AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಜತೆಗೆ ಸಭೆ ನಡೆಸಿದ ರಾಜನಾಥ್ ಸಿಂಗ್, ಅಜಿತ್ ದೋವಲ್, ಸೇನಾ ಮುಖ್ಯಸ್ಥರು

ಪ್ರಧಾನಿ ಮೋದಿ ಇಂದು ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು (ಸಿಡಿಎಸ್) ಮತ್ತು ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದಾರೆ. ನೆನ್ನೆ ನಡೆದ ದಾಳಿಯ ಬಗ್ಗೆ ಪಿನ್​​ ಟು ಪಿನ್​​ ವರದಿಯನ್ನು ಕೇಳಿದ್ದಾರೆ.

ಪ್ರಧಾನಿ ಮೋದಿ ಜತೆಗೆ ಸಭೆ ನಡೆಸಿದ ರಾಜನಾಥ್ ಸಿಂಗ್, ಅಜಿತ್ ದೋವಲ್, ಸೇನಾ ಮುಖ್ಯಸ್ಥರು
ನರೇಂದ್ರ ಮೋದಿ ಸಭೆ
ಅಕ್ಷಯ್​ ಪಲ್ಲಮಜಲು​​
|

Updated on:May 10, 2025 | 2:59 PM

Share

ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ( PM Narendra Modi) ಅವರು, ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, (Rajnath Singh) ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು (ಸಿಡಿಎಸ್) ಮತ್ತು ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿದೆ. ಪಾಕಿಸ್ತಾನವು ಭಾರತದ 26 ಸ್ಥಳಗಳ ಮೇಲೆ ನಡೆಸಿದ ದಾಳಿ ನಡೆಸಿದೆ. ಇದಕ್ಕೆ ಭಾರತ ಪ್ರತಿಯಾಗಿ ದಾಳಿ ನಡೆಸಿದೆ. ಪಾಕಿಸ್ತಾನದ ಈ ದಾಳಿಯನ್ನು ಭಾರತದ ಸೇನೆ ವಿಫಲಗೊಳಿಸಿದೆ. ಶನಿವಾರ ಮುಂಜಾನೆ ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ಭಾರತ ದಾಳಿ ನಡೆಸಿದ ನಂತರ ಈ ಸಭೆ ನಡೆಯಿತು.

ಭಾರತ ಮತ್ತು ಪಾಕಿಸ್ತಾನ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಈ ಸಭೆಯನ್ನು ಕರೆಯಲಾಗಿದೆ. ಈ ದಾಳಿಯಲ್ಲಿ ಪ್ರಮುಖ ವರದಿಯನ್ನು ಪ್ರಧಾನಿಗೆ ನೀಡಲಾಗಿದೆ. ಈ ಬಗ್ಗೆ ಇಂದು ಮುಂಜಾನೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.ಭಾರತದ ವಿರುದ್ಧ ಪಾಕಿಸ್ತಾನ ಕೈಗೊಳ್ಳುತ್ತಿರುವ ಕ್ರಮಗಳನ್ನು ಪ್ರಚೋದನಕಾರಿಯಾಗಿದೆ ಎಂದು ಎಂದು ವಿಕ್ರಮ್ ಮಿಶ್ರಿ ಹೇಳಿದರು. ಪಾಕಿಸ್ತಾನದ ಉದ್ರಿಕ್ತ ಮತ್ತು ಪ್ರಚೋದನಕಾರಿ ಕ್ರಮಗಳ ಪುರಾವೆಗಳನ್ನು ಒದಗಿಸುವುದರ ಜೊತೆಗೆ ಪಾಕಿಸ್ತಾನವು ಹರಡುತ್ತಿರುವ ಸುಳ್ಳು ಸುದ್ದಿಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದ ಕ್ರಮಗಳು ಪ್ರಚೋದನೆ, ಉಲ್ಬಣವನ್ನು ಸೂಚಿಸುತ್ತಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಭಾರತವು ಕೂಡ ಉತ್ತರ ನೀಡಿದೆ. ಪಾಕಿಸ್ತಾನ ಭಾರತದ ನಿರ್ಣಾಯಕ ಮಿಲಿಟರಿ ಆಸ್ತಿಗಳು ಮತ್ತು ಮೂಲಸೌಕರ್ಯಗಳನ್ನು ನಾಶಪಡಿಸಲಾಗಿದೆ ಎಂದು ಪಾಕಿಸ್ತಾನದ ದುರುದ್ದೇಶಪೂರಿತ ತಪ್ಪು ಮಾಹಿತಿ ನೀಡಿದೆ. ಇದನ್ನು ಭಾರತ ಸ್ಪಷ್ಟವಾಗಿ ತಿರಸ್ಕರಿಸಿದೆ. ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್, ಅಧಂಪುರ್‌ನಲ್ಲಿ ಎಸ್ -400 ವ್ಯವಸ್ಥೆ, ಸೂರತ್‌ಗಢ ಮತ್ತು ಸಿರ್ಸಾದ ವಾಯುನೆಲೆಗಳು, ನಾಗ್ರೋಟಾದ ಬ್ರಹ್ಮೋಸ್ ಸ್ಥಳ ಮತ್ತು ಡೆಹ್ರಂಗ್ಯಾರಿ ಮತ್ತು ಚಂಡೀಗಢದಲ್ಲಿನ ಫಿರಂಗಿ-ಗನ್ ಸ್ಥಾನಗಳಿಗೆ ಹಾನಿಯಾಗಿದೆ ಎಂದು ಪಾಕಿಸ್ತಾನ ಹೇಳಿದೆ. ಇದು ಸುಳ್ಳು ಸುದ್ದಿ ಎಂದು ಹೇಳಿದೆ.

ಇದನ್ನೂ ಓದಿ: ಭಾರತ-ಪಾಕ್​ ಉದ್ವಿಗ್ನತೆ ಶಮನಕ್ಕೆ ಜೈಶಂಕರ್​​​ ಹಾಗೂ ಪಾಕ್ ಜತೆ ಮಾತುಕತೆ ನಡೆಸಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ

ಭಾರತದ ಮಿಲಿಟರಿ ಸಾಮರ್ಥ್ಯಗಳನ್ನು ದುರ್ಬಲಗೊಳಿಸುವ ಮತ್ತು ಸಾರ್ವಜನಿಕರಲ್ಲಿ ಭಯವನ್ನು ಹುಟ್ಟುಹಾಕುವ ಕೆಲಸವನ್ನು ಪಾಕಿಸ್ತಾನ ಮಾಡುತ್ತಿದೆ. ಇದರ ಜತೆಗೆ ಪಾಕಿಸ್ತಾನವು ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ಹೆಚ್ಚಿಸಿದೆ, ಡ್ರೋನ್‌ಗಳನ್ನು ಬಳಸಿಕೊಂಡು ಅನೇಕ ವಾಯು ಒಳನುಸುಳುವಿಕೆಗೆ ಪ್ರಯತ್ನಿಸುತ್ತಿದೆ ಮತ್ತು ಭಾರೀ ಕ್ಯಾಲಿಬರ್ ಫಿರಂಗಿ ಬಂದೂಕುಗಳಿಂದ ಶೆಲ್ ದಾಳಿ ನಡೆಸುತ್ತಿದೆ. ಇದರಿಂದ ನಾಗರಿಕ ಮೂಲಸೌಕರ್ಯಕ್ಕೆ ತೊಂದರೆ ಉಂಟು ಮಾಡಿದೆ ಮತ್ತು ನಾಗರಿಕ ಸಾವುನೋವುಗಳಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Sat, 10 May 25

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ