Chief Election Commissioner: ದೇಶದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ರಾಜೀವ್ ಕುಮಾರ್

| Updated By: ನಯನಾ ರಾಜೀವ್

Updated on: May 15, 2022 | 4:24 PM

Chief Election Commissioner:ದೇಶದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಿದರು. ಮೇ 14 ರಂದು ಸುಶೀಲ್ ಚಂದ್ರ ಅವರು ಅಧಿಕಾರದಿಂದ ನಿರ್ಗಮಿಸಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು.

Chief Election Commissioner: ದೇಶದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ರಾಜೀವ್ ಕುಮಾರ್
Rajiv Kumar
Follow us on

ನವದೆಹಲಿ: ದೇಶದ 25ನೇ ಮುಖ್ಯ ಚುನಾವಣಾ ಆಯುಕ್ತ(Chief Election Commissioner)ರಾಗಿರಾಜೀವ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಮೇ 14 ರಂದು ಸುಶೀಲ್ ಚಂದ್ರ ಅವರು ಅಧಿಕಾರದಿಂದ ನಿರ್ಗಮಿಸಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು. ಮೇ 15 ರಿಂದ ಅನ್ವಯವಾಗುವಂತೆ ರಾಜೀವ್ ಕುಮಾರ್ ಅವರನ್ನು ದೇಶದ ಚುನಾವಣಾ ಆಯೋಗದ ಮುಖ್ಯ ಆಯುಕ್ತರನ್ನಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿರುವುದಾಗಿ ನೋಟಿಫಿಕೇಷನ್​ನಲ್ಲಿ ತಿಳಿಸಲಾಗಿತ್ತು.

1984ರ ಬ್ಯಾಚ್​ನ ಬಿಹಾರ್/ ಜಾರ್ಖಂಡ್ ಕೇಡರ್ ನ ಐಐಎಸ್ ಅಧಿಕಾರಿಯಾಗಿರುವ ರಾಜೀವ್ ಕುಮಾರ್, ಸಾರ್ವಜನಿಕ ಉದ್ಯಮ ಆಯ್ಕೆ ಮಂಡಳಿ ಮುಖ್ಯಸ್ಥ ಸೇರಿದಂತೆ ಹಲವು ಪ್ರಮುಖ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಫೆಬ್ರವರಿ 2025ರವರೆಗೂ ಕುಮಾರ್ ಅವರ ಅಧಿಕಾರಾವಧಿ ಇರುವ ಸಾಧ್ಯತೆಯಿದೆ. 2024ರ ಲೋಕಸಭಾ ಚುನಾವಣೆ, ರಾಷ್ಟ್ರಪತಿ ಚುನಾವಣೆ, ಉಪ ರಾಷ್ಟ್ರಪತಿ ಚುನಾವಣೆ ಸೇರಿದಂತೆ ಅನೇಕ ರಾಜ್ಯಗಳ ವಿಧಾನಸಭಾ ಚುನಾವಣೆಯ ಮೇಲ್ವಿಚಾರಣೆ ಮಾಡಲಿದ್ದಾರೆ.

ಸಾರ್ವಜನಿಕ ಉದ್ಯಮಗಳ ಮಂಡಳಿ, ಜಾರ್ಖಂಡ್‌ ಆಡಳಿತಾತ್ಮಕ ಸೇವೆ, ಕೇಂದ್ರ ಹಣಕಾಸು ಸಚಿವಾಲಯದ ಪ್ರಮುಖ ಹುದ್ದೆಗಳಲ್ಲಿಕೆಲಸ ಮಾಡಿದ್ದಾರೆ. ಸಾರ್ವಜನಿಕ ಉದ್ಯಮಗಳ ಆಯ್ಕೆ ಸಮಿತಿ(ಪಿಇಎಸ್‌ಬಿ) ಯ ಅಧ್ಯಕ್ಷರಾಗಿಯೂ ಗಮನ ಸೇವೆ ಸಲ್ಲಿಸಿದ್ದಾರೆ.

ನೂತನ ಮುಖ್ಯ ಚುನಾವಣಾ ಆಯುಕ್ತರ ಮುಂದೆ ಸಾಲು ಸಾಲು ಚುನಾವಣೆಗಳನ್ನು ನಡೆಸುವ ಸವಾಲು ಇದೆ. ಈ ವರ್ಷಾಂತ್ಯ ಹಾಗೂ ಮುಂಬರುವ ವರ್ಷಗಳಲ್ಲಿ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ, ಜೂನ್‌ನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಗಳನ್ನು ನಡೆಸುವ ಅವರ ಮುಂದಿದೆ.

ಇದೇ ವರ್ಷದ ಅಂತ್ಯದಲ್ಲಿ ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಯ ಚುನಾವಣೆ ಇದ್ದು, 2023ರಲ್ಲಿ  ಛತ್ತೀಸ್‌ಘಡ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ, ನಾಗಾಲ್ಯಾಂಡ್‌, ಮೇಘಾಲಯ, ತ್ರಿಪುರ, ಕರ್ನಾಟಕ,  ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಇನ್ನು, 2024ರ ಲೋಕಸಭಾ ಚುನಾವಣೆಯ ನಂತರ ಸಿಕ್ಕಿಂ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ, ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ, ದಿಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅವುಗಳೆಲ್ಲವನ್ನೂ ನಿರ್ವಹಿಸುವ ಸವಾಲು ನೂತನ ಚುನಾವಣಾ ಆಯುಕ್ತರಿಗೆ ಇದೆ.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Sun, 15 May 22