AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಫಲಾಪೇಕ್ಷೆ ನಮಗೆ ಇಲ್ಲ, ನಾನು ಪ್ರತ್ಯೇಕವಾಗಿಯೇ ಗುರುತಿಸಿಕೊಳ್ಳುತ್ತೇನೆ -ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ವೀರೇಂದ್ರ ಹೆಗ್ಗಡೆ ಸುದ್ದಿಗೋಷ್ಠಿ

ನಾವು ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಗ್ರಾಮೀಣಾಭಿವೃದ್ಧಿ, ರೂಟ್ ಸೆಟ್ ಸಂಸ್ಥೆ ಸ್ಥಾಪನೆ ಮಾಡಿದ್ದೇವೆ. ಗೌರವ ಪ್ರಶಸ್ತಿಗಳಿಗೆ ಮೊದಲು ಅರ್ಜಿ ಹಾಕಬೇಕಿತ್ತು, ದುಂಬಾಲು ಬೀಳಬೇಕಿತ್ತು. ಈಗ ಅಂತಸ್ತು, ಜಾತಿ ಇಲ್ಲದೆ ಆಯ್ಕೆ ಮಾಡಲಾಗುತ್ತಿದೆ.

ಯಾವುದೇ ಫಲಾಪೇಕ್ಷೆ ನಮಗೆ ಇಲ್ಲ, ನಾನು ಪ್ರತ್ಯೇಕವಾಗಿಯೇ ಗುರುತಿಸಿಕೊಳ್ಳುತ್ತೇನೆ -ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ವೀರೇಂದ್ರ ಹೆಗ್ಗಡೆ ಸುದ್ದಿಗೋಷ್ಠಿ
ಡಾ. ಡಿ ವೀರೇಂದ್ರ ಹೆಗ್ಗಡೆ
TV9 Web
| Updated By: ಆಯೇಷಾ ಬಾನು|

Updated on: Jul 21, 2022 | 6:42 PM

Share

ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು(Veerendra Heggade) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿ ಗೋಷ್ಠಿ ನಡೆಸಿದ್ದಾರೆ. ಸಂಸತ್ ದೇಶದ ಆಗುಹೋಗುಗಳನ್ನು ಚರ್ಚಿಸುವ ರಾಜ್ಯಸಭೆಯ ಗೌರವ ಸದಸ್ಯನಾಗಿ ಹೋಗುವ ಅವಕಾಶ ಸಿಕ್ಕಿದೆ. ಸಂಸತ್ ಭವನವನ್ನು ನೋಡಿ ತುಂಬಾ ಗೌರವ ಬಂದಿದೆ. ಭಕ್ತರು, ಅಭಿಮಾನಿಗಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ, ಸಂತೋಷಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ನಾವು ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಗ್ರಾಮೀಣಾಭಿವೃದ್ಧಿ, ರೂಟ್ ಸೆಟ್ ಸಂಸ್ಥೆ ಸ್ಥಾಪನೆ ಮಾಡಿದ್ದೇವೆ. ಗೌರವ ಪ್ರಶಸ್ತಿಗಳಿಗೆ ಮೊದಲು ಅರ್ಜಿ ಹಾಕಬೇಕಿತ್ತು, ದುಂಬಾಲು ಬೀಳಬೇಕಿತ್ತು. ಈಗ ಅಂತಸ್ತು, ಜಾತಿ ಇಲ್ಲದೆ ಆಯ್ಕೆ ಮಾಡಲಾಗುತ್ತಿದೆ. ನಮಗೆ ಸಂತೋಷವಾಗುತ್ತಿದೆ. ಯಾವ ಮುನ್ಸೂಚನೆ ಇಲ್ಲದೆ ನಾಮನಿರ್ದೇಶನ ಮಾಡಿದ್ದಾರೆ. ನಾನು ಯಾವುದೇ ಪಕ್ಷಕ್ಕೂ ಹೊಂದಿಕೊಳ್ಳುವುದಿಲ್ಲ. ನಾನು ಪ್ರತ್ಯೇಕವಾಗಿಯೇ ಗುರುತಿಸಿಕೊಳ್ಳುತ್ತೇನೆ. ಯಾವುದೇ ಫಲಾಪೇಕ್ಷೆ ನಮಗೆ ಇಲ್ಲ. ಮೊದಲನೆದಾಗಿ ಇಂದು ರಾಜ್ಯಸಭೆಯ ಗಾಳಿ ಹೊಂದಿಕೊಂಡು ಬಂದಿದ್ದೇನೆ. ಮೋದಿಯವ್ರನ್ನು ಭೇಟಿಯಾಗಿ ಪ್ರಸಾದ ಕೊಟ್ಟು ಬಂದಿದ್ದೇನೆ ಎಂದು ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಸುದ್ದಿಗೋಷ್ಠಿ ನಡೆಸಿ ತಮ್ಮ ಸಂತಸವನ್ನು ಹೊರ ಹಾಕಿದ್ದಾರೆ.

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿ ಭೇಟಿ ಮಾಡಿದ ಪದ್ಮ ವಿಭೂಷಣ ವೀರೇಂದ್ರ ಹೆಗ್ಗಡೆ

ದೆಹಲಿ: ರಾಜ್ಯಸಭೆ ಸದಸ್ಯರಾಗಿ(Rajya Sabha Member) ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು (Padma Vibhushan Veerendra Heggade) ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ನಂತರ ನವದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ(PM Narendra Modi) ಯವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿಯವರನ್ನು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಉಪಸ್ಥಿತರಿದ್ದರು.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?