ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಬಗ್ಗೆ ಪ್ರಧಾನಿ ಮಾತಾಡಲೇ ಇಲ್ಲ: ಮಲ್ಲಿಕಾರ್ಜುನ ಖರ್ಗೆ ಅಸಮಧಾನ

ಪ್ರಧಾನಿ ನರೇಂದ್ರ ಮೋದಿ ದುರಹಂಕಾರದಿಂದ ವರ್ತಿಸುತ್ತಿದ್ದಾರೆ. ರೈತರನ್ನು ಒಡೆದು ಆಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಬಗ್ಗೆ ಪ್ರಧಾನಿ ಮಾತಾಡಲೇ ಇಲ್ಲ: ಮಲ್ಲಿಕಾರ್ಜುನ ಖರ್ಗೆ ಅಸಮಧಾನ
ಮಲ್ಲಿಕಾರ್ಜುನ ಖರ್ಗೆ
Follow us
TV9 Web
| Updated By: ganapathi bhat

Updated on:Apr 06, 2022 | 8:10 PM

ದೆಹಲಿ: ನೂತನ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಿಂಪಡೆಯುವ ನಿರೀಕ್ಷೆ ಇತ್ತು. ಆದರೆ, ಕಾಯ್ದೆ ಹಿಂಪಡೆಯುವ ಬಗ್ಗೆ ಪ್ರಧಾನಿ ಮಾತನಾಡಲೇ ಇಲ್ಲ ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ವಿಚಾರವಾಗಿ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ರೈತರೊಂದಿಗೆ ಚರ್ಚೆಗೆ ಸಿದ್ಧ ಎನ್ನುತ್ತಿರುವ ಸರ್ಕಾರ ವಾಸ್ತವದಲ್ಲಿ ಏನೂ ಚರ್ಚಿಸುತ್ತಿಲ್ಲ. ಕೃಷಿ ತಿದ್ದುಪಡಿ ಕಾಯ್ದೆಗಳಿಂದ ರೈತರಿಗೆ ತೊಂದರೆ ಇದೆ. ರೈತರ ಜತೆ ಕೇಂದ್ರ ಸರ್ಕಾರ 12 ಸಭೆಗಳನ್ನು ಮಾಡಿದೆ. ಆದರೆ, ಇದುವರೆಗೆ ಒಂದು ಸಭೆ ಕೂಡ ಸಫಲವಾಗಿಲ್ಲ ಎಂದು ಖರ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇಂದು ತಮ್ಮ ಭಾಷಣದಲ್ಲಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಬಗ್ಗೆ ಹೇಳಿಕೆ ನೀಡುವ ನಿರೀಕ್ಷೆ ಇತ್ತು. 75 ದಿನದಿಂದ ರಸ್ತೆ ಮೇಲಿರುವ ರೈತರಿಗೂ ಈ ನಿರೀಕ್ಷೆ ಇತ್ತು. ಸದನದ ಮೂಲಕ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವ ಆಶ್ವಾಸನೆಯನ್ನು ಮೋದಿ ನೀಡಬೇಕಿತ್ತು. ಆದರೆ ಪ್ರಧಾನಿ ದುರಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ಮೋದಿ ಭಾಷಣವನ್ನು ಖರ್ಗೆ ಖಂಡಿಸಿದ್ದಾರೆ.

ಪ್ರಧಾನಿ ರೈತರನ್ನು ಒಡೆದು ಆಳುವ ಪ್ರಯತ್ನ ಮಾಡುತ್ತಿದ್ದಾರೆ. ಇವರು ಯಾವುದೇ ಸಭೆಗಳನ್ನು ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಕೊರೊನಾ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ಈ ಬಗ್ಗೆ ಆಸ್ಟ್ರೇಲಿಯಾದ ಖಾಸಗಿ ಸಂಸ್ಥೆಯೊಂದು ಮಾಡಿರುವ ಸರ್ವೆಯಲ್ಲಿ, ಏಷ್ಯಾದಲ್ಲಿಯೇ ಭಾರತದಲ್ಲಿ ಕೆಟ್ಟದಾಗಿ ಪರಿಸ್ಥಿತಿ ನಿಭಾಯಿಸಲಾಗಿದೆ ಎಂದು ಹೇಳಲಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತ ಬಹಳಷ್ಟು ಹಿಂದಿದೆ. ಈಗ ಮೋದಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ಖರ್ಗೆ ಮೋದಿ ನಡೆಯ ವಿರುದ್ಧ ಹರಿಹಾಯ್ದಿದ್ದಾರೆ.

ಚೀನಾದವರು ಹಳ್ಳಿ ನಿರ್ಮಿಸಿದ್ದಾರೆ, ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ. ಚೀನಾ ಬಗ್ಗೆ ಪ್ರಧಾನಿ ಏನೂ ಮಾತನಾಡಿಲ್ಲ ಎಂದು ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

MSP ಇತ್ತು, MSP ಇದೆ ಮತ್ತು MSP ಮುಂದೆಯೂ ಇರಲಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ

Published On - 7:53 pm, Mon, 8 February 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ