ರಾಜ್ಯಸಭಾ ಚುನಾವಣೆ: ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಸಂಖ್ಯೆ 121 ತಲುಪಲು ಬೇಕು ಇನ್ನು 4 ಸೀಟು
ಮೂರು ರಾಜ್ಯಗಳಲ್ಲಿ 15 ಸ್ಥಾನಗಳಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ 10 ಸ್ಥಾನಗಳನ್ನು, ಕಾಂಗ್ರೆಸ್ ಮೂರು ಮತ್ತು ಸಮಾಜವಾದಿ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿದೆ. ಉತ್ತರ ಪ್ರದೇಶದಲ್ಲಿ ಹೆಚ್ಚುವರಿ ಸ್ಥಾನವನ್ನು ಗೆದ್ದಿರುವ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ಒಂದು ಸ್ಥಾನ ಗೆದ್ದುಕೊಂಡಿದೆ.
ದೆಹಲಿ ಫೆಬ್ರವರಿ 28: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (National Democratic Alliance) 240 ಸದಸ್ಯರ ಸದನದಲ್ಲಿ ಬಹುಮತದ 121 ಸಂಖ್ಯೆ ತಲುಪಲು ಇನ್ನು 4 ಸೀಟುಗಳು ಬೇಕಿದೆ. ಮಂಗಳವಾರ, ಬಿಜೆಪಿ 10 ರಾಜ್ಯಸಭಾ (Rajya sabha) ಸ್ಥಾನಗಳನ್ನು ಗೆದ್ದಿದೆ ಇದರಲ್ಲಿ 20 ಅವಿರೋಧವಾಗಿ ಗೆದ್ದುಕೊಂಡಿರುವುದು. ಏಪ್ರಿಲ್‌ನಲ್ಲಿ ಐವತ್ತಾರು ರಾಜ್ಯಸಭಾ ಸ್ಥಾನಗಳು ತೆರವಾಗಿದೆ. ಈ 30 ಸ್ಥಾನಗಳ ಗೆಲುವಿನೊಂದಿಗೆ ರಾಜ್ಯಸಭೆಯಲ್ಲಿ ಬಿಜೆಪಿಯ (BJP) ಸಂಖ್ಯೆ 97 ಕ್ಕೆ ಮತ್ತು ಎನ್‌ಡಿಎ 117 ಕ್ಕೆ ಏರುತ್ತದೆ. ಒಮ್ಮೆಲೇ ಎಲ್ಲಾ 56 ಸದಸ್ಯರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ಪಕ್ಷಕ್ಕೆ ಸೇರ್ಪಡೆಯಾದ ಐದು ನಾಮನಿರ್ದೇಶಿತ ಸಂಸದರು ಸೇರಿದಂತೆ 97 ಸದಸ್ಯರೊಂದಿಗೆ ಬಿಜೆಪಿ ರಾಜ್ಯಸಭೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಉಳಿದಿದೆ. ಅದೇ ವೇಳೆ ಕಾಂಗ್ರೆಸ್ 29 ಸದಸ್ಯರನ್ನು ಹೊಂದಿದೆ.
ಜಮ್ಮು ಮತ್ತು ಕಾಶ್ಮೀರದಿಂದ ನಾಲ್ಕು ಮತ್ತು ನಾಮನಿರ್ದೇಶಿತ ಸದಸ್ಯ ವರ್ಗದಿಂದ ಒಂದು ಹೀಗೆ ಖಾಲಿ ಇರುವ 5 ಸ್ಥಾನಗಳ ನಂತರ ರಾಜ್ಯಸಭೆಯ ಬಲವು ಈಗ 240 ರಷ್ಟಿದೆ. ಮೂರು ರಾಜ್ಯಗಳಲ್ಲಿ 15 ಸ್ಥಾನಗಳಿಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ 10 ಸ್ಥಾನಗಳನ್ನು, ಕಾಂಗ್ರೆಸ್ ಮೂರು ಮತ್ತು ಸಮಾಜವಾದಿ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿದೆ. ಉತ್ತರ ಪ್ರದೇಶದಲ್ಲಿ ಹೆಚ್ಚುವರಿ ಸ್ಥಾನವನ್ನು ಗೆದ್ದಿರುವ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ಒಂದು ಸ್ಥಾನ ಗೆದ್ದುಕೊಂಡಿದೆ.
ಆಡಳಿತಾರೂಢ ಕಾಂಗ್ರೆಸ್‌ನ ಆರು ಶಾಸಕರು ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಸೋತಿದ್ದು ಹಿಮಾಚಲ ಪ್ರದೇಶದಲ್ಲಿನ ಅನಿರೀಕ್ಷಿತ ಬೆಳವಣಿಗೆ. ಇಲ್ಲಿ ಬಿಜೆಪಿಯ ಹರ್ಷವರ್ಧನ್ ಗೆದ್ದಿದ್ದಾರೆ.
ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆ
ಉತ್ತರ ಪ್ರದೇಶದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಎಂಟು ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಸಮಾಜವಾದಿ ಪಕ್ಷವು ಕೇವಲ ಎರಡು ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಉತ್ತರ ಪ್ರದೇಶದಲ್ಲಿ ಮಾಜಿ ಕೇಂದ್ರ ಸಚಿವ ಆರ್‌ಪಿಎನ್ ಸಿಂಗ್, ಮಾಜಿ ಸಂಸದ ಚೌಧರಿ ತೇಜ್‌ವೀರ್ ಸಿಂಗ್, ಅಮರ್‌ಪಾಲ್ ಮೌರ್ಯ, ಸಂಗೀತಾ ಬಲ್ವಂತ್, ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ, ಮಾಜಿ ಶಾಸಕ ಸಾಧನಾ ಸಿಂಗ್, ನವೀನ್ ಜೈನ್ ಮತ್ತು ಸಂಜಯ್ ಸೇಠ್ ಗೆದ್ದ ಎಂಟು ಬಿಜೆಪಿ ಅಭ್ಯರ್ಥಿಗಳು. ಸಮಾಜವಾದಿ ಪಕ್ಷದ ಜಯಾ ಬಚ್ಚನ್ ಮತ್ತು ರಾಮ್‌ಜಿ ಲಾಲ್ ಸುಮನ್ ಕೂಡ ಗೆದ್ದಿದ್ದಾರೆ. ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದ ಮೂರನೇ ಅಭ್ಯರ್ಥಿ ಅಲೋಕ್ ರಂಜನ್ ಸೋಲು ಅನುಭವಿಸಿದ್ದಾರೆ.
ಕರ್ನಾಟಕ ರಾಜ್ಯಸಭಾ ಚುನಾವಣೆ
ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮೂರು ಸ್ಥಾನಗಳನ್ನು ಮತ್ತು ಬಿಜೆಪಿ ಒಂದು ಸ್ಥಾನವನ್ನು ಗೆದ್ದಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಪಕ್ಷದ ಸಂಖ್ಯಾಬಲಕ್ಕಿಂತ ಹೆಚ್ಚಿನ ಮತಗಳನ್ನು ಪಡೆದಿದ್ದಾರೆ. ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದರು.
ಇದನ್ನೂ ಓದಿ: ಕಾಂಗ್ರೆಸ್‌ಗೆ ಮತ್ತೊಂದು ಆಘಾತ, ಅಸ್ಸಾಂ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಣಾ ಗೋಸ್ವಾಮಿ ರಾಜೀನಾಮೆ
ಹಿಮಾಚಲ ಪ್ರದೇಶ ರಾಜ್ಯಸಭಾ ಚುನಾವಣೆ
ಹಿಮಾಚಲ ಪ್ರದೇಶದಲ್ಲಿ, ರಾಜ್ಯದಿಂದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷದ ಆರು ಶಾಸಕರು ಸೇರಿದಂತೆ ಒಂಬತ್ತು ಶಾಸಕರು ಅಡ್ಡ ಮತದಾನ ಮಾಡಿದ್ದರಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿದೆ. ಹರ್ಷ್ ಮಹಾಜನ್ ಮತ್ತು ಅಭಿಷೇಕ್ ಮನು ಸಿಂಘ್ವಿ ಇಬ್ಬರೂ ತಲಾ 34 ಮತಗಳನ್ನು ಪಡೆದಿದ್ದು ವಿಜೇತರನ್ನು ಡ್ರಾ ಮೂಲಕ ನಿರ್ಧರಿಸಲಾಯಿತು. ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಂಘ್ವಿ, ಅಡ್ಡ ಮತದಾನ ಮಾಡಿದ ಶಾಸಕರು ತನಗೆ “ಮಾನವ ಸ್ವಭಾವ, ಅದರ ಚಂಚಲತೆಯ ಬಗ್ಗೆ ಸಾಕಷ್ಟು ಕಲಿಸಿದ್ದಾರೆ” ಎಂದು ಸೋಲನ್ನು ಒಪ್ಪಿಕೊಂಡರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ