Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Election: ಫೆಬ್ರವರಿ 27ರಂದು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ

15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Rajya Sabha Election: ಫೆಬ್ರವರಿ 27ರಂದು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ
ಸಂಸತ್
Follow us
ನಯನಾ ರಾಜೀವ್
|

Updated on:Jan 29, 2024 | 2:48 PM

15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತೀಯ ಚುನಾವಣಾ ಆಯೋಗ ಬಿಹಾರದ 6 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಿದೆ. ಚುನಾವಣಾ ಆಯೋಗದ ಘೋಷಣೆಯ ನಂತರ ಬಿಹಾರದ 6 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಯಲಿದೆ. ಫೆಬ್ರವರಿ 8, 2024 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ.

ನಾಮನಿರ್ದೇಶನಕ್ಕೆ ಕೊನೆಯ ದಿನಾಂಕ ಫೆಬ್ರವರಿ 15, 2024. ನಾಮಪತ್ರಗಳ ಪರಿಶೀಲನೆಯು ಫೆಬ್ರವರಿ 16, ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಸಮಯ 20 ಫೆಬ್ರವರಿ 2024. ಆದರೆ, ಫೆಬ್ರವರಿ 27 ರಂದು ಮತದಾನ ನಡೆಯಲಿದೆ. ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.

ಜನವರಿಯಲ್ಲಿಯೇ ಆಮ್​ ಆದ್ಮಿ ಪಕ್ಷದ ನಾಮನಿರ್ದೇಶಿತ ಸಂಜಯ್ ಸಿಂಗ್, ಎನ್​ಡಿ ಗುಪ್ತಾ ಮತ್ತು ಸ್ವಾತಿ ಮಲಿವಾಲ್ ದೆಹಲಿಯಲ್ಲಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಚುನಾವಣೆಯಲ್ಲಿ ಬೇರೆ ಯಾವುದೇ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. ನಾಮಪತ್ರ ಸಲ್ಲಿಕೆಗೆ ಜನವರಿ 9 ಕೊನೆಯ ದಿನವಾಗಿತ್ತು, ಜನವರಿ 10ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗಿತ್ತು. ಸಿಂಗ್, ಗುಪ್ತಾ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಜನವರಿ 19ರ ರಾಜ್ಯಸಭಾ ಚುನಾವಣೆಗೆ ಜನವರಿ 9 ರಂದು ನಾಮಪತ್ರ ಸಲ್ಲಿಸಿದ್ದರು.

15 ರಾಜ್ಯಗಳಲ್ಲಿ ಚುನಾವಣೆ ನಡೆಯುವ ಸ್ಥಾನಗಳ ಸಂಖ್ಯೆ:

ಆಂಧ್ರ ಪ್ರದೇಶ: 3 ಬಿಹಾರ: 6 ಛತ್ತೀಸ್‌ಗಢ: 1 ಗುಜರಾತ್: 4 ಹರಿಯಾಣ: 1 ಹಿಮಾಚಲ ಪ್ರದೇಶ: 1 ಕರ್ನಾಟಕ: 4 ಮಧ್ಯಪ್ರದೇಶ: 5 ಮಹಾರಾಷ್ಟ್ರ: 6 ತೆಲಂಗಾಣ: 3 ಉತ್ತರ ಪ್ರದೇಶ: 10 ಉತ್ತರಾಖಂಡ: 1 ಪಶ್ಚಿಮ ಬಂಗಾಳ: 5 ಒಡಿಶಾ: 3 ರಾಜಸ್ಥಾನ: 3

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:16 pm, Mon, 29 January 24

ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ