Rajouri Terror Attack: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರ ದಾಳಿ, ಮೃತರ ಸಂಖ್ಯೆ 7ಕ್ಕೆ ಏರಿಕೆ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Rajouri Terror Attack: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರ ದಾಳಿ, ಮೃತರ ಸಂಖ್ಯೆ 7ಕ್ಕೆ ಏರಿಕೆ
ಭಯೋತ್ಪಾದಕರು
Updated By: ನಯನಾ ರಾಜೀವ್

Updated on: Jan 08, 2023 | 2:42 PM

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಮೇಲೆ ದಾಳಿ ಉಗ್ರರು ಜನವರಿ 1 ರಂದು ದಾಳಿ ನಡೆಸಿದ್ದರು. ಈ ವೇಳೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದರು. ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಅಲ್ಲಿಂದ ಓಡಿಹೋಗಿದ್ದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಮೂವರು ಸಾವನ್ನಪ್ಪಿದ್ದರು. ಇದೀಗ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಜನವರಿ 1 ರಂದು ನಡೆದ ದಾಳಿಯ ನಂತರ, ಭಯೋತ್ಪಾದಕರು ಮೃತ ವ್ಯಕ್ತಿಯ ಮನೆಯಲ್ಲಿ ಐಇಡಿಯನ್ನು ಅಳವಡಿಸಿದ್ದರು. ಮರುದಿನ ಸೇನಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಐಇಡಿ ಸ್ಫೋಟಗೊಂಡಿತ್ತು.

ಮತ್ತಷ್ಟು ಓದಿ: Rajouri Terror Attack: ರಜೌರಿಯಲ್ಲಿ ಉಗ್ರರ ದಾಳಿ; ಸಾವಿನ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿಗೆ ಗಾಯ

ಡ್ಯಾಂಗ್ರಿ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಇಂದು ಹೇಳಿಕೆಯಲ್ಲಿ ತಿಳಿಸಿದೆ.

ಈ ದಾಳಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು 18 ಮಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ರಜೌರಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಅಸ್ಲಾಂ ಇದನ್ನು ಖಚಿತಪಡಿಸಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಲು ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಮತ್ತು ಕೆಲವು ಪ್ರಮುಖ ಸುಳಿವುಗಳು ಪತ್ತೆಯಾಗಿವೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ