ತುಳಸಿ ಗಬ್ಬಾರ್ಡ್ ಭೇಟಿ ವೇಳೆ ಅಮೆರಿಕದಲ್ಲಿ ಖಲಿಸ್ತಾನಿ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜನಾಥ್ ಸಿಂಗ್
ಅಮೆರಿಕದಲ್ಲಿ ಖಲಿಸ್ತಾನ್ ಪರ ಗುಂಪುಗಳು ಸೇರಿದಂತೆ ವಿದೇಶಿ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಭಾರತ ವಿರೋಧಿ ಅಂಶಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಅಮೆರಿಕದಲ್ಲಿ ಖಲಿಸ್ತಾನಿ ಸಂಘಟನೆ SFJ (ಸಿಖ್ ಫಾರ್ ಜಸ್ಟೀಸ್) ಬಗ್ಗೆ ಭಾರತ ತನ್ನ ಕಳವಳವನ್ನು ವ್ಯಕ್ತಪಡಿಸಿತು. ಕಾನೂನುಬಾಹಿರ ಸಂಘಟನೆಯ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳುವಂತೆ ಅಮೆರಿಕ ಸರ್ಕಾರಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮನವಿ ಮಾಡಿದ್ದಾರೆ.

ನವದೆಹಲಿ, (ಮಾರ್ಚ್ 17): ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಇಂದು ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕದಲ್ಲಿ ಖಲಿಸ್ತಾನಿ ಸಂಘಟನೆ SFJ (ಸಿಖ್ ಫಾರ್ ಜಸ್ಟೀಸ್) ನಡೆಸುತ್ತಿರುವ ಭಾರತ ವಿರೋಧಿ ಚಟುವಟಿಕೆಗಳ ವಿಷಯವನ್ನು ರಾಜನಾಥ್ ಸಿಂಗ್ ಪ್ರಸ್ತಾಪಿಸಿದ್ದಾರೆ. ಈ ವೇಳೆ ಭಾರತವು ತನ್ನ ಕಳವಳಗಳನ್ನು ವ್ಯಕ್ತಪಡಿಸಿತು ಮತ್ತು ಕಾನೂನುಬಾಹಿರ ಸಂಘಟನೆಯ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳುವಂತೆ ಅಮೆರಿಕ ಸರ್ಕಾರವನ್ನು ಮನವಿ ಮಾಡಿದ್ದಾರೆ.
ಕಳೆದ ವರ್ಷ ನವೆಂಬರ್‌ನಲ್ಲಿ ಗುರುಪತ್ವಂತ್ ಸಿಂಗ್ ಪನ್ನುನ್ ಅವರನ್ನು ಕೊಲ್ಲುವ ಪಿತೂರಿಯಲ್ಲಿ ಮತ್ತೊಬ್ಬ ಭಾರತೀಯ ಸರ್ಕಾರಿ ಅಧಿಕಾರಿಯೊಂದಿಗೆ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ಅವರ ಮೇಲೆ ಅಮೆರಿಕದ ಪ್ರಾಸಿಕ್ಯೂಟರ್‌ಗಳು ಆರೋಪ ಹೊರಿಸಿದ್ದರಿಂದ SFJ ಬಗ್ಗೆ ರಾಜನಾಥ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ. ಗುರುಪತ್ವಂತ್ ಸಿಂಗ್ ಪನ್ನುನ್ ಮೇಲಿನ ಹತ್ಯೆ ಯತ್ನದಲ್ಲಿ ಭಾರತ ಯಾವುದೇ ಪಾತ್ರ ವಹಿಸಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಸರ್ಕಾರ ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ.
ಇದನ್ನೂ ಓದಿ: ಪಾಕಿಸ್ತಾನ ಸೇರಿ 41 ದೇಶಗಳಿಗೆ ಟ್ರಂಪ್ ಸರ್ಕಾರದಿಂದ ಪ್ರಯಾಣ ನಿಷೇಧ ಸಾಧ್ಯತೆ
ಡೊನಾಲ್ಡ್ ಟ್ರಂಪ್ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ಉನ್ನತ ಮಟ್ಟದ ಭೇಟಿಯಲ್ಲಿ ಎರಡೂವರೆ ದಿನಗಳ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್ ಭಾನುವಾರ ಮುಂಜಾನೆ ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದರು. ನಿನ್ನೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರನ್ನು ಭೇಟಿಯಾದ ತುಳಸಿ ಇಂದು ಭಾರತ ದೆಹಲಿಯಲ್ಲಿ ಆಯೋಜಿಸಿದ್ದ ಜಾಗತಿಕ ಗುಪ್ತಚರ ಮುಖ್ಯಸ್ಥರ ಸಮಾವೇಶದಲ್ಲಿ ಭಾಗವಹಿಸಿದ ನಂತರ ರಾಜನಾಥ್ ಸಿಂಗ್ ಅವರೊಂದಿಗಿನ ಮಾತುಕತೆ ನಡೆಸಿದರು. ಈ ಸಮಾವೇಶದಲ್ಲಿ ಅಮೆರಿಕ, ಕೆನಡಿಯನ್ ಮತ್ತು ಯುಕೆ ಪ್ರತಿನಿಧಿಗಳು ಭಾಗವಹಿಸಿದ್ದರು. ಕಳೆದ ತಿಂಗಳು ವಾಷಿಂಗ್ಟನ್ ಡಿಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾಗಿದ್ದರು.
#WATCH | Defence Minister Rajnath Singh and the US Director of National Intelligence Tulsi Gabbard hold bilateral meeting in Delhi pic.twitter.com/oA9EC5fRJK
— ANI (@ANI) March 17, 2025
ಇದನ್ನೂ ಓದಿ: ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಭದ್ರತಾ ಪಡೆಗಳಿದ್ದ ಬಸ್ ಬಳಿ ಬಾಂಬ್ ಸ್ಫೋಟ, ಐವರು ಸಾವು
ಖಲಿಸ್ತಾನ್ ಪರ ಗುಂಪುಗಳು ಸೇರಿದಂತೆ ವಿದೇಶಿ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಭಾರತ ವಿರೋಧಿ ಅಂಶಗಳ ಬಗ್ಗೆ ಭಾರತದ ಕಡೆಯಿಂದ ಕಳವಳಗಳು ವ್ಯಕ್ತವಾಗಿದ್ದವು. ರಷ್ಯಾ-ಉಕ್ರೇನ್ ಯುದ್ಧ ಮತ್ತು ಮಧ್ಯಪ್ರಾಚ್ಯ ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಕುರಿತು ಸಮಾವೇಶದಲ್ಲಿ ಚರ್ಚೆಗಳು ನಡೆದವು. ತುಳಸಿ ಗಬ್ಬಾರ್ಡ್ ಅವರ ಬಹು-ರಾಷ್ಟ್ರ ಪ್ರವಾಸವು ಜಪಾನ್, ಥೈಲ್ಯಾಂಡ್ ಮತ್ತು ಫ್ರಾನ್ಸ್ ದೇಶಗಳನ್ನು ಒಳಗೊಂಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




