Rajya Sabha Election: ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ನಟ ಕಮಲ್ ಹಾಸನ್
ನಟ ಕಮಲ್ ಹಾಸನ್ ರಾಜ್ಯಸಭೆ ಪ್ರವೇಶಿಸಲು ಸಜ್ಜಾಗಿದ್ದಾರೆ, ಜೂನ್ 19ರಂದು ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 2026 ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಒಂದು ಕಾರ್ಯತಂತ್ರದ ಹೆಜ್ಜೆಯಾಗಿ ಇದನ್ನು ಕಾಣಬಹುದು. ಕಮಲ್ ಹಾಸನ್ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ತನ್ನ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್ಎಂ) ಪಕ್ಷಕ್ಕೆ ನೀಡಲು ನಿರ್ಧರಿಸಿದೆ.

ಚೆನ್ನೈ, ಜೂನ್ 06: ನಟ, ರಾಜಕಾರಣಿ ಕಮಲ್ ಹಾಸನ್(Kamal Haasan) ಕರ್ನಾಟಕದಲ್ಲಿ ಭಾಷಾ ಗದ್ದಲವೆಬ್ಬಿಸಿ, ಥಗ್ ಲೈಫ್ನಲ್ಲಿ ಸೋತು ಸುಣ್ಣವಾಗಿ ಈಗ ಬೇರೇನೂ ದಾರಿ ಕಾಣದೆ ರಾಜ್ಯಸಭೆಯತ್ತ ಹೆಜ್ಜೆ ಇಟ್ಟಿದ್ದಾರೆ. ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಮುಂದಿನ ಸೋಮವಾರದವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.
2026 ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಒಂದು ಕಾರ್ಯತಂತ್ರದ ಹೆಜ್ಜೆಯಾಗಿ ಇದನ್ನು ಕಾಣಬಹುದು. ಕಮಲ್ ಹಾಸನ್ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ತನ್ನ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್ಎಂ) ಪಕ್ಷಕ್ಕೆ ನೀಡಲು ನಿರ್ಧರಿಸಿದೆ. ತಮ್ಮ ನಾಮಪತ್ರಗಳನ್ನು ವಿಧಾನಸಭೆ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗೆ ಸಲ್ಲಿಸಿದರು.
ಹಾಸನ್ 2018 ರಲ್ಲಿ ರಾಜಕೀಯ ಪ್ರವೇಶಿಸಿದರು, ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್, ಹಾಸನ್ ಅವರ ಪಕ್ಷಕ್ಕೆ ಒಂದು ಸ್ಥಾನವನ್ನು ನೀಡಲು ನಿರ್ಧರಿಸಿದೆ ಎಂದು ಹೇಳಿದ್ದರು.2024ರ ಲೋಕಸಭಾ ಚುನಾವಣೆಗೆ ಮೊದಲು ಎರಡೂ ಪಕ್ಷಗಳ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.
ಮತ್ತಷ್ಟು ಓದಿ: ಇಂಥ ಸಿನಿಮಾದಿಂದ ಹೊರಬಂದಿದ್ದು ಒಳ್ಳೆಯದೇ ಆಯ್ತು; ದುಲ್ಕರ್ ಸಲ್ಮಾನ್ಗೆ ಫ್ಯಾನ್ಸ್ ಮೆಚ್ಚುಗೆ
ಮುಂಬರುವ ರಾಜ್ಯಸಭಾ ಚುನಾವಣೆಗೆ ಡಿಎಂಕೆ ತನ್ನ ಅಭ್ಯರ್ಥಿಗಳನ್ನು ಔಪಚಾರಿಕವಾಗಿ ಘೋಷಿಸಿದೆ. ಹಿರಿಯ ವಕೀಲ ಪಿ ವಿಲ್ಸನ್, ಕವಿ ಮತ್ತು ಬರಹಗಾರ್ತಿ ಸಲ್ಮಾ ಮತ್ತು ಮಾಜಿ ಸಚಿವ ಎಸ್.ಆರ್. ಶಿವಲಿಂಗಂ ಸೇರಿದಂತೆ ಮೂವರು ಇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ತಮಿಳುನಾಡಿನ ಆರು ರಾಜ್ಯಸಭಾ ಸದಸ್ಯರು ಜುಲೈ 24, 2025 ರಂದು ನಿವೃತ್ತರಾಗಲಿದ್ದಾರೆ. ಇದರಲ್ಲಿ ಪಿಎಂಕೆಯ ಅನ್ಬುಮಣಿ ರಾಮದಾಸ್, ಎಂಡಿಎಂಕೆ ನಾಯಕ ವೈಕೊ ಸೇರಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಡಿಎಂಕೆ ಸುಲಭವಾಗಿ 4 ಸ್ಥಾನಗಳನ್ನು ಗೆಲ್ಲಬಹುದು. ಆದರೆ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಬಿಜೆಪಿ ಸೇರಿದಂತೆ ಇತರ ಮಿತ್ರಪಕ್ಷಗಳ ಬೆಂಬಲದೊಂದಿಗೆ 2 ಸ್ಥಾನಗಳನ್ನು ಗೆಲ್ಲಬಹುದು.
ನಾಮಪತ್ರೆ ಸಲ್ಲಿಕೆಗೆ ಜೂ.9ರವರೆಗೆ ಅವಕಾಶ
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಜೂನ್ 9 ರವರೆಗೆ ನಡೆಯಲಿದೆ. ಮರುದಿನ ಪರಿಶೀಲನೆ ನಡೆಯಲಿದೆ. ನಂತರ ಜೂನ್ 19 ರಂದು ಮತದಾನ ನಡೆದು ಅದೇ ದಿನ ಸಂಜೆ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಹೈಕೋರ್ಟ್ ಕಮಲ್ ಹಾಸನ್ ಅವರ ಹೇಳಿಕೆ ಖಂಡಿಸಿ, ನೀವು ಕಮಲ್ ಹಾಸನ್ ಆಗಿರಬಹುದು ಆದರೆ ಯಾರ ಭಾವನೆಗಳನ್ನು ನೋಯಿಸುವ ಹಕ್ಕು ನಿಮಗಿಲ್ಲ ಎಂದು ಎಚ್ಚರಿಕೆ ನೀಡಿತ್ತು.
ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿಕೊಂಡಿದೆ ಎಂದು ನಟ ಹಾಸನ್ ಹೇಳಿಕೆ ನೀಡಿದ್ದರು. ಚೆನ್ನೈನಲ್ಲಿ ತಮ್ಮ ಥಗ್ ಲೈಫ್ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದರು. ಇದರಿಂದ ಕನ್ನಡಿಗರ ಭಾವನೆಗೆ ನೋವುಂಟಾಗಿತ್ತು. ಪ್ರತಿಭಟನೆಗಳು ಭುಗಿಲೆದ್ದಿದ್ದವು. ಈ ಹೇಳಿಕೆಯ ನಂತರ, ಕರ್ನಾಟಕ ಸರ್ಕಾರ ಥಗ್ ಲೈಫ್ ಚಿತ್ರದ ಬಿಡುಗಡೆಯನ್ನು ನಿಷೇಧಿಸಿತು.
ಥಗ್ ಲೈಫ್ ಮೊದಲ ದಿನದ ಕಲೆಕ್ಷನ್ ಕೇವಲ 17 ಕೋಟಿ ರೂ.
ಇದರ ವಿರುದ್ಧ ಹಾಸನ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯವು ಈ ವಿಷಯದಲ್ಲಿ ಕಠಿಣ ನಿಲುವನ್ನು ತೆಗೆದುಕೊಂಡಿತ್ತು. ಕಮಲ್ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಚಿತ್ರ ಬಿಡುಗಡೆಯಾದ ಒಂದು ದಿನದ ನಂತರ ಕಮಲ್ ಹಾಸನ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. 300 ಕೋಟಿ ರೂ. ಬಜೆಟ್ ಸಿನಿಮಾ ಮೊದಲ ದಿನ ಕೇವಲ 17 ಕೋಟಿ ರೂ. ಗಳಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:59 pm, Fri, 6 June 25