ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಭಯೋತ್ಪಾದಕ ದಾಳಿಯಲ್ಲಿ (Terrorist Attack) ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಮೇಲೆ ದಾಳಿ ಮಾಡಿದ ಇಬ್ಬರು ಉಗ್ರರನ್ನು ತಟಸ್ಥಗೊಳಿಸಲು ಭದ್ರತಾ ಪಡೆಗಳು (Security Forces) ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ. ಇಬ್ಬರು ಗಾಯಾಳುಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜಮ್ಮುವಿಗೆ ವಿಮಾನದಲ್ಲಿ ರವಾನಿಸಲಾಯಿತು.
ಇದನ್ನೂ ಓದಿ: Jammu Encounter: ಜಮ್ಮು ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಎನ್ಕೌಂಟರ್; ಮೂವರು ಉಗ್ರರ ಹತ್ಯೆ
ಮಾಹಿತಿಯ ಪ್ರಕಾರ, ಇಬ್ಬರು ಭಯೋತ್ಪಾದಕರು ಅಪ್ಪರ್ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಉಗ್ರರಿಗಾಗಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಸೇನಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿವೆ. ಶೀಘ್ರದಲ್ಲೇ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್ ಹೇಳಿದ್ದಾರೆ.
Jammu & Kashmir के #Rajouri district मे राम मंदिर के पास आतंकवादियों ने घरों पे जा जा कर अंधाधुंध Firing की…4 की मौत, 10 लोग घायल…जब हमारे जवानों से मुक़ाबला करने की औक़ात नही रही तो दरिंदों ने civilians पर Attack शुरू कर दिया है…इन Terrorists का सीधा Encounter होना चाहिए…? pic.twitter.com/iwFn3OILG3
— Jyot Jeet (@activistjyot) January 1, 2023
ಈ ಘಟನೆಯಲ್ಲಿ ಗಾಯಗೊಂಡ ಇತರ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ “ತುಂಬಾ ಗಂಭೀರವಾಗಿದೆ” ಎಂದು ರಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕೆಲವರನ್ನು ವಿಮಾನದಲ್ಲಿ ಜಮ್ಮುವಿಗೆ ರವಾನಿಸಲಾಗಿದೆ. ನಿನ್ನೆ ಸಂಜೆ ಡ್ಯಾಂಗ್ರಿ ಗ್ರಾಮದಲ್ಲಿ ಇಬ್ಬರು ಶಸ್ತ್ರಸಜ್ಜಿತ ಭಯೋತ್ಪಾದಕರು 3 ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ರಜೌರಿಯ ರಾಮ ಮಂದಿರ ಬಳಿ ಶಂಕಿತ ಉಗ್ರರ ದಾಳಿ; 2 ಸಾವು, 4 ಮಂದಿಗೆ ಗಾಯ
ಮೃತರನ್ನು ದೀಪಕ್ ಕುಮಾರ್, ಸತೀಶ್ ಕುಮಾರ್, ಪ್ರೀತಮ್ ಲಾಲ್ ಮತ್ತು ಶಿವಪಾಲ್ ಎಂದು ಗುರುತಿಸಲಾಗಿದೆ. ಡಿಸೆಂಬರ್ 16ರಂದು ಸೇನಾ ಶಿಬಿರದ ಹೊರಗೆ ಇಬ್ಬರು ಸಾವನ್ನಪ್ಪಿದ ನಂತರ ಕಳೆದ 2 ವಾರಗಳಲ್ಲಿ ರಜೌರಿ ಜಿಲ್ಲೆಯಲ್ಲಿ ನಡೆದ ನಾಗರಿಕ ಹತ್ಯೆಗಳ ಎರಡನೇ ಘಟನೆ ಇದಾಗಿದೆ.
Published On - 9:11 am, Mon, 2 January 23