AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿ, ಉತ್ತರಾಖಂಡದ 11 ರಾಜ್ಯಸಭಾ ಸ್ಥಾನಗಳಿಗೆ ಅ.16ರಂದು ಚುನಾವಣೆ: ಹರ್ದೀಪ್ ಪುರಿ ಸೇರಿ ದಿಗ್ಗಜರ ಭವಿಷ್ಯ ನಿರ್ಧಾರ

ಭಾರತೀಯ ಚುನಾವಣಾ ಆಯೋಗ (ECI) ಅಕ್ಟೋಬರ್ 16 ರಂದು ಉತ್ತರ ಪ್ರದೇಶದ 10, ಉತ್ತರಾಖಂಡದ 1 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಘೋಷಿಸಿದೆ. ಪಶ್ಚಿಮ ಬಂಗಾಳದ ಒಂದು ಸ್ಥಾನಕ್ಕೆ ಉಪಚುನಾವಣೆಯೂ ನಡೆಯಲಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ ಪ್ರಮುಖರ ಭವಿಷ್ಯ ನಿರ್ಧಾರವಾಗಲಿದೆ. ಬಿಜೆಪಿ ಯುಪಿ, ಉತ್ತರಾಖಂಡದಲ್ಲಿ ಬಹುತೇಕ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ಯುಪಿ, ಉತ್ತರಾಖಂಡದ 11 ರಾಜ್ಯಸಭಾ ಸ್ಥಾನಗಳಿಗೆ ಅ.16ರಂದು ಚುನಾವಣೆ:  ಹರ್ದೀಪ್ ಪುರಿ ಸೇರಿ ದಿಗ್ಗಜರ ಭವಿಷ್ಯ ನಿರ್ಧಾರ
ಹರ್ದೀಪ್ ಸಿಂಗ್ ಪುರಿImage Credit source: PTI
ನಯನಾ ರಾಜೀವ್
|

Updated on: Sep 22, 2026 | 12:04 PM

Share

ನವದೆಹಲಿ, ಸೆಪ್ಟೆಂಬರ್ 22: ಉತ್ತರ ಪ್ರದೇಶದ 10 ಮತ್ತು ಉತ್ತರಾಖಂಡದ 1 ಸ್ಥಾನ ಸೇರಿದಂತೆ ಒಟ್ಟು 11 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಹಾಗೂ ಪಶ್ಚಿಮ ಬಂಗಾಳದ ಒಂದು ಸ್ಥಾನಕ್ಕೆ ಉಪಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ECI) ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದೆ. ನವೆಂಬರ್‌ನಲ್ಲಿ ಹಾಲಿ ಸದಸ್ಯರ ಆರು ವರ್ಷಗಳ ಅವಧಿ ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 16 ರಂದು ಮತದಾನ ಹಾಗೂ ಅದೇ ದಿನ ಸಂಜೆ ಮತ ಎಣಿಕೆ ನಡೆಯಲಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಸಮಾಜವಾದಿ ಪಕ್ಷದ ಹಿರಿಯ ಮುಖಂಡ ರಾಮ್ ಗೋಪಾಲ್ ಯಾದವ್ ಹಾಗೂ ದಿನೇಶ್ ಶರ್ಮಾ ಸೇರಿದಂತೆ ಪ್ರಮುಖರ ಅಧಿಕಾರಾವಧಿ ಮುಕ್ತಾಯವಾಗುತ್ತಿದೆ.

ಸೆಪ್ಟೆಂಬರ್ 29, 2026ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ, ಅಕ್ಟೋಬರ್ 6 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಅಕ್ಟೋಬರ್ 7 ನಾಮ ಪತ್ರ ಪರಿಶೀಲನೆಗೆ ಕೊನೆಯ ದಿನ, ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 9 ಕೊನೆ ದಿನವಾಗಿರುತ್ತದೆ. ಅಕ್ಟೋಬರ್ 16ರ ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಉತ್ತರ ಪ್ರದೇಶದ ಮಾಜಿ ಡಿಸಿಎಂ ದಿನೇಶ್ ಶರ್ಮಾ, ಸಮಾಜವಾದಿ ಪಕ್ಷದ ಪ್ರಮುಖ ಮುಖಂಡ ಪ್ರೊ. ರಾಮ್ ಗೋಪಾಲ್ ಯಾದವ್ ಹಾಗೂ ಬಹುಜನ ಸಮಾಜ ಪಕ್ಷದ ರಾಮ್‌ಜಿ ಗೌತಮ್ ಸೇರಿದಂತೆ ಪ್ರಮುಖ ಸಂಸದರ ಅಧಿಕಾರಾವಧಿ ನವೆಂಬರ್‌ನಲ್ಲಿ ಕೊನೆಗೊಳ್ಳಲಿದೆ. ಉತ್ತರಾಖಂಡದಿಂದ ಬಿಜೆಪಿಯ ನರೇಶ್ ಬನ್ಸಾಲ್ ಹಾಗೂ ರಾಜೀನಾಮೆಯಿಂದ ತೆರವಾದ ಪಶ್ಚಿಮ ಬಂಗಾಳದ ಒಂದು ಸ್ಥಾನಕ್ಕೂ ಇದೇ ವೇಳೆ ಚುನಾವಣೆ ನಡೆಯಲಿದೆ.

ಹರ್ದೀಪ್ ಸಿಂಗ್ ಪುರಿ, ದಿನೇಶ್ ಶರ್ಮಾ, ಅರುಣ್ ಸಿಂಗ್, ಬನ್ವಾರಿ ಲಾಲ್ ವರ್ಮಾ, ಬ್ರಿಜ್ ಲಾಲ್, ನೀರಜ್ ಶೇಖರ್, ಸೀಮಾ ದ್ವಿವೇದಿ ಮತ್ತು ಗೀತಾ ಶಕ್ಯಾ,ರಾಮ್ ಗೋಪಾಲ್ ಯಾದವ್,ರಾಮ್‌ಜಿ ಗೌತಮ್, ನರೇಶ್ ಬನ್ಸಾಲ್, ನಟಿ ಹಾಗೂ ಟಿಎಂಸಿ ಸಂಸದೆ ರುಕ್ಮಿಣಿ ಮಲ್ಲಿಕ್ (ಕೋಯಲ್ ಮಲ್ಲಿಕ್) ರಾಜೀನಾಮೆಯಿಂದ ತೆರವಾದ ಸ್ಥಾನ.

ಮತ್ತಷ್ಟು ಓದಿ: ಬಿಜೆಪಿ ಜೊತೆ ರಾಘವ್ ಚಡ್ಡಾ ಸೇರಿ 7 ಆಪ್ ಸಂಸದರ ವಿಲೀನವನ್ನು ಅಂಗೀಕರಿಸಿದ ರಾಜ್ಯಸಭೆ

ಉತ್ತರ ಪ್ರದೇಶ ವಿಧಾನಸಭೆಯ ಪ್ರಸ್ತುತ ಶಾಸಕರ ಬಲದ ಆಧಾರದ ಮೇಲೆ ಆಡಳಿತಾರೂಢ ಬಿಜೆಪಿ ನೇತೃತ್ವದ ಮೈತ್ರಿಕೂಟ 8 ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಿದೆ. ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷ (ಎಸ್‌ಪಿ) ಉಳಿದ 2 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ. ಉತ್ತರಾಖಂಡದಲ್ಲಿ ಸಂಪೂರ್ಣ ಬಹುಮತ ಹೊಂದಿರುವ ಬಿಜೆಪಿ ಅಲ್ಲಿನ ಏಕೈಕ ಸ್ಥಾನವನ್ನು ಸುಲಭವಾಗಿ ಉಳಿಸಿಕೊಳ್ಳಲಿದ್ದು, ಬಂಗಾಳದ ಸೀಟು ಆಡಳಿತಾರೂಢ ಟಿಎಂಸಿ ಪಾಲಾಗುವ ಸಾಧ್ಯತೆಯಿದೆ.

ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಶಾಸಕರ ಕೊರತೆಯಿಂದಾಗಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ತನ್ನ ಏಕೈಕ ರಾಜ್ಯಸಭಾ ಸ್ಥಾನವನ್ನು ಕಳೆದುಕೊಳ್ಳಲಿದೆ. ಇದರೊಂದಿಗೆ 1989 ರ ನಂತರ ಇದೇ ಮೊದಲ ಬಾರಿಗೆ ಸಂಸತ್ತಿನ ಉಭಯ ಸದನಗಳು (ಲೋಕಸಭೆ, ರಾಜ್ಯಸಭೆ) ಹಾಗೂ ಉತ್ತರ ಪ್ರದೇಶ ವಿಧಾನಮಂಡಲದ ಎರಡೂ ಸದನಗಳು (ವಿಧಾನಸಭೆ, ವಿಧಾನ ಪರಿಷತ್) ಸೇರಿದಂತೆ ದೇಶದ ನಾಲ್ಕೂ ಶಾಸಕಾಂಗ ಸದನಗಳಲ್ಲಿ ಬಿಎಸ್‌ಪಿ ಯಾವುದೇ ಪ್ರಾತಿನಿಧ್ಯವಿಲ್ಲದೆ ಸಂಪೂರ್ಣ ‘ಶೂನ್ಯ’ಕ್ಕೆ ಇಳಿಯಲಿದೆ.

ಉತ್ತರಾಖಂಡ ವಿಧಾನಸಭೆಯಲ್ಲಿ ಬಿಜೆಪಿ ಪ್ರಚಂಡ ಬಹುಮತ ಹೊಂದಿರುವುದರಿಂದ ಅಲ್ಲಿನ ಏಕೈಕ ಸ್ಥಾನವನ್ನು ಬಿಜೆಪಿ ಯಾವುದೇ ಅಡೆತಡೆಗಳಿಲ್ಲದೆ ಸುಲಭವಾಗಿ ತನ್ನಲ್ಲೇ ಉಳಿಸಿಕೊಳ್ಳಲಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಭಾರಿ ಬಹುಮತ ಹೊಂದಿರುವುದರಿಂದ ಈ ಬೈ-ಪೋಲ್ ಸೀಟು ಸುಲಭವಾಗಿ ಮತ್ತೆ ಟಿಎಂಸಿ ಪಾಲಾಗಲಿದೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಬಿಜೆಪಿ ಮತ್ತೆ ಉತ್ತರ ಪ್ರದೇಶದಿಂದಲೇ ಕಣಕ್ಕಿಳಿಸುವ ಸಾಧ್ಯತೆಯಿದ್ದು, ಉಳಿದ ಸ್ಥಾನಗಳಿಗೆ ಪಕ್ಷದ ಹಿರಿಯ ಸಂಘಟನಾ ನಾಯಕರು ಅಥವಾ ಪ್ರಾದೇಶಿಕ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಮುಖಗಳಿಗೆ ಮಣೆ ಹಾಕುವ ನಿರೀಕ್ಷೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ