Rajnath Singh: ಭಾರತದ ಒಂದಿಂಚು ಜಾಗವನ್ನೂ ಚೀನಾಗೆ ಕಬಳಿಸಲು ಬಿಡುವುದಿಲ್ಲ; ರಕ್ಷಣಾ ಸಚಿವ ರಾಜನಾಥ್ ಸಿಂಗ್

| Updated By: ಸುಷ್ಮಾ ಚಕ್ರೆ

Updated on: Jun 25, 2022 | 12:13 PM

ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ತರಲು ಯತ್ನಿಸುವವರಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ. ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದ ಜಾಗತಿಕ ಸ್ಥಿತಿ ಸುಧಾರಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

Rajnath Singh: ಭಾರತದ ಒಂದಿಂಚು ಜಾಗವನ್ನೂ ಚೀನಾಗೆ ಕಬಳಿಸಲು ಬಿಡುವುದಿಲ್ಲ; ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Follow us on

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ದೇಶದ ಸ್ವಾಭಿಮಾನ, ಆತ್ಮವಿಶ್ವಾಸ ಮತ್ತು ಪ್ರಾದೇಶಿಕ ಸಮಗ್ರತೆಯಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಭಾರತದ ಒಂದು ಇಂಚು ಭೂಪ್ರದೇಶವನ್ನು ಕೂಡ ಚೀನಾಗೆ (China) ಆಕ್ರಮಿಸಲು ಕೇಂದ್ರ ಸರ್ಕಾರ ಬಿಡುವುದಿಲ್ಲ. ನೆರೆಯ ದೇಶದೊಂದಿಗೆ ಲಡಾಖ್ ಬಿಕ್ಕಟ್ಟನ್ನು (Ladakh Crisis) ಪರಿಹರಿಸಲು ಮಾತುಕತೆ ನಡೆಯುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದ್ದಾರೆ.

ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರಾದ ರಾಜನಾಥ್ ಸಿಂಗ್, ನರೇಂದ್ರ ಮೋದಿ ಸರ್ಕಾರವು ಹಲವಾರು ಭದ್ರತಾ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿದೆ. ಕಳೆದ 8 ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ದೇಶದ ಉಳಿದ ಯಾವ ಭಾಗಗಳಲ್ಲಿಯೂ ಉಗ್ರರ ದಾಳಿ ನಡೆದಿಲ್ಲ. ಕಳೆದ ಒಂದು ವರ್ಷದಲ್ಲಿ ಕದನ ವಿರಾಮ ಉಲ್ಲಂಘನೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ. ಜೀ ಕಾನ್​ಕ್ಲೇವ್​ನಲ್ಲಿ ಅವರು ಇಂದು ಮಾತನಾಡಿದ್ದಾರೆ.

ಇದನ್ನೂ ಓದಿ: Presidential Election: ಪ್ರಧಾನಿ ಮೋದಿ, ರಾಜನಾಥ್ ಸಿಂಗ್​ಗೆ ಫೋನ್ ಮಾಡಿ ರಾಷ್ಟ್ರಪತಿ ಚುನಾವಣೆಯಲ್ಲಿ ಬೆಂಬಲ ಕೋರಿದ ಯಶವಂತ್ ಸಿನ್ಹಾ

“ಈಶಾನ್ಯ ಭಾಗದಲ್ಲಿ ಹಿಂಸಾಚಾರದ ಯುಗವನ್ನು ಕೊನೆಗೊಳಿಸಲಾಗಿದೆ. ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ತರಲು ಯತ್ನಿಸುವವರಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ. ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದ ಜಾಗತಿಕ ಸ್ಥಿತಿ ಸುಧಾರಿಸಿದೆ. ಇಂದು ಜಗತ್ತು ಭಾರತದ ದೃಷ್ಟಿಕೋನಗಳನ್ನು ಅಳವಡಿಸಿಕೊಳ್ಳುತ್ತಿದೆ. ಭಾರತವು ಪ್ರಸ್ತುತ ವಿಶ್ವದ ಅತ್ಯುತ್ತಮ ರಾಷ್ಟ್ರಗಳಲ್ಲಿ ಒಂದಾಗಿದೆ. ದೇಶದ ಆರ್ಥಿಕತೆಯನ್ನು ಬಲಪಡಿಸಲು ಮೋದಿ ಸರ್ಕಾರ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ವಿಳಂಬ ಮಾಡಲಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Published On - 12:12 pm, Sat, 25 June 22