮಕಾತಿ ಹೆಚ್ಚಿನ ಮಹತ್ವವನ್ನು ಹೊಂದಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:51 pm, Thu, 12 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್