ಆಧಾರ್, ವೋಟರ್ ಐಡಿ ಲಿಂಕ್ ಮಾಡುವ ಚುನಾವಣಾ ಸುಧಾರಣಾ ಮಸೂದೆಗೆ ರಾಜ್ಯಸಭೆ ಅನುಮೋದನೆ

Election Laws Amendment Bill 2021 ಬಿಜೆಪಿ, ಜೆಡಿ (ಯು), ವೈಎಸ್‌ಆರ್‌ಸಿಪಿ, ಎಐಎಡಿಎಂಕೆ, ಬಿಜೆಡಿ ಮತ್ತು ಟಿಎಂಸಿ-ಎಂ ಸದಸ್ಯರು ಮಸೂದೆ ಬೆಂಬಲಿಸಿದ ನಂತರ, ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ರಾಜ್ಯಸಭೆ ಅನುಮೋದಿಸಿತು.

ಆಧಾರ್, ವೋಟರ್ ಐಡಿ ಲಿಂಕ್ ಮಾಡುವ ಚುನಾವಣಾ ಸುಧಾರಣಾ ಮಸೂದೆಗೆ ರಾಜ್ಯಸಭೆ ಅನುಮೋದನೆ
ರಾಜ್ಯಸಭೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 21, 2021 | 6:42 PM

ದೆಹಲಿ: ಮತದಾರರ ಡೇಟಾವನ್ನು ಆಧಾರ್ (Aadhaar) ಜತೆ  ಜೋಡಿಸುವ ಮತ್ತು ಇತರ ಚುನಾವಣಾ ಸುಧಾರಣೆಗಳನ್ನು ತರುವ ಮಸೂದೆಯನ್ನು(Election Laws Amendment Bill 2021) ಲೋಕಸಭೆ (Loksabha) ಅಂಗೀಕರಿಸಿದ ಒಂದು ದಿನದ ನಂತರ ಮಂಗಳವಾರ ಪ್ರತಿಪಕ್ಷಗಳ ವಾಕ್‌ಔಟ್ ನಡುವೆ ಧ್ವನಿ ಮತದ ಮೂಲಕ ರಾಜ್ಯಸಭೆ (Rajya Sabha) ಅಂಗೀಕರಿಸಿದೆ.  ಬಿಜೆಪಿ, ಜೆಡಿ (ಯು), ವೈಎಸ್‌ಆರ್‌ಸಿಪಿ, ಎಐಎಡಿಎಂಕೆ, ಬಿಜೆಡಿ ಮತ್ತು ಟಿಎಂಸಿ-ಎಂ ಸದಸ್ಯರು ಮಸೂದೆ ಬೆಂಬಲಿಸಿದ ನಂತರ, ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ 2021ಯನ್ನು ರಾಜ್ಯಸಭೆ ಅನುಮೋದಿಸಿತು. ಇದು ಮತದಾರರ ಪಟ್ಟಿಯಿಂದ ನಕಲಿ ಮತದಾರರನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ವಿಪಕ್ಷ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎಡಪಕ್ಷಗಳು, ಡಿಎಂಕೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರತಿಭಟಿಸಿ ವಾಕ್ ಔಟ್ ಮಾಡಿದರು. ಲೋಕಸಭೆಯಲ್ಲಿ ಸಂಕ್ಷಿಪ್ತ ಚರ್ಚೆಯ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು ಮತ್ತು ಪ್ರತಿಪಕ್ಷಗಳ ಬೇಡಿಕೆಯ ನಡುವೆ ಅದನ್ನು ಸ್ಥಾಯಿ ಸಮಿತಿಗೆ ಕಳುಹಿಸಲಾಯಿತು. ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ, 2021 ಗುರುತನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಮತದಾರರಾಗಿ ನೋಂದಾಯಿಸಲು ಬಯಸುವ ಜನರ ಆಧಾರ್ ಸಂಖ್ಯೆಯನ್ನು ಪಡೆಯಲು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಅವಕಾಶ ನೀಡುತ್ತದೆ.

ಮತದಾರರ ಪಟ್ಟಿಯಲ್ಲಿನ ನಮೂದುಗಳ ದೃಢೀಕರಣದ ಉದ್ದೇಶಕ್ಕಾಗಿ ಮತದಾರರ ಪಟ್ಟಿಯಲ್ಲಿ ಈಗಾಗಲೇ ಸೇರ್ಪಡೆಗೊಂಡಿರುವ ವ್ಯಕ್ತಿಗಳಿಂದ ಆಧಾರ್ ಸಂಖ್ಯೆಯನ್ನು ಪಡೆಯಲು ಮತ್ತು ಮತದಾರರ ಪಟ್ಟಿಯಲ್ಲಿ ಅದೇ ವ್ಯಕ್ತಿಯ ಹೆಸರನ್ನು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳ ಅಥವಾ ಒಂದೇ ಕ್ಷೇತ್ರದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ನೋಂದಾಯಿಸಲು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಅವಕಾಶ ನೀಡಲು ಮಸೂದೆಯು ಪ್ರಯತ್ನಿಸುತ್ತದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ, 2021 ಅನ್ನು ಯಾವುದೇ ಚರ್ಚೆ ಇಲ್ಲದೆ ಅಂಗೀಕರಿಸಲಾಗಿದೆ. ಇದು ಪ್ರಜಾಪ್ರಭುತ್ವದ ಅಣಕ ಎಂದಿದ್ದಾರೆ.

“ಮೋದಿ ಸರ್ಕಾರವು ಯಾವುದೇ ವಿಚಾರ ವಿನಿಮಯ ಅಥವಾ ಚರ್ಚೆಯಿಲ್ಲದೆ ಚುನಾವಣಾ ಕಾನೂನು 2021 ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ಮಸೂದೆಯು ಎಸ್‌ಸಿ ಪುಟ್ಟಸ್ವಾಮಿ ತೀರ್ಪಿನ ಉಲ್ಲಂಘನೆಯಾಗಿದೆ ಮತ್ತು ಸಾಮೂಹಿಕ ಹಕ್ಕು ನಿರಾಕರಣೆಗೆ ಕಾರಣವಾಗುತ್ತದೆ. ಯಾವುದೇ ಚರ್ಚೆ ಅಥವಾ ಪರಿಶೀಲನೆಯಿಲ್ಲದೆ ಅದನ್ನು ಹೇಗೆ ಅಂಗೀಕರಿಸಬಹುದು? ಇದು ನಮ್ಮ ಪ್ರಜಾಪ್ರಭುತ್ವದ ಅಣಕವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಮೋದಿ ಸರ್ಕಾರವು ಯಾವುದೇ ವಿಚಾರ ವಿನಿಮಯ ಅಥವಾ ಚರ್ಚೆಯಿಲ್ಲದೆ ಚುನಾವಣಾ ಕಾನೂನು 2021 ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ಮಸೂದೆಯು ಎಸ್‌ಸಿ ಪುಟ್ಟಸ್ವಾಮಿ ತೀರ್ಪಿನ ಉಲ್ಲಂಘನೆಯಾಗಿದೆ ಮತ್ತು ಸಾಮೂಹಿಕ ಹಕ್ಕು ನಿರಾಕರಣೆಗೆ ಕಾರಣವಾಗುತ್ತದೆ. ಯಾವುದೇ ಚರ್ಚೆ ಅಥವಾ ಪರಿಶೀಲನೆಯಿಲ್ಲದೆ ಅದನ್ನು ಹೇಗೆ ಅಂಗೀಕರಿಸಬಹುದು? ಇದು ನಮ್ಮ ಪ್ರಜಾಪ್ರಭುತ್ವದ ಅಣಕವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಉದ್ದೇಶಿತ ಬದಲಾವಣೆಗಳು ಚುನಾವಣಾ ವ್ಯವಸ್ಥೆಗೆ ಹೇಗೆ ಪ್ರಯೋಜನವನ್ನು ನೀಡುತ್ತವೆ ಎಂಬುದರ ವಿವರವಾದ ಅವಲೋಕನವನ್ನು ನೀಡಿರುವುದರಿಂದ ಈ ಸುಧಾರಣೆಗಳ ಅಗತ್ಯವಿದೆ ಎಂದು ಕೇಂದ್ರ ಮಂಗಳವಾರ ಹೇಳಿದೆ.  ಮತದಾರರ ಪಟ್ಟಿಯಲ್ಲಿ ನೋಂದಣಿಯನ್ನು ಮತದಾರರಾಗಿ ನೋಂದಾಯಿಸಲು ಅರ್ಹರಾಗಿರುವ ವ್ಯಕ್ತಿಯ ಅರ್ಜಿಯ ಆಧಾರದ ಮೇಲೆ ಮಾಡಲಾಗುತ್ತದೆ ಎಂದು ಶಾಸನದ ರಚನೆಯೊಂದಿಗೆ ನಿಕಟ ಸಂಬಂಧ ಹೊಂದಿರುವ ಜನರು ಹೇಳಿದರು. ಮಸೂದೆಯ ನಿಬಂಧನೆಯ ಅಡಿಯಲ್ಲಿ, ಹೊಸ ಅರ್ಜಿದಾರರು ಗುರುತಿನ ಉದ್ದೇಶಕ್ಕಾಗಿ ಅರ್ಜಿಯ ಜೊತೆಗೆ ಆಧಾರ್ ಸಂಖ್ಯೆಯನ್ನು ಸ್ವಯಂಪ್ರೇರಣೆಯಿಂದ ಒದಗಿಸಬಹುದು.

ಆಧಾರ್ ಸಂಖ್ಯೆಯನ್ನು ಒದಗಿಸಿಲ್ಲ ಎಂಬ ಕಾರಣಕ್ಕೆ ಯಾವುದೇ ಅರ್ಜಿಯನ್ನು ತಿರಸ್ಕರಿಸಲಾಗುವುದಿಲ್ಲ ಎಂದು ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ನಂತರ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಸೋಮವಾರ ಹೇಳಿದ್ದಾರೆ.

ಇದು ಮತದಾರರ ಪಟ್ಟಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ ಮತ್ತು ಅವರು ಸಾಮಾನ್ಯವಾಗಿ ವಾಸಿಸುವ ಸ್ಥಳದಲ್ಲಿ ಮತದಾರರ ನೋಂದಣಿಯನ್ನು ಸುಲಭಗೊಳಿಸುತ್ತದೆ. ಸೋಮವಾರ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ 2021 ಅನ್ನು ಕಾನೂನು ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಮಂಡಿಸಿದ ಕೆಲವೇ ಗಂಟೆಗಳ ನಂತರ ಧ್ವನಿ ಮತದಿಂದ ಅಂಗೀಕರಿಸಲಾಯಿತು.

ಇದನ್ನೂ ಓದಿ:  ವಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ಚುನಾವಣಾ ಕಾನೂನುಗಳ ತಿದ್ದುಪಡಿ ಮಸೂದೆ ಅಂಗೀಕಾರ

Published On - 5:43 pm, Tue, 21 December 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್