ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ರಾಜ್ಯಸಭಾ ಅಧಿವೇಶನ 1 ಗಂಟೆಗೆ ಮುಂದೂಡಿಕೆ
Rajya Sabha Parliament Budget Session: ಇಂಧನ ದರ ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುತ್ತಿದೆ. ಪೆಟ್ರೋಲ್ ಲೀಟರ್ಗೆ ನೂರು ರೂಪಾಯಿಯಷ್ಟಾಗಿದೆ. ಡೀಸೆಲ್ 80 ರೂಪಾಯಿ ತಲುಪಿದೆ. ಅಡುಗೆ ಅನಿಲ (ಗ್ಯಾಸ್ ಸಿಲಿಂಡರ್) ಬೆಲೆ ಕೂಡ ಹೆಚ್ಚಳವಾಗಿದೆ. ಸುಮಾರು 21 ಲಕ್ಷ ಕೋಟಿ ರೂಪಾಯಿಗಳಷ್ಟು ಹಣ ಅಬಕಾರಿ ಸುಂಕ ಮತ್ತು ತೆರಿಗೆ ಹಾಕಿ ಸಂಗ್ರಹಿಸಲಾಗಿದೆ. ಈ ಎಲ್ಲಾ ಕಾರಣದಿಂದ ದೇಶ ಹಾಗೂ ದೇಶದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಬಜೆಟ್ ಅಧಿವೇಶನದ ಎರಡನೇ ಹಂತ ಇಂದು (ಮಾರ್ಚ್ 8) ಆರಂಭವಾಗಿದೆ. ಅಧಿವೇಶನದ ಆರಂಭದಲ್ಲೇ ಕೈ ನಾಯಕರು ಬೆಲೆ ಏರಿಕೆ ವಿರುದ್ಧ ಸಿಡಿದು ನಿಂತಿದ್ದಾರೆ.
ಇಂಧನ ದರ ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯಸಭಾ ಅಧಿವೇಶನದ ಮೊದಲಾರ್ಧದಲ್ಲೇ ಸದನದಲ್ಲಿ ಗದ್ದಲ ಏರ್ಪಟ್ಟಿದೆ. ಹಾಗಾಗಿ, ರಾಜ್ಯಸಭಾ ಅಧಿವೇಶನವನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಲಾಗಿದೆ.
ಬೆಳಗ್ಗೆ ಅಧಿವೇಶನ ಆರಂಭವಾದಾಗಲೇ ಸದನದಲ್ಲಿ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ಶುರುವಾಗಿತ್ತು. ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ವಿರುದ್ಧ ಸದಸ್ಯರು ದನಿ ಎತ್ತಿದ್ದರು. ಆಡಳಿತ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸಿದ್ದರು. ಹಾಗಾಗಿ, ಮೊದಲು ಅಧಿವೇಶನವನ್ನು 11 ಗಂಟೆಯವರೆಗೆ ಮುಂದೂಡಲಾಗಿತ್ತು. ಮತ್ತೆ ಗದ್ದಲ, ಪ್ರತಿಭಟನೆ ಕಂಡುಬಂದ ಕಾರಣ ಸದನವನ್ನು ಮತ್ತೆ ಎರಡನೇ ಬಾರಿಗೆ ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಲಾಯಿತು.
ಕೈ ಪಾಳಯದ ನಾಯಕರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಘೋಷಣೆಗಳನ್ನು ಕೂಗಿದರು. ಇಂಧನ ದರ ಏರಿಕೆ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸಿದರು. ಆದರೆ, ರಾಜ್ಯಸಭಾ ಅಧಿವೇಶನದ ಮೊದಲ ದಿನವೇ ಕಠಿಣ ಕ್ರಮ ಕೈಗೊಳ್ಳಲು ನಾನು ಬಯಸುವುದಿಲ್ಲ ಎಂದು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ತಿಳಿಸಿದರು.
“I don’t want to take any drastic action on the first day,” said Rajya Sabha Chairman M Venkaiah Naidu, after slogans were raised by Congress MPs demanding a discussion on rise in fuel prices pic.twitter.com/b2yUHRCb89
— ANI (@ANI) March 8, 2021
ರಾಜ್ಯಸಭಾ ವಿರೋಧ ಪಕ್ಷದ ನಾಯಕನಾಗಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅಭಿನಂದಿಸಿದರು. ಖರ್ಗೆ ಬಹುದೀರ್ಘ ಅನುಭವವುಳ್ಳ ನಾಯಕ ಎಂದು ತಿಳಿಸಿದರು.
ಇದನ್ನೂ ಓದಿ: Petrol Diesel Price | ವಾಹನ ಸವಾರರಿಗೆ ಕೊಂಚ ರಿಲೀಫ್, ದೇಶದಲ್ಲಿ ಹೀಗಿದೆ ಪೆಟ್ರೋಲ್, ಡೀಸೆಲ್ ದರ!
ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಮಮತಾ ಬ್ಯಾನರ್ಜಿ ಪಾದಯಾತ್ರೆ; ಮೋದಿ ವಿರುದ್ಧ ವಾಗ್ದಾಳಿ
Published On - 11:53 am, Mon, 8 March 21