AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Waqf Amendment Bill: ವಕ್ಫ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲೂ ಅನುಮೋದನೆ, ಕಾನೂನಿನ ರೂಪ ಪಡೆಯಲು ಇನ್ನೊಂದೇ ಹೆಜ್ಜೆ ಬಾಕಿ

ವಕ್ಫ್ ತಿದ್ದುಪಡಿ ಮಸೂದೆ: ರಾಜ್ಯಸಭೆಯಲ್ಲಿ ಕೂಡ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ದೊರೆತಿದೆ. ವಿರೋಧ ಪಕ್ಷಗಳು ಬಲವಾಗಿ ವಿರೋಧಿಸಿ, ಸಂವಿಧಾನಬಾಹಿರ ಎಂದು ಕರೆದವು. ಆದರೆ ಸರ್ಕಾರವು ಮುಸ್ಲಿಂ ಸಮುದಾಯದ ಹಿತದೃಷ್ಟಿಯಿಂದ ಇದನ್ನು ಮಂಡಿಸಿದೆ ಎಂದು ಬಿಜೆಪಿ ಪ್ರತಿಪಾದಿಸಿತು. ಮಸೂದೆಯಲ್ಲಿನ ನ್ಯೂನತೆಗಳನ್ನು ಕಾಂಗ್ರೆಸ್ ಎತ್ತಿ ತೋರಿಸಿದರೆ, ವಿರೋಧ ಪಕ್ಷವು ಮತ ​​ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ತಿರುಗೇಟು ನೀಡಿತು. ಕೊನೆಯಲ್ಲಿ ಮಸೂದೆಯನ್ನು ಅಂಗೀಕರಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಮಸೂದೆಯು ಇನ್ನು ರಾಷ್ಟ್ರಪತಿಗಳ ಅನುಮೋದನೆಗೆ ಹೋಗಲಿದ್ದು, ಅವರ ಸಹಿಯ ನಂತರ ಕಾನೂನಿನ ರೂಪ ಪಡೆಯಲಿದೆ.

Waqf Amendment Bill: ವಕ್ಫ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲೂ ಅನುಮೋದನೆ, ಕಾನೂನಿನ ರೂಪ ಪಡೆಯಲು ಇನ್ನೊಂದೇ ಹೆಜ್ಜೆ ಬಾಕಿ
ರಾಜ್ಯಸಭೆಯಲ್ಲೂ ವಕ್ಫ್ ತಿದ್ದುಪಡಿ ವಿಧೇಯಕ ಅಂಗೀಕಾರImage Credit source: PTI
Ganapathi Sharma
|

Updated on:Apr 04, 2025 | 12:21 PM

Share

ನವದೆಹಲಿ, ಏಪ್ರಿಲ್ 4: ರಾಜ್ಯಸಭೆಯಲ್ಲಿಯೂ (Rajya Sabha) ವಕ್ಫ್ ತಿದ್ದುಪಡಿ ಮಸೂದೆಗೆ (Waqf Amendment Bill) ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ (NDA Govt) ಯಶಸ್ವಿಯಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾದವು.ಇನ್ನು ಮಸೂದೆ ಕಾನೂನಾಗಲು ಕೇವಲ ಒಂದು ಹೆಜ್ಜೆ ಬಾಕಿ ಇದೆ. ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ. ರಾಜ್ಯಸಭೆಗೂ ಮುನ್ನ, ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ, ಸುಮಾರು 12 ಗಂಟೆಗಳ ಚರ್ಚೆಯ ನಂತರ, ಸರ್ಕಾರವು ಅದನ್ನು ಅಂಗೀಕರಿಸುವಲ್ಲಿ ಯಶಸ್ವಿಯಾಗಿತ್ತು. ಲೋಕಸಭೆಯಲ್ಲಿ ಈ ಮಸೂದೆಯ ಪರವಾಗಿ 288 ಮತಗಳು ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾಗಿದ್ದವು.

ರಾಜ್ಯಸಭೆಯಲ್ಲಿ ಚರ್ಚೆಯ ಸಮಯದಲ್ಲಿ, ವಿರೋಧ ಪಕ್ಷಗಳು ಮಸೂದೆಯನ್ನು ಬಲವಾಗಿ ವಿರೋಧಿಸಿದವು. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಮಸೂದೆಯನ್ನು ಅಸಾಂವಿಧಾನಿಕ ಎಂದು ಕರೆದರು.

ಮುಸ್ಲಿಮರಿಗೆ ಕಿರುಕುಳ ನೀಡಲು ವಕ್ಫ್ ಮಸೂದೆ: ಖರ್ಗೆ

ವಕ್ಫ್ ಮಸೂದೆಯಲ್ಲಿ ಹಲವು ನ್ಯೂನತೆಗಳು ಮತ್ತು ದೋಷಗಳಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮುಸ್ಲಿಂ ಸಮುದಾಕ್ಕೆ ಕಿರುಕುಳ ನೀಡಲು ಸರ್ಕಾರ ಈ ಮಸೂದೆಯನ್ನು ತಂದಿದೆ. ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಇದ್ದು, ಅದನ್ನು ಬದಲಾಯಿಸಬಹುದು. ಹೊಸ ಮಸೂದೆಯ ಅಗತ್ಯವಿಲ್ಲ. ಮಸೂದೆಯನ್ನು ಹಿಂಪಡೆಯಬೇಕು ಎಂದು ಖರ್ಗೆ ಆಗ್ರಹಿಸಿದರು.

ಇದನ್ನೂ ಓದಿ
Image
ರಾಜ್ಯಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡಿಸಿದ ಕೇಂದ್ರ ಸರ್ಕಾರ
Image
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
Image
ವಕ್ಫ್ ವಿಷಯದಲ್ಲಿ ವಿಪಕ್ಷಗಳಿಂದ ದೇಶ ಇಬ್ಭಾಗಿಸುವ ಪ್ರಯತ್ನ; ಅಮಿತ್ ಶಾ ಆರೋಪ
Image
ಸಂಸತ್ತಿನ ಕಟ್ಟಡವನ್ನೂ ವಕ್ಫ್ ಆಸ್ತಿ ಎನ್ನುತ್ತಿದ್ದರು;ಕಿರಣ್ ರಿಜಿಜು ಟೀಕೆ

ಸಮಾಜವಾದಿ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸದಸ್ಯ ರಾಮ್ ಗೋಪಾಲ್ ಯಾದವ್ ಕೂಡ ವಕ್ಫ್ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಅದನ್ನು ವಿರೋಧಿಸಿದರು. ಸರ್ಕಾರ ಉದಾರವಾದಿಯಾಗಿ ವರ್ತಿಸಬೇಕು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಪರಿಗಣಿಸಬೇಕು. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಬಹಳ ದೊಡ್ಡದಾಗಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಅನ್ಯಾಯವಾಗುತ್ತಿದೆ ಎಂದು ಜನರು ಭಾವಿಸಿದರೆ, ಮಸೂದೆಯಿಂದ ಪ್ರಯೋಜನವಾಗದು ಎಂದು ಅವರು ಹೇಳಿದರು.

ಮುಸ್ಲಿಮರ ಕಲ್ಯಾಣಕ್ಕಾಗಿ ವಕ್ಫ್ ಮಸೂದೆ: ವಿರೋಧ ಪಕ್ಷಗಳಿಗೆ ಸರ್ಕಾರ ತಿರುಗೇಟು

ವಿರೋಧ ಪಕ್ಷದ ಆರೋಪಗಳಿಗೆ ಬಿಜೆಪಿ ಬಲವಾದ ತಿರುಗೇಟು ನೀಡಿತು. ವಿಪಕ್ಷಗಳ ವಿರೋಧಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಸುಧಾಂಶು ತ್ರಿವೇದಿ, ಸರ್ಕಾರ ಈ ಮಸೂದೆ ವಿಚಾರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದೆ ಮತ್ತು ಮುಸ್ಲಿಂ ಸಮುದಾಯದ ಕಲ್ಯಾಣಕ್ಕಾಗಿ ಇದನ್ನು ಮಂಡಿಸಲಾಗಿದೆ ಎಂದು ಹೇಳಿದರು. ದೇಶದಲ್ಲಿ ಸುನ್ನಿ ಮತ್ತು ಶಿಯಾ ವಕ್ಫ್ ಮಂಡಳಿಗಳು ಏಕೆ ಪ್ರತ್ಯೇಕವಾಗಿವೆ ಮತ್ತು ತಾಜ್ ಮಹಲ್ ಮೇಲೆ ವಕ್ಫ್ ಹಕ್ಕು ಸಾಧಿಸುವುದು ಏಕೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡಿಸಿದ ಕಿರಣ್ ರಿಜಿಜು

ನಾವು ಯಾವಾಗಲೂ ಮುಸ್ಲಿಂ ಸಮುದಾಯದ ಕಲ್ಯಾಣದ ಬಗ್ಗೆ ಮಾತನಾಡುತ್ತೇವೆ ಎಂದು ಬಿಜೆಪಿ ಸಂಸದರು ಹೇಳಿದರು. ಸರ್ಕಾರ ಬಡ ಮುಸ್ಲಿಮರ ಪರವಾಗಿ ನಿರ್ಧಾರ ತೆಗೆದುಕೊಂಡಿದೆ, ಆದರೆ ಮೂಲಭೂತವಾದಿಗಳು ಮತ್ತು ಮತ ಬ್ಯಾಂಕ್ ಗುತ್ತಿಗೆದಾರರು ತಮ್ಮ ಸ್ವಾರ್ಥಕ್ಕಾಗಿ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:29 am, Fri, 4 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ